Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಆಡಳಿತ ಸುಧಾರಣೆಗೆ 853 ಶಿಫಾರಸ್ಸು–ಆರ್.ವಿ.ದೇಶಪಾಂಡೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಆಡಳಿತ ಸುಧಾರಣಾ ಆಯೋಗ 2024 ರ ಜನವರಿಯಿಂದ ಈವರೆಗೆ 19 ಇಲಾಖೆಗಳ 853 ಶಿಪಾರಸ್ಸುಗಳನ್ನು ಅನುಷ್ಠಾನಗೊಳಿಸಿದೆ ಎಂದು ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ತಿಳಿಸಿದರು.


ಇಂದು ವಿಕಾಸಸೌಧದಲ್ಲಿ ಆಯೋಗದ ಪ್ರಗತಿ ಕುರಿತ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಒಟ್ಟು 19 ಇಲಾಖೆಗಳ 2891 ಶಿಫಾರಸ್ಸುಗಳ ಪೈಕಿ, 853 ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲಾಗಿದೆ. ಇನ್ನು ಅನುಷ್ಠಾನದ ಹಂತದಲ್ಲಿ 592 ಶಿಫಾರಸುಗಳಿದ್ದು, ಸರ್ಕಾರದ ಮಟ್ಟದಲ್ಲಿ 243, ಇಲಾಖಾ ಮಟ್ಟದಲ್ಲಿ 1181 ಶಿಫಾರಸ್ಸುಗಳು ಬಾಕಿ ಇವೆ ಎಂದು ವಿವರ ನೀಡಿದರು.

2024ರ ಜನವರಿ ಅಂತ್ಯದ ವೇಳೆಗೆ ಆಯೋಗ 39 ಇಲಾಖೆಗಳನ್ನು ಒಳಗೊಂಡು ಒಟ್ಟು ಏಳು ವರದಿಗಳನ್ನು ಸರ್ಕಾರಗಳಿಗೆ ನೀಡಿದೆ. ಈ ವರದಿಗಳು 5039 ಶಿಫಾರಸುಗಳನ್ನು ಒಳಗೊಂಡಿತು.


ಜನವರಿ ಅಂತ್ಯದವರೆಗೆ ಕೇವಲ 99 ಶಿಫಾರಸ್ಸುಗಳನ್ನು ಅನುಷ್ಠಾನಕ್ಕೆ ತರಲಾಗಿತ್ತು. ನಿರಂತರವಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ಹೆಚ್ಚುವರಿ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಇತರರಿಗೆ ನಿರಂತರವಾಗಿ ಪತ್ರ ಬರೆದು ಹೆಚ್ಚು ಶಿಫಾರಸ್ಸುಗಳನ್ನು ತಾವು ಅನುಷ್ಠಾನಗೊಳಿಸಿರುವುದಾಗಿ ತಿಳಿಸಿದರು.

ಅಲ್ಲದೆ 20 ಇಲಾಖೆಗಳಿಗೆ ಸಂಬಂಧಿಸಿದ 2168 ಶಿಫಾರಸುಗಳ ಪೈಕಿ 12 ನ್ನು ಅನುಷ್ಠ್ಠಾನಗೊಳಿಸಲಾಗಿದೆ. ಅನುಷ್ಠಾನದ ಹಂತದಲ್ಲಿ 993 ಬಾಕಿಯಿದ್ದು 192 ಶಿಫಾರಸ್ಸುಗಳು ಸರ್ಕಾರದ ಮಟ್ಟದಲ್ಲಿ 1771 ಇಲಾಖಾ ಮಟ್ಟದಲ್ಲ ಬಾಕಿ ಇವೆ. ಬಾಕಿ ಉಳಿದ ಶಿಫಾರಸುಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗುವುದು ಎಂದರು.

ಆಯೋಗ ಉತ್ತರ ಕನ್ನಡ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಿಗೆ ಭೇಟಿ ನೀಡಿದ್ದು, ವಿವಿಧ ಇಲಾಖೆಗಳಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದೆ. ನಾಗರೀಕರ ಸಲಹೆ ಸೂಚನೆಗಳನ್ನು ಸ್ವೀಕರಿಸಲಾಗಿದೆ ಎಂದರು.

ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಮಾನದಂಡವನ್ನು ಪರಿಶೀಲಿಸಿ, ಅರ್ಹರಿಗೆ ಕಾರ್ಡ್ ನೀಡಿ, ಅನರ್ಹ ಕಾರ್ಡ್‍ಗಳನ್ನು ರದ್ದುಗೊಳಿಸಲು ಉಪಸಮಿತಿ ರಚಿಸಲಾಗಿದೆ. ಇದಲ್ಲದೆ ಇಲಾಖೆಗಳು ನಿಗಮ ಮಂಡಳಿಗಳನ್ನು ವಿಲೀನಗೊಳಿಸಲು ಪರಿಶೀಲಿಸಲಾಗುವುದು. ಸರ್ಕಾರಿ ಯೋಜನೆ ಮತ್ತು ಕಾರ್ಯಕ್ರಮಗಳಲ್ಲಿ ಯಾವುದೇ ಲೋಪ ವಿಳಂಬಕ್ಕೆ ಆಸ್ಪದ ನೀಡದಂತೆ ಆಯೋಗ ಕ್ರಮಕೈಗೊಳ್ಳಬೇಕು ಎಂದರು.

ನಗದು ರಹಿತ, ಸಂಪರ್ಕ ರಹಿತ ಸೇವೆ ನೀಡಲು ಎಲ್ಲಾ ಸೇವೆಗಳನ್ನು ಆನ್‍ಲೈನ್, ಎಂಡ್- ಟು – ಎಂಡ್ ಆನ್‍ಲೈನ್ ಸೇವೆಗಳು ಮತ್ತು ತಂತ್ರಜ್ಞಾನ ಬಳಸಿಕೊಂಡು ಕಡತವನ್ನು ತ್ವರಿತ ವಿಲೇವಾರಿ ಮಾಡಲು ಸೂಚಿಸಲಾಗುವುದು.


ಅಟಲ್‍ಜೀ ಜನಸ್ನೇಹಿ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಮುಂತಾದ ಕಚೇರಿಗಳ ಸೇವಾ ವೈಖರಿ ಬಲಪಡಿಸಲು ಶಿಫಾರಸ್ಸು ಸೇರಿದಂತೆ ಸರ್ಕಾರಿ ಖಾಲಿ ಲಿಪಿಕ ಹುದ್ದೆಗಳನ್ನು ತಾಂತ್ರಿಕ ಹುದ್ದೆಗಳಿಗೆ ಪರಿವರ್ತಿಸುವ ಕಾರ್ಯವನ್ನು ಸಹ ಮಾಡಲಾಗಿದೆ ಎಂದರು.

ಒಟ್ಟಿನಲ್ಲಿ ಪಾರದರ್ಶಕತೆ, ಸರಳತೆ ಮತ್ತು ಕಡಿಮೆ ವೆಚ್ಚದಲ್ಲಿ ನಾಗರೀಕ ಸೇವೆಗಳನ್ನು ಸಕಾಲದಲ್ಲಿ ವಿಳಂಬವಿಲ್ಲದೇ ತಲುಪಿಸಲು ಆಯೋಗ ಬದ್ಧವಾಗುದೆ ಎಂದು ತಿಳಿಸಿದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ