Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.98.57 ಫಲಿತಾಂಶ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕಿನ ಕುಂಚಿಗನಾಳು ಗ್ರಾಮದ ಬಳಿ ಇರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.98.57ರಷ್ಟು ಫಲಿತಾಂಶ ಲಭಿಸಿದೆ.


ಈ ಕಾಲೇಜಿನಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳ ಸಂಯೋಜನೆಗಳಿದ್ದು, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 39 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 31 ವಿದ್ಯಾರ್ಥಿಗಳು ಕಾಲೇಜಿನಿಂದ ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 70 ವಿದ್ಯಾರ್ಥಿಗಳಲ್ಲಿ 69 ವಿದ್ಯಾರ್ಥಿಗಳು ಉತ್ತೀರ್ಣಗೊಂಡು ಕಾಲೇಜಿಗೆ ಶೇ.98.57 ಫಲಿತಾಂಶ ತಂದಿದ್ದಾರೆ. ಎರಡೂ ವಿಭಾಗದ 12 ವಿದ್ಯಾರ್ಥಿಗಳು ಶೇ.90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದುಕೊಂಡಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಬಿ.ಅಂಕಿತ (581 ಅಂಕಗಳೊಂದಿಗೆ ಶೇ.96.83), ದ್ವಿತೀಯ ಸ್ಥಾನ ಆರ್.ಪೂರ್ಣಿಮ (567 ಅಂಕಗಳೊಂದಿಗೆ ಶೇ.94.5), ತೃತೀಯ ಸ್ಥಾನ ಆರ್.ಚಂದನ(563 ಅಂಕಗಳೊಂದಿಗೆ ಶೇ.93.83), ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಬಿ.ಅರ್ಪಿತ (581 ಅಂಕಗಳೊಂದಿಗೆ ಶೇ.96.83), ದ್ವಿತೀಯ ಸ್ಥಾನ ಬಿ.ಎಮ್.ಮಾನಸಗಂಗೋತ್ರಿ (578 ಅಂಕಗಳೊಂದಿಗೆ ಶೇ.96.33), ತೃತೀಯ ಸ್ಥಾನ ವಿ.ಕೀರ್ತನ (568 ಅಂಕಗಳೊಂದಿಗೆ ಶೇ.94.67) ಅಂಕಗಳನ್ನು ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಪ್ರಾಂಶುಪಾಲ ಬಿ.ಲಿಂಗರಾಜು ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ