ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದಲ್ಲಿ ಸುಮಾರು ೩೦ ವರ್ಷಗಳ ಬಳಿಕ ನಾಯಕ ಸಮಾಜದ ಸಚಿವರೊಬ್ಬರು ಧ್ವಜಾರೋಹಣ ನೆರವೇರಿಸುತ್ತಿರುವ ಸಂತಸದ ಹಿನ್ನೆಲೆಯಲ್ಲಿ ಚಿತ್ರದುರ್ಗ ನಾಯಕ ಸಮಾಜದ ವತಿಯಿಂದ ಸಿಹಿ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಅವರು ಕಾರ್ಯಕ್ರಮಕ್ಕೆ ಆಗಮಿಸಿ ಟೇಪ್ ಕತ್ತರಿಸುವ ಮೂಲಕ ಸಿಹಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಾಯಕ ಸಮುದಾಯದಿಂದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೇರವೇರುವ ಮೈದಾನದಲ್ಲಿ ನಾಯಕ ಸಮುದಾಯದಿಂದ ಸಚಿವ ಟಿ.ರಘುಮೂರ್ತಿ ಅವರ ಸ್ವಾತಂತ್ರ್ಯ ದಿನಾಚರಣೆ ಶುಭಾಷಯಗಳ ಬೃಹತ್ ಕಟೌಂಟ್ ಅಳವಡಿಸುವ ಮೂಲಕ ಸಚಿವರ ಧ್ವಜಾರೋಹಣಕ್ಕೆ ವಿಶೇಷ ಮೆರಗು ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಆದಿ ಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ನಾಯಕ ಸಮುದಾಯದ ಚಿತ್ರದುರ್ಗ ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜ್, ಶ್ರೀ ಅಹೋಬಲ ಟಿವಿಎಸ್ ಮಾಲೀಕ ಪಿ.ವಿ.ಅರುಣ್, ದರ್ಶನ್ ಇಂಗಳದಾಳ್, ಮಂಜುನಾಥ್ ಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್ ಪೀರ್, ಗ್ಯಾರೆಂಟ್ ಅಧ್ಯಕ್ಷ ಶಿವಣ್ಣ, ಮಾಜಿ ನಗರಸಭೆ ಅಧ್ಯಕ್ಷ ಗೊಪ್ಪೆ ಮಂಜುನಾಥ್, ಮಾಜಿ ನಗರಸಭೆ ಸದಸ್ಯ ದೀಪಕ್, ಮೈಲಾರಪ್ಪ, ಆನಂದ, ವಿಜಯಕುಮಾರ್ ಇದ್ದರು.



