Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

600 ಕೋಟಿ ವೆಚ್ಚದ ಅನುಭವ ಮಂಟಪ ಮುಂದಿನ ವರ್ಷ ಲೋಕಾರ್ಪಣೆ-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಮ್ಮ ಸರ್ಕಾರ ಆರಂಭಿಸಿದ
600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಆಯೋಜಿಸಿದ್ದ "ಬಸವ ಜಯಂತಿ-2025" "ನಮ್ಮ ನಡೆ ಅನುಭವ ಮಂಟಪದ ಕಡೆ" ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾನಾಡಿದರು.

ಸಕಲ ವೃತ್ತಿಗಳೂ ಪವಿತ್ರ ಎನ್ನುವ ಮಹಾನ್ ಮಾನವೀಯ ಸಂದೇಶವನ್ನು ಜಗತ್ತಿಗೆ ನೀಡಿದ ಬಸವಣ್ಣನವರು ಕ್ರಾಂತಿಪುರುಷ ಮಾತ್ರವಲ್ಲ, ವಿಶ್ವ ವಿಖ್ಯಾತ ಆರ್ಥಿಕ ತಜ್ಞರೂ ಆಗಿದ್ದರು. ಕಾಯಕ ಮತ್ತು ದಾಸೋಹದ ಶ್ರಮ ಸಂಸ್ಕೃತಿಯ ಮಹತ್ವವನ್ನು ಬಸವಣ್ಣ ಇಡೀ ವಿಶ್ವಕ್ಕೆ ನೀಡಿದರು ಎಂದು ಸಿಎಂ ತಿಳಿಸಿದರು.

ಬಸವಾದಿ ಶರಣರಿಂದ ಆದ ಜಾತಿ ವ್ಯವಸ್ಥೆ ವಿರುದ್ದದ ಸಾಮಾಜಿಕ ಕ್ರಾಂತಿ ಪ್ರಪಂಚದ ಬೇರೆ ಎಲ್ಲೂ ನಡೆದಿಲ್ಲ. ಸಮ ಸಮಾಜ ಮತ್ತು ಜಾತ್ಯತೀತ ಸಮಾಜ ನಿರ್ಮಾಣಕ್ಕಾಗಿ ಹೋರಾಡಿದ ಬಸವಾದಿ ಶರಣರು ನುಡಿದಂತೆ ನಡೆದರು.

ಜಾತಿ, ವರ್ಗ ರಹಿತ ಮಾನವೀಯ ಸಮಾಜ ಅವರ ತುಡಿತವಾಗಿತ್ತು. ಬಸವಾದಿ ಶರಣರ ಅನುಭಾವವೇ ವಚನಗಳಾಗಿವೆ. ವಚನ‌ ಎಂದರೆ ಮಾತು. ಕನ್ನಡ ಸಾಹಿತ್ಯದಲ್ಲಿ ವಚನ ಮತ್ತು ದಾಸ ಸಾಹಿತ್ಯ ದೊಡ್ಡ ಮೈಲಿಗಲ್ಲು. ಅಕ್ಷರ ಸಂಸ್ಕೃತಿಯಿಂದ ವಂಚಿತರನ್ನಾಗಿ ಮಾಡಲಾಗಿದ್ದವರಿಗೆ ವಚನ ಸಾಹಿತ್ಯ ಆಡು ಮಾತಿನ ಮೂಲಕ ತಲುಪಿತು ಎಂದು ಸಿದ್ದರಾಮಯ್ಯ ಹೇಳಿದರು.

ಸಂಸ್ಕೃತ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸ ಹುಯ್ಯುವ ಶಿಕ್ಷೆ ಇದ್ದುದ್ದರಿಂದ ಶೂದ್ರ ಸಮುದಾಯ ಶಿಕ್ಷಣದಿಂದ ವಂಚಿತರಾದರು.

ನನ್ನ ಅಪ್ಪ, ಅಮ್ಮ ಇಬ್ಬರೂ ಶಿಕ್ಷಣದಿಂದ ವಂಚಿತರಾಗಿದ್ದರು. ರಾಜಪ್ಪ ಮೇಸ್ಟ್ರು ಕಾರಣದಿಂದ ನಾನು ನೇರವಾಗಿ ಐದನೇ ತರಗತಿಗೆ ದಾಖಲಾಗಿ ಶಿಕ್ಷಣ ಪಡೆದು ಎರಡು ಬಾರಿ ಮುಖ್ಯಮಂತ್ರಿಯಾದೆ. ಅಂಬೇಡ್ಕರ್ ಅವರ ಕಾರಣದಿಂದ ನನಗೆ ಶಿಕ್ಷಣ ಸಿಕ್ಕರೆ, ಸಂವಿಧಾನದ ಕಾರಣದಿಂದ ನಾನು ಮುಖ್ಯಮಂತ್ರಿಯಾದೆ.

 ಬಸವ ಬಳಗಗಳ ಒಕ್ಕೂಟದ ಬೇಡಿಕೆಯಂತೆ ಬಸವ ಭವನ ನಿರ್ಮಿಸಲು ಹೆಚ್ಚಿನ‌ ಅನುದಾನವನ್ನು ಒದಗಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ