LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತೂಬಗೆರೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನಲ್ಲೆಡೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ಸೇರಿದಂತೆ ವಿವಿಧ ಶಾಲೆಗಳು, ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ತೂಬಗೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಚೇರಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲೆ ಉಷಾ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಶೈಕ್ಷಣಿಕ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಇಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳ ವೇಷಭೂಷಣ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಕಣ್ಮನ ಸೆಳೆದವು.

ತೂಬಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ 2008ನೇ ಸಾಲಿನ ಹಳೆಯ ವಿದ್ಯಾರ್ಥಿಗಳ ಬಳಗದ ವತಿಯಿಂದ ಕಳೆದ ಸಾಲಿನಲ್ಲಿ ಶಾಲಾ ಮಟ್ಟದಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅರವಿಂದ್, ಕೆಪಿಸಿಸಿ ಸದಸ್ಯ ಮುನಿರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ  ಸತ್ಯನಾರಾಯಣಪ್ಪ, ಹಿರಿಯ ಸದಸ್ಯ ಮುನಿಕೃಷ್ಣಪ್ಪ, ಕೃಷ್ಣಪ್ಪ, ಮುಖಂಡ ರಾಮಕೃಷ್ಣ, ರಾಜಗೋಪಾಲ್, ಯುವ ಮುಖಂಡ ಉದಯ ಆರಾಧ್ಯ, ಎಸ್‌ಡಿಎಂಸಿ ಅಧ್ಯಕ್ಷ ಹನುಮಂತರಾಜು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಇದೇ ವೇಳೆ ತೂಬಗೆರೆ ಸರ್ಕಾರಿ ಆರೋಗ್ಯ ಕೇಂದ್ರ, ನಾಡಕಚೇರಿ, ಪಶು ಆರೋಗ್ಯ ಕೇಂದ್ರ, ಹಾಲು ಉತ್ಪಾದಕರ ಸಹಕಾರ ಸಂಘ, ತೂಬಗೆರೆ ವ್ಯವಸಾಯೋತ್ಪನ್ನ ಸಹಕಾರ ಸಂಘ ಸೇರಿದಂತೆ ವಿವಿಧ ಸರ್ಕಾರಿ ಹಾಗೂ ಸಹಕಾರ ಸಂಸ್ಥೆಗಳ ಕಚೇರಿಗಳಲ್ಲೂ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ಕಾರಿ ಶಾಲೆಗಳ ಉಳಿವಿಗೆ ಜಾಗೃತಿ ಅಗತ್ಯ: ಕೆಜಿ ಹನುಮಂತರಾಯ‘ನಾನು ಸಚಿವನಾಗಿರುವುದು ಶ್ರೀರಾಮುಲುಗೆ ಸಹಿಸಲು ಆಗುತ್ತಿಲ್ಲ’: ಬಿ. ನಾಗೇಂದ್ರ‘ವಂದೇ ಮಾತರಂ’ ಗೀತೆ ಆಕ್ಷೇಪ ವಿವಾದ: ಬಿಜೆಪಿ ಆರೋಪಕ್ಕೆ ಸೋನಿಯಾ ಗಾಂಧಿ ಪರವಾಗಿ ಕಾಂಗ್ರೆಸ್ ಸ್ಪಷ್ಟನೆ!ಭದ್ರಾ ನೀರಿಗಾಗಿ ಆ.18ಕ್ಕೆ ಸಿಎಂ ಜೊತೆ ಸಭೆ: ರೈತರಿಂದ ಹೆದ್ದಾರಿ ತಡೆ ಹಿಂಪಡೆತ!ವರ್ಷದೊಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ ಘೋಷಣೆ!‘RSS ನೋಂದಣಿಯೂ ಇಲ್ಲ, ಆಗೋದೂ ಇಲ್ಲ’: ಪ್ರಿಯಾಂಕ್ ಖರ್ಗೆಗೆ ಬಿ.ಎಲ್. ಸಂತೋಷ್ ತಿರುಗೇಟು!ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ನಡೆಸಿದ ಸಿಎಂ ಡಿ.ಕೆ. ಶಿವಕುಮಾರ್2047ರ ‘ವಿಕಸಿತ ಭಾರತ’ಕ್ಕಾಗಿ ದೊಡ್ಡ ಕನಸು ಕಾಣಲು ದೇಶದ ಜನತೆಗೆ ಪ್ರಧಾನಿ ಮೋದಿ ಕರೆ!80ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ ದೇಶಕ್ಕೆ ಪ್ರಧಾನಿ ಮೋದಿ ನೀಡಿದ ಸಂದೇಶಗಳಿವು!ಪೆಟ್ರೋಲ್, ಡೀಸೆಲ್ ಮೇಲಿನ ವಿಂಡ್‌ಫಾಲ್ ತೆರಿಗೆ ಕಡಿತಗೊಳಿಸಿದ ಕೇಂದ್ರ!