Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತ ನಾಯಕ ಬಿ.ಎಸ್.ಯಡಿಯೂರಪ್ಪನವರ ಅಭಿಮಾನೋತ್ಸವದ ಪ್ರಯುಕ್ತ ವೈಭವೋಪೇತವಾಗಿ ನಡೆದ ಮೆರವಣಿಗೆ  

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಐವತ್ತು ವರ್ಷಗಳ ಸುದೀರ್ಘ ರಾಜಕೀಯ ಪಣಯವನ್ನು ಕಂಡಿರುವ ರೈತ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಅಭಿಮಾನೋತ್ಸವದ ಮುನ್ನಾ ದಿನ ಶುಕ್ರವಾರ ನಗರದಲ್ಲಿ ವೈಭವೋಪೇತ ಮೆರವಣಿಗೆ ನಡೆಯಿತು.

ದಕ್ಷಿಣ ಭಾರತದಲ್ಲಿಯೆ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ಕಮಲವನ್ನು ಅರಳಿಸಿದ ಬಿ.ಎಸ್.ಯಡಿಯೂರಪ್ಪನವರು ಬಡವರ ಮನೆಯ ಹೆಣ್ಣು ಮಗುವಿಗೆ ಭಾಗ್ಯಲಕ್ಷಿ ಯೋಜನೆಯನ್ನು ಜಾರಿಗೆ ತಂದು ಮಹಿಳೆಯರ ಸಂಜೀವಿನಿ ಎನಿಸಿಕೊಂಡರು. ರೈತರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ರೈತ ನಾಯಕನ ಮೆರವಣಿಗೆಯುದ್ದಕ್ಕೂ ಅಲ್ಲಲ್ಲಿ ಪಟಾಕಿಗಳನ್ನು ಸಿಡಿಸಿ ಕುಣಿದು ಕುಪ್ಪಳಿಸಿದ ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟುಂತಿತ್ತು.

ಸಂಜೆ ಆರು ಗಂಟೆಗೆ ತಂಪು ಹೊತ್ತಿನಲ್ಲಿ ಕನಕ ವೃತ್ತದಿಂದ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಆರಂಭಗೊಂಡ ಮೆರವಣಿಗೆ ಸಂಗೊಳ್ಳಿರಾಯಣ್ಣ ವೃತ್ತ, ಗಾಂಧಿ ಸರ್ಕಲ್, ಎಸ್.ಬಿ.ಎಂ.ವೃತ್ತ, ಅಂಬೇಡ್ಕರ್ ಪ್ರತಿಮೆ ಮುಂಭಾಗದಿಂದ ಮದಕರಿನಾಯಕನ ಪ್ರತಿಮೆ ಬಳಿ ಮುಕ್ತಾಯಗೊಂಡಿತು.

news_1778287059_4_509.webp

 

ಡೊಳ್ಳು, ಉರುಮೆ, ತಮಟೆ, ನಂದಿಕೋಲು, ವೀರಗಾಸೆ, ಗೊರವರ ಕುಣಿತ, ಕಹಳೆ, ಸೋಮನ ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ಮೆರವಣಿಗೆಗೆ ಕಳೆ ಕಟ್ಟಿದಂತಿತ್ತು. ತೆರೆದ ವಾಹನದಲ್ಲಿ ವಿರಾಜಮಾನರಾಗಿದ್ದ ಬಿ.ಎಸ್.ಯಡಿಯೂರಪ್ಪನವರು ರಸ್ತೆಯ ಎರಡು ಬದಿಗಳಲ್ಲಿ ನಿಂತಿದ್ದ ಜನತೆಯತ್ತ ಕೈಬೀಸಿ ಅಭಿಮಾನೋತ್ಸವಕ್ಕೆ ಪ್ರತಿಯಾಗಿ ಕೃತಜ್ಞತೆ ಸಲ್ಲಿಸುತ್ತಿದ್ದರು.

ನಾನಾ ಬಗೆಯ ಸ್ಥಬ್ದ ಚಿತ್ರಗಳು ಮೆರವಣಿಗೆಯಲ್ಲಿ ಕಣ್ಮನ ಸೆಳೆಯುತ್ತಿದ್ದವು.
ಬಿಜೆಪಿ.ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿ.ವೈ.ರಾಘವೇಂದ್ರ, ಸಂಸದ ಗೋವಿಂದ ಎಂ.ಕಾರಜೋಳ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಮಾಜಿ ಸಚಿವರುಗಳಾದ ಶ್ರೀರಾಮುಲು, ಜನಾರ್ಧನರೆಡ್ಡಿ, ಬಿ.ಸಿ.ಪಾಟೀಲ್,

ಬಿಜೆಪಿ. ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಲಿಂಗಮೂರ್ತಿ, ಜಿ.ಹೆಚ್.ಮೋಹನ್‌ಕುಮಾರ್ ಸೇರಿದಂತೆ ಬಿಜೆಪಿ.ಯ ಅನೇಕ ಮುಖಂಡರುಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

 

 

 

 

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!