Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

6,322 ರೈತ ಕುಟುಂಬಗಳಿಗೆ ಕೊಳವೆಬಾವಿ-ಸಚಿವ ಭೋಸರಾಜು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತ ಕುಟುಂಬಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ 2025-26ನೇ ಸಾಲಿನಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ವಿಳಂಬವಿಲ್ಲದೆ ಚುರುಕುಗೊಳಿಸಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.


6,322 ರೈತರಿಗೆ ಕೊಳವೆಬಾವಿ:
ಎಸ್‌ಸಿಪಿಟಿ‌ಎಸ್‌ಪಿ ಅಡಿಯಲ್ಲಿ 2025–26ನೇ ಆರ್ಥಿಕ ಸಾಲಿನಲ್ಲಿ 3,939 ಪರಿಶಿಷ್ಟ ಜಾತಿ ಮತ್ತು 2,383 ಪರಿಶಿಷ್ಟ ಪಂಗಡದ ಕುಟುಂಬಗಳು ಸೇರಿದಂತೆ ಒಟ್ಟು 6,322 ರೈತ ಕುಟುಂಬಗಳಿಗೆ ವಿದ್ಯುತ್ ಸಂಪರ್ಕದೊಂದಿಗೆ ಕೊಳವೆಬಾವಿ ಸೌಲಭ್ಯ ಒದಗಿಸಲು ಅನುಮೋದನೆ ನೀಡಲಾಗಿದೆ. ಈ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಶೀಘ್ರದಲ್ಲಿ ಮುಗಿಸಿ, ನಿಗದಿತ ಸಮಯದಲ್ಲಿ ರೈತರಿಗೆ ಸೌಲಭ್ಯ ತಲುಪಿಸಬೇಕು ಎಂದು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಲ ಸಂರಕ್ಷಣೆಗೆ ಒತ್ತು:
ಸರ್ಕಾರ ಅಂತರ್ಜಲ ಮಟ್ಟ ವೃದ್ಧಿಸುವ ದೃಷ್ಟಿಯಿಂದ ಹಲವಾರು ಯೋಜನೆ ರೂಪಿಸಿದೆ. ಪರಿಶಿಷ್ಟ ಸಮುದಾಯಗಳ ಕೃಷಿ ಪ್ರದೇಶಗಳಲ್ಲಿ ಚೆಕ್ ಡ್ಯಾಮ್‌ಗಳ ನಿರ್ಮಾಣ ಮತ್ತು ಸಾಮೂಹಿಕ ಏತ ನೀರಾವರಿ ಯೋಜನೆಗಳಂತಹ ಜಲ ಸಂರಕ್ಷಣಾ ರಚನೆಗಳನ್ನು ನಿರ್ಮಿಸಲು ಆದ್ಯತೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

365 ಕೋಟಿಯಲ್ಲಿ 5,371 ರೈತರಿಗೆ ಕೊಳವೆಬಾವಿ:
365 ಕೋಟಿ ವೆಚ್ಚದಲ್ಲಿ 2024–25ನೇ ಸಾಲಿನಲ್ಲಿ ಒಟ್ಟು 5,371 ರೈತ ಕುಟುಂಬಗಳಿಗೆ (3,388 ಎಸ್‌ಸಿ ಮತ್ತು 1,983 ಎಸ್‌ಟಿ) ಯಶಸ್ವಿಯಾಗಿ ವಿದ್ಯುತ್ ಸಂಪರ್ಕಿತ ಕೊಳವೆ ಬಾವಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಹಿಂದುಳಿದವರಿಗೆ ಗಂಗಾ ಕಲ್ಯಾಣ:
ಗಂಗಾ ಕಲ್ಯಾಣ ಯೋಜನೆಯಡಿ ಹಿಂದುಳಿವದ ವರ್ಗಗಳ ಸಣ್ಣ ಹಾಗೂ ಅತಿ ಸಣ್ಣ ರೈತರು ಉಚಿತವಾಗಿ ಸರ್ಕಾರಿಂದ ಕೊಳವೆ ಬಾವಿ ಪಡೆಯಬಹುದಾಗಿದೆ. ಈ ಮೂಲಕ ಕೃಷಿಗೆ ಉತ್ತೇಜನ ನೀಡುವುದು ಸರ್ಕಾರದ ಉದ್ದೇಶ. ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಬಿಡುಗಡೆಯಾದ ಅನುದಾನದ ಆಧಾರದ ಮೇಲೆ ಗಂಗಾ ಕಲ್ಯಾಣ ಯೋಜನೆಗೆ ಹಣ ಬಿಡುಗಡೆ ಆಗಲಿದೆ ಎಂದು ಸಚಿವರು ತಿಳಿಸಿದರು.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಸಿಗಲಿದೆ.


ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಪ್ರವರ್ಗ 1, 2, 3, 3ಬಿ ಹಿಂದುಳಿದ ವರ್ಗಕ್ಕೆ ಸೇರಿರಬೇಕು. ಹಾಲಿ ಜಮೀನು ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, ಒಂದೇ ಸ್ಥಳದಲ್ಲಿ ಕನಿಷ್ಠ 2 ಎಕರೆ ಜಮೀನು ಹೊಂದಿದ್ದರೆ ಈ ಯೋಜನೆಗೆ ಅರ್ಹರಾಗುತ್ತಾರೆ ಎಂದು ಸಚಿವರು ಮಾಹಿತಿ ನೀಡಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ