Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಟ್ಟಿಗೆ ಮಾಚೆನ ಹಳ್ಳಿಯಲ್ಲಿ 66 ತಳಿ ಪ್ರಾತ್ಯಕ್ಷಿಕೆ ಕ್ಷೇತ್ರೋತ್ಸವ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ಸಾಸಲು ಹೋಬಳಿಯ ಕೊಟ್ಟಿಗೆ ಮಾಚೇನಹಳ್ಳಿ ಗ್ರಾಮದಲ್ಲಿ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಿಂದ ಹರಳಿನ ಸುಧಾರಿತ ಐ.ಸಿ.ಎಚ್-66 ತಳಿಯ ಪ್ರಾತ್ಯಕ್ಷಿಕೆ ಕ್ಷೇತ್ರೋತ್ಸವ ನಡೆಯಿತು.


ಕೃಷಿ ವಿಜ್ಞಾನ ಕೇಂದ್ರದಲ್ಲಿನ   ಬೇಸಾಯ ಶಾಸ್ತ್ರ ವಿಜ್ಞಾನಿ ಡಾ.ಜಿ.ಕೆ.ನಿಂಗರಾಜು ಹರಳು ತಳಿಯ ವಿಶೇಷತೆ ಕುರಿತು ಮಾಹಿತಿ ನೀಡಿ, ಹರಳು ಬೆಳೆಯ ಸುಧಾರಿತ ಬೇಸಾಯ ಕ್ರಮ, ಅಧಿಕ ಇಳುವರಿ ನೀಡುವ ತಳಿ ಆಗಿರುವ ಐ.ಸಿ.ಎಚ್-66 ಬಿತ್ತನೆ ಸಂದರ್ಭದಲ್ಲಿ ತಾಕಿನ ಸುತ್ತ ಕಂದಕ ಬದು ನಿರ್ಮಾಣ, ಕೊಟ್ಟಿಗೆ ಗೊಬ್ಬರದ ಬಳಕೆ ಹಾಗೂ ಮಣ್ಣಿನ ಅಗತ್ಯಕ್ಕೆ ತಕ್ಕಂತೆ ರಸಗೊಬ್ಬರ ಬಳಕೆ ಮಾಡಬೇಕು.

 ಹರಳು ಬೆಳೆ ಮಳೆಗಾಲ ಮುಕ್ತಾಯವಾದ ನಂತರ ಮಾರ್ಚ್‌ವರೆಗೆ ಇರಲಿದೆ. ಹಾಗಾಗಿ ತೇವಾಂಶ ಸಂರಕ್ಷಣೆ ಗಾಗಿ ಸಾಲುಗಳು ಮತ್ತು ಅಗತ್ಯಕ್ಕೆ ತಕ್ಕಂತೆ ಇಳಿಜಾರಿಗೆ ಅಡ್ಡಲಾಗಿ ಹರಳಿನ ಸಾಲು ಇರುವಂತೆ ನೋಡಿಕೊಳ್ಳಬೇಕು. ಹರಳಿನ ತಾಕಿನ ಸುತ್ತಕಂದಕ ಬದುಗಳ ನಿರ್ಮಾಣ," ಕೊಟ್ಟಿಗೆ ಗೊಬ್ಬರದ ಬಳಕೆ (2 ಟನ್/ಎ), ಲ್ಲಿ ಶಿಫಾರಸ್ಸಿತ ರಸಗೊಬ್ಬರಗಳ ಸಿಂಪರಣೆ (ಸಾ.ರಂ.ಪೊ - 15:15:10ಕಿ.ಗ್ರಾಂ/ಎ), " ತೇವಾಂಶ ಸಂರಕ್ಷಣೆಗಾಗಿ ಸಾಲು, ಅಗತ್ಯಾ ಈ ನುಸಾರ ಸಸ್ಯ ಸಂರಕ್ಷಣಾ ರಾಸಾಯನಿಕಗಳ " ಬಳಕೆ ತಾಂತ್ರಿಕತೆ ಅಳವಡಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.

ಮಣ್ಣು ವಿಜ್ಞಾನಿ ಡಾ.ಡಿ.ರವಿಕುಮಾರ್ ಈ ನೀರು, ಮಣ್ಣು ಮಾದರಿ ಪರೀಕ್ಷೆಯ " ಮಹತ್ವ ಮತ್ತು ಮಣ್ಣಿನ ಆರೋಗ್ಯ, - ಫಲವತ್ತತೆ ಹಾಗೂ ಪೋಷಕಾಂಶಗಳ ನಿರ್ವಹಣೆ ಕುರಿತು ಮಾಹಿತಿ ನೀಡಿದರು

ಕ್ಷೇತ್ರೋತ್ಸವದಲ್ಲಿ ಕೃಷಿ ವಿಸ್ತರಣಾ ವಿಜ್ಞಾನಿ ಡಾ.ವೈ.ಎಂ.ಗೋಪಾಲ್ ಮಾತನಾಡಿ, ಕೃಷಿ ವಿಜ್ಞಾನ ಕೇಂದ್ರದ ಕಾರ್ಯ ಚಟುವಟಿಕೆ ಬಗ್ಗೆ ಮಾಹಿತಿ ನೀಡಿ, ನೂತನ ತಾಂತ್ರಿಕತೆಗಳ ಬಗ್ಗೆ ಮಾಹಿತಿ ಪಡೆದು ಕ್ಷೇತ್ರದಲ್ಲಿ ಅಳವಡಿಸಿಕೊಂಡಾಗ ಉತ್ಪಾದಕತೆ ಹೆಚ್ಚುವುದರ ಜತೆಗೆ ಬೇಸಾಯದ ಖರ್ಚನ್ನೂ ಕಡಿಮೆ ಮಾಡಬಹುದು. ಕೃಷಿ ವಿಜ್ಞಾನ ಕೇಂದ್ರದಿಂದ ಹಮ್ಮಿಕೊಳ್ಳುವ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಿಜ್ಞಾನಿಗಳು ನೀಡುವ ಸಲಹೆ ಮತ್ತು ಸೂಚನೆ ಪಾಲಿಸಬೇಕೆಂದು ತಿಳಿಸಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ