Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

7 ಕೋಟಿ ದರೋಡೆ ಮಾಡಿದ ಆರೋಪಿಗಳ ಸುಳಿವು ಪತ್ತೆ, ಶೀಘ್ರ ಬಂಧನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಳೆದ ನವೆಂಬರ್-19ರಂದು ಬೆಂಗಳೂರು ನಗರದಲ್ಲಿ ನಡೆದಿದ್ದ 7.11 ಕೋಟಿ ನಗದು ದರೋಡೆ ಪ್ರಕರಣ ಸಂಬಂಧ ಆರೋಪಿಗಳ ಸುಳಿವು ಪತ್ತೆಯಾಗಿದೆ. ದರೋಡೆಕೋರರ ಗ್ಯಾಂಗ್​​ ತಿರುಪತಿಯಲ್ಲಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಬೆಂಗಳೂರು ದಕ್ಷಿಣ ವಿಭಾಗ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.


ಹಣ ದರೋಡೆ ಮಾಡಿದ ಶೋಧ ಕಾರ್ಯಕ್ಕೆ ತಿರುಪತಿ ಪೊಲೀಸರೂ ಸಾಥ್​​ ನೀಡಿದ್ದು, ಹೋಟೆಲ್, ಲಾಡ್ಜ್, ದೇಗುಲ ‌ಬಳಿ ಮಫ್ತಿಯಲ್ಲಿ ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ. ಹಣ ಬೇರೆ ಕಡೆ ಇರಿಸಿ ಆರೋಪಿಗಳು ತಿರುಪತಿಯಲ್ಲಿ ಇರುವ ಶಂಕೆ ತನಿಖೆ ವೇಳೆ ವ್ಯಕ್ತವಾಗಿದೆ ಪೊಲೀಸರು ತಿಳಿಸಿದ್ದಾರೆ.




ಇಬ್ಬರು ಸಿಸಿಬಿ ಪೊಲೀಸರ ವಶಕ್ಕೆ-
ಬೆಂಗಳೂರಿನ ಬಾಣಸವಾಡಿಯ ಕಲ್ಯಾಣನಗರದ ಇಬ್ಬರನ್ನು ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಯುಪಿ ನೋಂದಣಿಯ ಕಾರಿನ ನಂಬರ್ ಪ್ಲೇಟ್ ಹಾಕಿಕೊಂಡು ದರೋಡೆ ಮಾಡಿದ ಗ್ಯಾಂಗ್​ ಪರಾರಿಯಾಗಿದ್ದು ದರೋಡೆ ವೇಳೆ ಕಾರಿನ ನೋದಣಿ ಕರ್ನಾಟಕದಾಗಿತ್ತು. ಕಲ್ಯಾಣನಗರದ ಸ್ವಿಫ್ಟ್ ಕಾರ್ ನಂಬರ್​ನ ಆರೋಪಿಗಳು ಬಳಸಿದ್ದರು.
ದರೋಡೆಕೋರರು ಹಿಂದಿ ಮಾತನಾಡಿ ದಾರಿ ತಪ್ಪಿಸುವ ಕೆಲಸ‌ಮಾಡಿದ್ದು
, ಸಿಸಿಟಿವಿ ಮತ್ತು ಲೊಕೇಶನ್ ಡಂಪಿಂಗ್​ ಆಧಾರದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ಹಣ ಸಾಗಿಸುತ್ತಿದ್ದ ವಾಹನ ಫಾಲೋ
?


ರಾಜ್ಯವನ್ನೇ ಬೆಚ್ಚಿಬೀಳಿಸಿರುವ ದರೋಡೆ ಪ್ರಕರಣ ಬೆಂಗಳೂರು ನಗರ ಪೊಲೀಸರ ತಲೆಕೆಡಿಸಿದೆ. ನಾಲ್ವರು ಜಂಟಿ ಆಯುಕ್ತರು,18 ಡಿಸಿಪಿಗಳ ನೇತೃತ್ವದಲ್ಲಿ ಆರೋಪಿಗಳಿಗೆ ಹುಡುಕಾಟ ನಡೆದಿದೆ.
L&O, CCB, ಟ್ರಾಫಿಕ್ ಪೊಲೀಸರೂ ಶೋಧಕಾರ್ಯದಲ್ಲಿ ಭಾಗಿಯಾಗಿದ್ದಾರೆ. ನಾಲ್ವರು ಜಂಟಿ ಪೊಲೀಸ್ ಆಯುಕ್ತರು ಇಡೀ ಕೇಸ್ ಮಾನಿಟರ್ ಮಾಡುತ್ತಿದ್ದು, ಈವರೆಗೆ ನಗರದಲ್ಲಿ ನೂರಕ್ಕೂ ಹೆಚ್ಚು ಸಿಸಿಟಿವಿ ಫೂಟೇಜ್ ಪರಿಶೀಲನೆ ನಡೆಸಲಾಗಿದೆ.


ಸಿಎಂಎಸ್ ವಾಹನದ ಮೊದಲ ಪಾಯಿಂಟ್ ಸಿಸಿಟಿವಿ ದೃಶ್ಯ ಲಭ್ಯವಾಗಿದ್ದು, ಹೆಚ್​ಡಿಎಫ್​ಸಿ ಬ್ಯಾಂಕ್​ನಿಂದ ಹಣ ತುಂಬಿ ವಾಹನ ಹೊರಡುವ ವೇಳೆ ಆರೋಪಿಗಳಿದ್ದ ಇನ್ನೋವಾ ಕಾರು ಅಲ್ಲಿ ಕಂಡಬಂದಿಲ್ಲ. ಸ್ವಲ್ಪ ದೂರದಿಂದ ಕಾರಿನಲ್ಲಿ ಆರೋಪಿಗಳು ಫಾಲೋ ಮಾಡಿದ್ದು, HDFC ಬ್ಯಾಂಕ್ ಬಳಿಯಿಂದ ಬೈಕ್​ನಲ್ಲಿ ಫಾಲೋ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಆ ವೇಳೆ ಸ್ಥಳದಲ್ಲಿದ್ದ ಬೈಕ್​ಗಳ ಮಾಹಿತಿ ಕಲೆ ಹಾಕಲು ಪೊಲೀಸರು ಮುಂದಾಗಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ