Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಹಸೀಲ್ದಾರ್ ಗೆ 60 ಸಾವಿರ ದಂಡ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾರ್ವಜನಿಕರು ಮಾಹಿತಿ ಕೋರಿ ಸಲ್ಲಿಸಿದ ಅರ್ಜಿಗಳಿಗೆ ಸಕಾಲದಲ್ಲಿ ಮಾಹಿತಿ ನೀಡದ ಮಾಲೂರು ತಾಲೂಕು ತಹಸೀಲ್ದಾರರಾದ ರೂಪ ಅವರಿಗೆ ಕರ್ನಾಟಕ ಮಾಹಿತಿ ಆಯೋಗದ ಪೀಠ ಸಂಖ್ಯೆ-5 ರಲ್ಲಿ ಪ್ರತ್ಯೇಕ ಮೂರು ಪ್ರಕರಣಗಳಿಂದ ಒಟ್ಟು 60 ಸಾವಿರ ರೂ.ಗಳ ದಂಡ ವಿಧಿಸಲಾಗಿದೆ.

ಎರಡು ಪ್ರಕರಣಗಳಲ್ಲಿ ತಲಾ 25 ಸಾವಿರ ರೂ. ಹಾಗೂ ಒಂದು ಪ್ರಕರಣದಲ್ಲಿ 10 ಸಾವಿರ ರೂ.ಗಳ   ದಂಡ ವಿಧಿಸಿ ಕರ್ನಾಟಕ ಮಾಹಿತಿ ಆಯೋಗದ ಪೀಠ -5 ರ ರಾಜ್ಯ ಮಾಹಿತಿ ಆಯುಕ್ತ ರಾಜಶೇಖರ ಎಸ್ ಅವರು ಆದೇಶ ಮಾಡಿದ್ದಾರೆ.

ಮಾಹಿತಿ ಆಯೋಗದ ಆದೇಶ ಇದ್ದರೂ ಸಹ ಮಾಹಿತಿ ನೀಡದೇ ನಿರ್ಲಕ್ಷ್ಯ ತೋರಿಸಿರುವುದು ಹಾಗೂ ವಿಚಾರಣೆಗೆ ಗೈರು ಹಾಜರಾಗಿದ್ದರಿಂದ ದಂಡ ವಿಧಿಸಿದ್ದು, ವೇತನದಲ್ಲಿ ಒಂದೇ ಬಾರಿಗೆ ಕಟಾವು ಮಾಡಿ ಆಯೋಗದ ಖಾತೆಗೆ ತುಂಬುವಂತೆ ಕೋಲಾರ ಸಹಾಯಕ ಆಯುಕ್ತರು ಹಾಗೂ ಕೋಲಾರ ಜಿಲ್ಲಾಧಿಕಾರಿ ಅವರಿಗೆ ನಿರ್ದೇಶನ ನೀಡಿದ್ದಾರೆ.

ಮಾಲೂರು ತಾಲೂಕಿನ ಭೈರತ್ನಹಳ್ಳಿಯ ವಿಜಯಕುಮಾರ್ ಬಿಎಂ ಅವರು ಬ್ಯಾಟರಾಯನಹಳ್ಳಿ ಗ್ರಾಮದ ಸರ್ವೆ ನಂ 5 ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಕೋರಿದ್ದರು. ಆದರೆ ಮಾಲೂರು ತಹಸೀಲ್ದಾರ್ ರೂಪ ಅವರು ಯಾವುದೇ ದಾಖಲೆಗಳನ್ನು ನೀಡದೇ ಆಯೋಗದ ಆದೇಶವನ್ನು ಗಾಳಿಗೆ ತೂರಿದ್ದರಿಂದ 25 ಸಾವಿರ ರೂ. ದಂಡ ಹಾಕಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಮಾಲೂರು ತಾಲೂಕಿನ ಪುರುಷನಹಳ್ಳಿ ಗ್ರಾಮದ ರಮೇಶ್ ಕೆ. ಅವರು ತಮ್ಮ ಜಮೀನು ಸರ್ವೇ ನಂ.78 ಪೋಡಿ ಆಗಿದ್ದು ಹೊಸ ಸರ್ವೇ ನಂಬರ್ ಪ್ರಕಾರ ಆಕಾರ್ ಬಂದ್, ಹಿಸ್ಸಾ ಟಿಪ್ಪಣ್ಣಿ ಹಾಗೂ ಇತರೆ ದಾಖಲೆಗಳನ್ನು ಕೋರಿದ್ದರು. ಆದರೆ ಯಾವುದೇ ಮಾಹಿತಿ ನೀಡಿರಲಿಲ್ಲ. ಆಯೋಗದಿಂದ ಕಾರಣ ಕೇಳಿ ನೋಟಿಸ್ ಜಾರಿಯಾಗಿದ್ದರೂ ಮೂರು ವಿಚಾರಣೆಗೆ ಸತತ ಗೈರು ಹಾಜರಾಗಿದ್ದರು. ಆದ್ದರಿಂದ ಈ ಪ್ರಕರಣದಲ್ಲಿ 25 ಸಾವಿರ ರೂ. ದಂಡ ವಿಧಿಸಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಬೆಂಗಳೂರು ಕಾಮಾಕ್ಷಿಪಾಳ್ಯದ ಮಂಜುನಾಥ್ ಟಿ. ನಾಯಕ್ ಅವರು ಮಾಲೂರು ತಾಲೂಕಿನ ಚನ್ನಿಗರಾಯಪುರದ ಸರ್ವೇ ನಂ 6 ರ ಸಾಗುವಳಿ ಚೀಟಿ ಹಾಕು ಇತರೆ ದಾಖಲೆ ಕೋರಿದ್ದರು. ಈ ಪ್ರಕರಣದಲ್ಲಿಯೂ ಯಾವುದೇ ದಾಖಲೆ ನೀಡದೆ ವಿಚಾರಣೆಗೂ ಗೈರು ಹಾಜರಾಗಿದ್ದರಿಂದ 10 ಸಾವಿರ ರೂ. ದಂಡ ವಿಧಿಸಿ ಆದೇಶ ಮಾಡಲಾಗಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ