Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಾವಯುವ ಕೃಷಿ ಪದ್ದತಿಯಿಂದ ಮುಂದಿನ ಪೀಳಿಗೆ ದಾರಿದೀಪ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಾವಯವ ಕೃಷಿ ಒಂದು ಪರಿಣಾಮಕಾರಿ ಪರ್ಯಾಯ ಮಾರ್ಗವಾಗಿದ್ದು
, ಸ್ಥಳೀಯ ಸಂಪನ್ಮೂಲಗಳ ಸಮರ್ಪಕ ಬಳಕೆಯಿಂದ ಕೃಷಿಯಲ್ಲಿ ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡಲ ಹಾಗೂ ಮುಂದಿನ ಪೀಳಿಗೆಗೆ ಫಲವತ್ತಾದ ಭೂಮಿ ಮತ್ತು ಉತ್ತಮ ಆರೋಗ್ಯಕರ ಪರಿಸರವನ್ನು ಬಿಟ್ಟು ಹೋಗಲು ದಾರಿಯಾಗಿದೆ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ ಹೇಳಿದರು.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶುಕ್ರವಾರ ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರ, ವತಿಯಿಂದ ಜಿಲ್ಲೆಯ ಆಸಕ್ತ ಕೃಷಿಕರಿಗೆ ಸಾವಯವ ಕೃಷಿ ಮತ್ತು ಜೇನು ಕೃಷಿ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

Advertisement

ಪ್ರತಿ ವರ್ಷ ಜೂನ್ 5 ರಂದು ವಿಶ್ವದಾದ್ಯಂತ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಗುತ್ತದೆ. 1972ರಲ್ಲಿ ವಿಶ್ವಸಂಸ್ಥೆಯು ಪರಿಸರ ಸಂರಕ್ಷಣೆಯ ಮಹತ್ವವನ್ನು ಜನರಲ್ಲಿ ಜಾಗೃತಿಗೊಳಿಸುವ ಉದ್ದೇಶದಿಂದ ಈ ದಿನವನ್ನು ಘೋಷಿಸಿತು. ಪರಿಸರದ ಸಂರಕ್ಷಣೆ, ನೈಸರ್ಗಿಕ ಸಂಪನ್ಮೂಲಗಳ ಸಮರ್ಪಕ ಬಳಕೆ, ಜೀವ ವೈವಿಧ್ಯದ ರಕ್ಷಣೆ ಹಾಗೂ ಸುಸ್ಥಿರ ಅಭಿವೃದ್ಧಿಯ ಕುರಿತು ಜನರಲ್ಲಿ ಅರಿವು ಮೂಡಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ ಎಂದು ರಜಿನಿಕಾಂತ ಹೇಳಿದರು. 

ಪ್ರಸ್ತುತ ಹವಾಮಾನ ಬದಲಾವಣೆ, ನೀರಿನ ಕೊರತೆ, ಮಣ್ಣಿನ ಫಲವತ್ತತೆಯ ಕುಸಿತ, ರಾಸಾಯನಿಕಗಳ ಅತಿಯಾದ ಬಳಕೆ ಹಾಗೂ ಪರಿಸರ ಮಾಲಿನ್ಯದಂತಹ ಸಮಸ್ಯೆಗಳು ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಈ ಸವಾಲುಗಳನ್ನು ಎದುರಿಸಲು ಪರಿಸರ ಸ್ನೇಹಿ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ.

ನಾವು ಪರಿಸರವನ್ನು ಉಳಿಸಿದರೆ ಪರಿಸರ ನಮ್ಮನ್ನು ಉಳಿಸುತ್ತದೆ. ಕೃಷಿ ಮತ್ತು ಪರಿಸರ ಒಂದಕ್ಕೊಂದು ಪೂರಕವಾಗಿದ್ದು, ಪರಿಸರ ಸ್ನೇಹಿ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇಂದಿನ ತರಬೇತಿಯಿಂದ ದೊರೆಯುವ ಮಾಹಿತಿಯನ್ನು ತಮ್ಮ ತಮ್ಮ ಕೃಷಿ ಚಟುವಟಿಕೆಗಳಲ್ಲಿ ಅಳವಡಿಸಿಕೊಂಡು ಸುಸ್ಥಿರ ಕೃಷಿಯತ್ತ ಹೆಜ್ಜೆ ಇಡಬೇಕೆಂದರು. ಈ ದಿನ ತರಬೇತಿಯುಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೆ ಕರಿಬೇವಿನ ಗಿಡವನ್ನು ತಮ್ಮ ತಾಕಿನಲ್ಲಿ ನೆಡಲು ಉಚಿತವಾಗಿ ನೀಡಿ, ಕರಿಬೇವು ಕೇವಲ ಅಡುಗೆಯ ರುಚಿ ಮತ್ತು ಪರಿಮಳವನ್ನು ಹೆಚ್ಚಿಸುವ ಎಲೆಯಲ್ಲ, ಇದೊಂದು ಅದ್ಭುತ ಔಷಧೀಯ ಗುಣಗಳನ್ನು ಹೊಂದಿರುವ ಸಸ್ಯವೆಂದರು. ಒಬ್ಬ ವ್ಯಕ್ತಿ ಒಂದು ಮರ ರೀತಿಯಲ್ಲಿ ಅಭಿಯಾನದಡಿ ಗಿಡ ನೆಟ್ಟು ಇತರರಿಗೂ ಸ್ಪೂರ್ತಿಯಾಗಲು ರಜನಿಕಾಂತ ಕರೆ ನೀಡಿದರು.

ಪ್ರಗತಿಪರ ಸಾವಯವ ಕೃಷಿಕರಾದ ಇಂದೂಧರ ಅವರು ತಮ್ಮ ಜಮೀನಿನಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಅಳವಡಿಸಿಕೊಂಡ ಸಾವಯವ ಕೃಷಿ ಪದ್ಧತಿಗಳು, ನೀರು ಮತ್ತು ಪೋಷಕಾಂಶಗಳ ಸಮರ್ಪಕ ನಿರ್ವಹಣೆಗೆ ಹೊದಿಕೆ, ಹಸಿರೆಲೆ ಗೊಬ್ಬರ ಬೆಳೆಗಳು, ಜೀವಾಮೃತ, ಬೀಜಾಮೃತ, ಘನ ಜೀವಾಮೃತ, ಎರೆಜಲ, ಅಮೃತಜಲ ಬಳಕೆ, ಬಹುಬೆಳೆ ಮತ್ತು ಮಿಶ್ರಬೆಳೆ ಪದ್ದತಿಯ ಮಹತ್ವದ ಕುರಿತು ರೈತರಿಗೆ ಮಾಹಿತಿ ನೀಡಿದರು. ಇದರೊಂದಿಗೆ ರೋಗ ಮತ್ತು ಕೀಟಗಳ ನಿರ್ವಹಣೆಗೆ ಬ್ರಹ್ಮಾಸ್ತ್ರ ನೀಮಾಸ್ತ್ರ, ಅಗ್ನಿಹಾಸ್ತ್ರ, ಹುಳಿ ಮಚ್ಚಿಗೆ, ಬಿಲ್ವ ರಸಾಯನ ತಯಾರಿಕೆಯ ಮತ್ತು ಬಳಸುವ ವಿಧಾನವನ್ನು ತಿಳಿಸಿದರು. ನಂತರ ಜೀವಾಮೃತ ತಯಾರಿಸುವ ವಿಧಾನವನ್ನು ರೈತರಿಗೆ ಪ್ರಾತ್ಯಕ್ಷಿಕೆಯ ಮೂಲಕ ಮನವರಿಕೆ ಮಾಡಿ ಕೊಟ್ಟರು.

ಹಿರಿಯೂರಿನ ಪ್ರಗತಿಪರ ಜೇನು ಕೃಷಿಕರಾದ ಶ್ರೀನಿವಾಸ್ ಅವರು ಜೇನು ಕೃಷಿಯ ಮಹತ್ವ, ಜೇನಿನ ಉಪ ಉತ್ಪನ್ನಗಳು ಹಾಗೂ ಜೇನು ಕುಟುಂಬದ ನಿರ್ವಹಣೆ ಕುರಿತು ತಮ್ಮ ಅಮೂಲ್ಯ ಅನುಭವಗಳನ್ನು ಹಂಚಿಕೊಂಡರು.

ಪ್ರಗತಿಪರ ರೈತರಾದ ಚಿತ್ರಲಿಂಗಪ್ಪರವರು ಮಾತನಾಡುತ್ತಾ, ಪರಿಸರ ಸ್ಣೇಹಿ ಕೃಷಿ ಪದ್ದತಿಗಳ ಅಳವಡಿಕೆಯಿಂದ ಪರಿಸರ ಸಮತೋಲನ ಕಾಪಡಲು ಸಹಕಾರಿಯಾಗಲಿದೆಂದರು.

ಸ್ಪೀಚ್ ಸಂಸ್ಥೆಯ ವಿಜಯಕುಮಾರ್ ಮತ್ತು ಶೇಷಣ್ಣ ಇವರು ಕೃಷಿ ಅರಣ್ಯ, ಮಣ್ಣು ಮತ್ತು ನೀರು ಸಂರಕ್ಷಣೆಯ ಮಹತ್ವದ ಕುರಿತು ತಿಳಿಸಿದರು.

ಜಿಲ್ಲಾ ಕೌಶಲ್ಯ ಅಭಿವೃದ್ದಿ ಅಧಿಕಾರಿಗಳಾದ ಮಾರುತಿ ಇವರು ತಮ್ಮ ಜಮೀನಿನಲ್ಲಿ ಅಳವಡಿಸಿಕೊಂಡ ಮರ ಆಧಾರಿತ ಕೃಷಿ ಪದ್ದತಿ ಹಾಗೂ ತಮ್ಮ ಇಲಾಖೆಯ ಯೋಜನೆಗಳ ಕುರಿತು ಮಾಹಿತಿ ನೀಡಿದರು, ಸದರಿ ತರಬೇತಿಯಲ್ಲಿ ಜಿಲ್ಲೆಯ ವಿವಿಧ ಗ್ರಾಮಗಳಿಂದ 72 ಜನ ಆಸಕ್ತ ರೈತ ಬಾಂಧವರು ಭಾಗವಹಿಸಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು