Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಡಕಚೇರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ

Advertisement
ಚಂದ್ರವಳ್ಳಿ ನ್ಯೂಸ್, ಗದಗ:
ನಾಡಕಚೇರಿಯಲ್ಲಿ ಬೆಳೆಹಾನಿ ಪರಿಹಾರ ಬಾರದಕ್ಕೆ ಅಧಿಕಾರಿಗಳ ಎದುರಲ್ಲೇ ಮನನೊಂದು ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ.
ನರಗುಂದ ತಾಲೂಕಿನ ಬೆಳ್ಳೇರಿ ಗ್ರಾಮದ ರೈತ ಸಿದ್ದನಗೌಡ ಹಿರೇಗೌಡ್ರು ಆತ್ಮಹತ್ಯೆಗೆ ಯತ್ನಿಸಿದ್ದು
, ಸಂಕಟ ತಾಳಲಾರದೆ ನಾಡ ಕಚೇರಿಯಲ್ಲೇ ನರಳಾಡಿದ್ದಾರೆ.

ನಾಲ್ಕು ಎಕರೆ ಜಮೀನಿನಲ್ಲಿ ಗೋವಿನ ಜೋಳ, ಈರುಳ್ಳಿ ಬೆಳೆಯನ್ನ ಸಿದ್ದನಗೌಡ ಹಿರೇಗೌಡ್ರು ಬೆಳೆದಿದ್ದರು. ಆದರೆ, ಮಳೆ ಮತ್ತು ಮಲಪ್ರಭಾ ನದಿ ಪ್ರವಾಹದಿಂದ ಬೆಳೆಗೆ ಹಾನಿಯಾಗಿದೆ. ಹೀಗಿದ್ದರೂ ಈ ಬಗ್ಗೆ ಬೆಳೆ ಹಾನಿ ಎಂಟ್ರಿಯಾಗಿಲ್ಲ. ವಿಷಯವನ್ನು ತಹಶೀಲ್ದಾರ್​ ಮತ್ತು ಜಿಲ್ಲಾಧಿಕಾರಿಗಳ ಗಮನಕ್ಕೆ ತರದೆ ಗ್ರಾಮ ಲೆಕ್ಕಾಧಿಕಾರಿ ನಿರ್ಲಕ್ಷ್ಯತೋರಿದ್ದಾರೆ ಎಂಬುದು ಆರೋಪ ರೈತನದ್ದು. ಹೀಗಾಗಿ ಮನನೊಂದಿದ್ದ ಸಿದ್ದನಗೌಡ ಹಿರೇಗೌಡ್ರು ನಾಡಕಚೇರಿ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ವಿಷ ಸೇವಿಸಿದ್ದ ಸಿದ್ದನಗೌಡ ಹಿರೇಗೌಡ್ರನ್ನು ಸ್ಥಳದಲ್ಲಿದ್ದ ರೈತರು ತಕ್ಷಣ ನರಗುಂದ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ಕೊಂಡೊಯ್ದು ದಾಖಲಿಸಿದ್ದಾರೆ. ಆದರೆ ಪರಿಸ್ಥಿತಿ ಗಂಭೀರವಾಗಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ನರಗುಂದ ಡಿವೈಎಸ್ಪಿ ಪ್ರಭು ಸೇರಿ ಅಧಿಕಾರಿಗಳು ಘಟನೆ ಬಗ್ಗೆ ಮಾಹಿತಿ ಪಡೆದಿದ್ದು, ಸಿದ್ದನಗೌಡ ಹಿರೇಗೌಡರಿಗೆ ಏನಾದರೂ ಹೆಚ್ಚುಕಮ್ಮಿ ಆದರೆ ಅಧಿಕಾರಿಗಳೇ ಹೊಣೆ ಎಂದು ಈ ವೇಳೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ