Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

78.42 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗರದ ವಿವಿಧೆಡೆಗಳಲ್ಲಿ ರೂ.78.42 ಲಕ್ಷ ವೆಚ್ಚದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹಾಗೂ ಸಂಸದ ಗೋವಿಂದ ಎಂ.ಕಾರಜೋಳ ಅವರು ಮಂಗಳವಾರ ಭೂಮಿಪೂಜೆ ನೆರವೇರಿಸಿದರು.

      ಇಲ್ಲಿನ ಗಾಂಧಿನಗರದ ಐಯುಡಿಪಿ ಲೇಔಟ್ ಹತ್ತಿರ ಕೆಳಗೋಟೆ ಯಲ್ಲಿ ರೂ.15.72 ಲಕ್ಷ ವೆಚ್ಚದಲ್ಲಿ ಉದ್ಯಾನವನ ಅಭಿವೃದ್ಧಿ ಕಾಮಗಾರಿ, ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ರೂ.16.57 ಲಕ್ಷ ವೆಚ್ಚದಲ್ಲಿ ಪಾತ್ವೆ, ಪೆವಿಲಿಯನ್ ಹಾಗೂ ಯೋಗಾಸನ ಪ್ಲಾಟ್ ಫಾರಂ ನಿರ್ಮಿಸುವ ಕಾಮಗಾರತಿ, ತುರುವನೂರು ರಸ್ತೆಯಲ್ಲಿರುವ ವಿಷ್ಣುವರ್ಧನ ಪಾರ್ಕ್ಗೆ ಉಳಿದ ಭಾಗಕ್ಕೆ ರೂ.4.73 ಲಕ್ಷ ವೆಚ್ಚದಲ್ಲಿ ತಂತಿಬೇಲಿ ಅಳವಡಿಸುವುದು

ಮತ್ತು ವಿದ್ಯುತ್ ದೀಪ ಅಳವಡಿಸುವ ಕಾಮಗಾರಿ, ತುರುವನೂರು ರಸ್ತೆಯ ರೈಲ್ವೆ ಅಂಡರ್ ಪಾಸ್ ಸಮೀಪದ ವೈಭವ್ ಲೇಔಟ್ ಹತ್ತಿರ ಪಿಳ್ಳೇಕೆರನಳ್ಳಿ ಬಳಿ ರೂ.10.90 ಲಕ್ಷ ವೆಚ್ಚದಲ್ಲಿ ಉದ್ಯಾನವನ ಅಭಿವೃದ್ಧಿ ಕಾಮಗಾರಿ ಹಾಗೂ ಇದೇ ಪಿಳ್ಳೇಕರನಹಳ್ಳಿಯಲ್ಲಿ ರೂ.9.53 ಲಕ್ಷ ವೆಚ್ಚದಲ್ಲಿ ಉದ್ಯಾನವನ ಅಭಿವೃದ್ಧಿ ಕಾಮಗಾರಿ, ಬಿವಿಕೆಎಸ್ ಲೇಔಟ್ ಮತ್ತು ತಾಜ್ಪೀರ್ ಲೇಔಟ್ನಲ್ಲಿ ರೂ.20.97 ಲಕ್ಷ ವೆಚ್ಚದಲ್ಲಿ ಉದ್ಯಾನವನ ಅಭಿವೃದ್ಧಿ ಕಾಮಗಾರಿ ಸೇರಿದಂತೆ ಒಟ್ಟಾರೆ 78. 42 ಲಕ್ಷ ರೂ. ವೆಚ್ಚದಲ್ಲಿ ನಗರದ ವಿವಿಧೆಡೆ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು.

       ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸೋಮಶೇಖರ್, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಸೇರಿದಂತೆ ನಗರಾಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರು, ನಗರಸಭೆ ಸದಸ್ಯರುಗಳು ಇದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ