ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ದಾವಣಗೆರೆ ವಿಶ್ವವಿದ್ಯಾನಿಲಯ, ಗುಡ್ಡದರಂಗವ್ವನಹಳ್ಳಿ ಸ್ನಾತಕೋತ್ತರ ಕೇಂದ್ರ ಜ್ಞಾನ ಗಂಗೋತ್ರಿ, ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದಿಂದ ಸಂಸ್ಕೃತಿ ಸಂಭ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸ್ನಾತಕೋತ್ತರ ಕೇಂದ್ರ, ಜ್ಞಾನಗಂಗೋತ್ರಿಯ ವಿಶೇಷಾಧಿಕಾರಿ ಡಾ.ರಾಜೇಂದ್ರಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಭಾರತೀಯ ಸಂಸ್ಕೃತಿ, ಉಡುಗೆ ತೊಡುಗೆಗೆ ತನ್ನದೇ ಆದ ವೈಶಿಷ್ಠ್ಯತೆಯಿದೆ. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ನಮ್ಮ ದೇಶದ ಸಂಸ್ಕೃತಿ ವಿದೇಶಿಗರು ಮೆಚ್ಚುವಂತಿದೆ.
ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಇಂತಹ ಸಂಸ್ಕೃತಿ ಸಂಭ್ರಮದಲ್ಲಿ ಪಾಲ್ಗೊಂಡರೆ ಮನಸ್ಸು ವಿಕಸನಗೊಳ್ಳುತ್ತದೆ. ಮುಂದಿನ ದಿನಗಳಲ್ಲಿ ಸ್ನಾತಕೋತ್ತರ ಕೇಂದ್ರದ ಉಳಿವು ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯ ಎಂದು ಹೇಳಿದರು.
ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ಶಶಿಧರ ಡಿ. ಡಾ.ಕುಮಾರ ಎಂ.ಆರ್. ಹಾಗೂ ವಿದ್ಯಾರ್ಥಿಗಳು ಸಂಸ್ಕೃತಿ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.



