Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅರಾಜಕತೆ ವಿರುದ್ದ ಸಿಡಿದೆದ್ದ ಕೋಟೆನಾಡಿನ "ಭಲೆ ಹುಡುಗ"

Advertisement
ಅರಾಜಕತೆ ವಿರುದ್ದ ಸಿಡಿದೆದ್ದ ಕೋಟೆನಾಡಿನ "ಭಲೆ ಹುಡುಗ"
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭರತ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ರವಿಚಂದ್ರ ಹಾಗೂ ಭೀಮರಾಜ್ ಅವರು ಜಂಟಿಯಾಗಿ ನಿರ್ಮಾಣ ಮಾಡುತ್ತಿರುವ ನೂತನ ಚಿತ್ರ ಭಲೆ ಹುಡುಗ.
ಹಳ್ಳಿಯ ಜನರಲ್ಲಿ ಜಾಗೃತಿ ಮೂಡಿಸುವ ಹುಡುಗನೊಬ್ಬನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಚಿತ್ರದುರ್ಗದ ಎಂ.ನಿಂಗರಾಜು ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಬುದ್ದಿವಂತ ಮಕ್ಕಳು ಹಾಗೂ ಹಳ್ಳಿಯ ಜನರ ಸುತ್ತ ನಡೆಯುವ ಕಥಾಹಂದರ ಹೊಂದಿರುವ ಭಲೆ ಹುಡುಗ ಚಿತ್ರದಲ್ಲಿ ನಿರ್ದೇಶಕ ನಿಂಗರಾಜು ಅವರ ಪುತ್ರ ಶರತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಬರುವ ಅಕ್ಟೋಬರ್ ರಜೆಯಲ್ಲಿ ಈ ಚಿತ್ರದ ಶೂಟಿಂಗ್ ಪ್ರಾರಂಭಿಸಿ, ಚಿತ್ರದುರ್ಗ, ಚಂದವಳ್ಳಿ, ನಂದಿ ಗಿರಿಧಾಮದ‌ಸುತ್ತ ಮುತ್ತ ಒಂದು ತಿಂಗಳ ಕಾಲ ಚಿತ್ರೀಕರಣ ನಡೆಸಲು ಚಿತ್ರತಂಡ ಸಜ್ಜಾಗುತ್ತಿದೆ.

ಕೇವಲ‌ವರ್ಷದ ಹುಡುಗನೊಬ್ಬ ತನ್ನ ಹಳ್ಳಿಯಲ್ಲಿ ನಡೆಯುತ್ತಿರುವ ಅರಾಜಕತೆಯ ವಿರುದ್ಧ ತಿರುಗಿ ಬೀಳುತ್ತಾನೆ, ಅಲ್ಲದೆ ಹಳ್ಳಿಯ ಜನರಲ್ಲಿ ಬೇರೂರಿದ್ದ ಮೂಢನಂಬಿಕೆಯ ಬಗ್ಗೆ ಅರಿವು ಮೂಡಿಸುತ್ತಾನೆ. ಮತ್ತು ದುಶ್ಚಟಗಳಿಗೆ ದಾಸರಾಗಿರುವ ಹಳ್ಳಿಯ ಜನರನ್ನು ಜಾಗೃತಗೊಳಿಸುವಲ್ಲಿ ಆತ ಹೇಗೆಲ್ಲಾ ಹೋರಾಟ ನಡೆಸುತ್ತಾನೆ.

ಗ್ರಾಮದ ಜನರ ಪಾಲಿನ ದೇವರಂತಾಗುವ ಆತ ಎಲ್ಲರಿಂದಲೂ ಭಲೆ ಹುಡುಗ ಎನಿಸಿಕೊಳ್ಳುತ್ತಾನೆ. ಮಕ್ಕಳ ಸಾಹಸಮಯ ಕಥಾವಸ್ತು ಹೊಂದಿರುವ ಈ ಚಿತ್ರಕ್ಕೆ ಅನಿರುದ್ಧ ಶಾಸ್ತ್ರಿ ಅವರ ಸಂಗೀತ, ಯೋಗರಾಜ ಭಟ್ಟರ ಸಾಹಿತ್ಯ, ಪ್ರಮೋದ್ ಭಾರತೀಯ ಅವರ ಛಾಯಾಗ್ರಹಣ, ಥ್ರಿಲ್ಲರ್ ಮಂಜು ಅವರ ಸಾಹಸ, ಮಲ್ಲಿ ಅವರ ಸಂಕಲನ, ಮೋಹನ್ ಕುಮಾರ್ ಪ್ರಸಾದನ, ಆರ್.ಕೆ.ಗಾಂಧಿ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿರಲಿದೆ.
ಮಾಸ್ಟರ್ ಶರತ್, ಮಾಸ್ಟರ್ ಘನಶ್ಯಾಮ್, ಬೇಬಿ ಜಯಲಲಿತ, ಮಾಸ್ಟರ್ ಅಂಜನ್, ಬಲರಾಂ, ಎಂ ವಿ. ಸಮಯ್, ಜ್ಯೋತಿ ಮರೂರ್, ಡಾ.ಈಶ್ವರ್ ನಾಗನಾಥ ಭಲೆ ಹುಡುಗ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ