ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗವು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಶೇ 93.85ರಷ್ಟು ಫಲಿತಾಂಶ ದಾಖಲಿಸಿ ಸಾಧನೆ ಮಾಡಿದೆ. ಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 114 ವಿದ್ಯಾರ್ಥಿನಿಯರಲ್ಲಿ 107 ಮಂದಿ ಉತ್ತೀರ್ಣರಾಗಿದ್ದಾರೆ.
ಉತ್ತೀರ್ಣರಾದವರಲ್ಲಿ 10 ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿ, 41 ವಿದ್ಯಾರ್ಥಿನಿಯರು ಪ್ರಥಮ ದರ್ಜೆ, 27 ವಿದ್ಯಾರ್ಥಿನಿಯರು ದ್ವಿತೀಯ ದರ್ಜೆ ಹಾಗೂ 29 ವಿದ್ಯಾರ್ಥಿನಿಯರು ತೃತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ. ಈ ಬಾರಿ ರಾಜ್ಯದ ಸರಾಸರಿ ಫಲಿತಾಂಶ ಶೇ 94.1ರಷ್ಟಿದ್ದರೆ, ಜಿಲ್ಲೆಯ ಸರಾಸರಿ ಶೇ 92.25ರಷ್ಟಿದೆ. ಶಾಲೆಯ ಈ ಯಶಸ್ಸಿಗೆ ಶ್ರಮಿಸಿದ ಎಲ್ಲಾ ಶಿಕ್ಷಕರಿಗೆ ಮತ್ತು ಸಾಧನೆ ಮಾಡಿದ ವಿದ್ಯಾರ್ಥಿನಿಯರಿಗೆ ಶಾಲೆಯ ಉಪ ಪ್ರಾಂಶುಪಾಲರು ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ವರದಕ್ಷಿಣೆ ನಿಷೇಧ ಅಧಿಕಾರಿಗಳ ನೇಮಕ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಧು-ವರದಕ್ಷಿಣೆ ನಿಷೇಧ (ಕರ್ನಾಟಕ) ನಿಯಮಗಳು 2004ರ ಅನ್ವಯ, ಚಿತ್ರದುರ್ಗ ಜಿಲ್ಲೆಯಲ್ಲಿ ವರದಕ್ಷಿಣೆ ಪಿಡುಗನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವರದಕ್ಷಿಣೆ ನಿಷೇಧ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಜಿಲ್ಲಾ ಮಟ್ಟದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್ ಕೆ.ಹೆಚ್. (9538993366) ಜಿಲ್ಲಾ ಮಟ್ಟದ ವಧು-ವರದಕ್ಷಿಣೆ ನಿಷೇಧ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಜಿಲ್ಲಾ ನಿರೂಪಣಾಧಿಕಾರಿ ಮಂಜುನಾಥ್.ಡಿ (8880219737) ಜಿಲ್ಲಾ ಮಟ್ಟದ ಹೆಚ್ಚುವರಿ ವಧು-ವರದಕ್ಷಿಣೆ ನಿಷೇಧ ಅಧಿಕಾರಿಯಾಗಿ ಜವಾಬ್ದಾರಿ ಹೊತ್ತಿದ್ದಾರೆ.
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಾಲ್ಲೂಕು ಮಟ್ಟದ ವಧು-ವರದಕ್ಷಿಣೆ ನಿಷೇಧ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಭರಮಸಾಗರ ನಿರ್ಮಲ ಎಸ್. ಚಿಕ್ಕಣ್ಣವರ್ (9448167024),ಚಳ್ಳಕೆರೆ ರಾಜಾನಾಯ್ಕ ಎಸ್. (9036250749), ಚಿತ್ರದುರ್ಗ ವೀಣಾ ಎಂ.ಎA (9448873683), ಹೊಳಲ್ಕೆರೆ ಅಭಿಲಾಷ ಎ. (8867404421) ಹಿರಿಯೂರು ಹಾಗೂ ಹೊಸದುರ್ಗ ಆರ್.ರಾಘವೇಂದ್ರ (7892661086), ಮೊಳಕಾಲ್ಮುರು ನವೀನ್ ಕುಮಾರ್ ಎಸ್.ಎಂ (7353002417) ಅವರು ವರದಕ್ಷಿಣೆ ನಿಷೇಧ ಅಧಿಕಾರಿಯಾಗಿದ್ದಾರೆ.
ವರದಕ್ಷಿಣೆ ಕಿರುಕುಳ ಅಥವಾ ಈ ಸಂಬAಧಿತ ದೂರುಗಳಿದ್ದಲ್ಲಿ ಸಾರ್ವಜನಿಕರು ಚಿತ್ರದುರ್ಗ ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿ ಅಥವಾ ಸಂಬAಧಪಟ್ಟ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಬಹದು. ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


