ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಘಾಟಿ ದೇವಾಲಯದಲ್ಲಿ ಭಕ್ತರು ನೀಡಿದ ಕಾಣಿಕೆಯ ಹುಂಡಿ ಏಣಿಕೆ ಕಾರ್ಯದಲ್ಲಿ ₹77.58904ರೂಗಳು ಸಂಗ್ರಹವಾಗಿದೆ.
ದೇವಾಲಯದ ನಿಯಮಾನುಸಾರ ಹುಂಡಿ ಏಣಿಕೆ ಮಾಡಲಾಗಿದ್ದು ₹ 77.58.904 ರೂ 3.18ಮೀ ಚಿನ್ನ 660ಗ್ರಾಂ ಬೆಳ್ಳಿ ಕಾಣಿಕೆಯಾಗಿ ನೀಡುವ ಮೂಲಕ ಭಕ್ತರು ಹರಕೆ ತೀರಿಸಿದ್ದಾರೆ.
ಹುಂಡಿ ಹಣ ಎಣಿಕೆ ಸಂದರ್ಭದಲ್ಲಿ ದೇವಾಲಯದ ಕಾರ್ಯದರ್ಶಿ ಎಸ್.ಪಿ. ಮಹೇಶ್, ಮುಜರಾಯಿ ಇಲಾಖೆ ತಹಶೀಲ್ದಾರ್ ಜಿ.ಜೆ. ಹೇಮಾವತಿ, ಪ್ರಧಾನ ಅರ್ಚಕರು, ದೇವಾಲಯದ ಸಿಬ್ಬಂದಿ ನಂಜಪ್ಪ, ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಬ್ಯಾಂಕ್ ಸಿಬ್ಬಂದಿ ಸೇರಿದಂತೆ ಸಂಬಂಧಪಟ್ಟ ಸಿಬ್ಬಂದಿ ಉಪಸ್ಥಿತರಿದ್ದರು.




