Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಕಸ್ಮಿಕ ಬೆಂಕಿ: ಹುಲ್ಲಿನ ಬಣವೆ ಭಸ್ಮ, ಆತಂಕದಲ್ಲಿ ರೈತ

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ಜಾನುವಾರುಗಳಿಗಾಗಿ ಸಂಗ್ರಹಿಸಿ ಬಣವೆ ಹಾಕಿದ್ದ ಮೇವಿನ ಹುಲ್ಲಿನ ಬಣವೆಗೆ ಬೆಂಕಿ ಬಿದ್ದ
 ಪರಿಣಾಮ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ತಾಲ್ಲೂಕಿನ ಹಾಲುಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಗೂಳೂರು ಹೋಬಳಿಯ ಹಾಲುಹೊಸಹಳ್ಳಿ ಗ್ರಾಮದ ರೈತ ರಂಗಸ್ವಾಮಿ ಎಂಬುವರಿಗೆ ಸೇರಿದ ಹುಲ್ಲಿನ ಬಣವೆ ಬೆಂಕಿಗೆ ಆಹುತಿಯಾಗಿದೆ.
ರೈತ ರಂಗಸ್ವಾಮಿ ಅವರು ಹಿತ್ತಲಲ್ಲಿ ಜಾನುವಾರುಗಳ ಮೇವಿಗಾಗಿ ರಾಗಿ ಹುಲ್ಲನ್ನು ಸಂಗ್ರಹಿಸಿ ಬಣವೆ ಹಾಕಿದ್ದರು.

ಈ ಬಣವೆಗೆ ಬೆಂಕಿ ಬಿದ್ದು ಹೊಗೆಯಾಡುತ್ತಿರುವುದು ಕಂಡು ಬಂದಿದೆ. ತಕ್ಷಣ ಇದನ್ನು ನೋಡಿದ ರಂಗಸ್ವಾಮಿ ಮನೆಯವರು ಅಕ್ಕಪಕ್ಕದ ತೋಟದವರಿಗೂ ಮಾಹಿತಿ ತಿಳಿಸಿದ್ದಾರೆ.
ತಕ್ಷಣ ಸ್ಥಳಕ್ಕೆ ಓಡಿ ಬಂದ ಅಕ್ಕಪಕ್ಕದ ತೋಟದವರೆಲ್ಲ ಸೇರಿ ಹುಲ್ಲಿನ ಬಣವೆಗೆ ಬಿದ್ದಿದ್ದ ಬೆಂಕಿಯನ್ನು ನಂದಿಸಲು ಯತ್ನಿಸಿದರಾದರೂ ಬೆಂಕಿ ಹೊತ್ತಿ ಉರಿಯುವುದು ಜಾಸ್ತಿಯಾಗಿದೆ. ತಕ್ಷಣ ಅಗ್ನಿಶಾಮಕ ಠಾಣೆಗೆ ದೂರವಾಣಿ ಕರೆ ಮಾಡಿ ಸುದ್ದಿ ಮುಟ್ಟಿಸಿದ್ದಾರೆ.


ಈ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಬಣವೆಯಲ್ಲಿ ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಿದರಾದರೂ ಅಷ್ಟರಲ್ಲಿ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಹೋಗಿತ್ತು.
ಬೆಂಕಿಗೆ ಆಹುತಿಯಾಗಿರುವ ಜಾನುವಾರುಗಳ ಮೇವಿನ ಮೌಲ್ಯ ಸುಮಾರು 1 ಲಕ್ಷಕ್ಕೂ ಅಧಿಕ ಎಂದು ಅಂದಾಜಿಸಲಾಗಿದೆ.


ಜಾನುವಾರುಗಳ ಮೇವಿಗಾಗಿ ಸಂಗ್ರಹಿಸಿಟ್ಟಿದ್ದ ಹುಲ್ಲು ಬೆಂಕಿಗೆ ಆಹುತಿಯಾಗಿರುವ ಹಿನ್ನೆಲೆಯಲ್ಲಿ ರಾಸುಗಳಿಗೆ ಮೇವು ಸಂಗ್ರಹಿಸಲು ರೈತ ರಂಗಸ್ವಾಮಿ ಅವರು ಪರದಾಡುವಂತಾಗಿದೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ