Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Traveling Tips

ಹಿರಿಯೂರಿನಲ್ಲಿ ಡಿಸಿಎಂ ಶಿವಕುಮಾರ್ ಅವರಿಗೆ ಅದ್ಧೂರಿ ಸ್ವಾಗತ

 ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಬೆಂಗಳೂರಿಗೆ ತೆರಳುವ ಮಾರ್ಗಮಧ್ಯೆ ಹಿರಿಯೂರು ನಗರಕ್ಕೆ ಭೇಟಿ ನೀಡಿದ ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರಿಗೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅತ್ಯಂತ ಪ್ರೀತಿಪೂರ್ವಕವಾಗಿ ಸ್ವಾಗತಿಸಿ
, ಸನ್ಮಾನಿಸಿದರು.

​ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ, ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಮೂಲಕ ಪಕ್ಷವನ್ನು ಬಲಿಷ್ಠವಾಗಿ ಕಟ್ಟಿದ ಹೆಮ್ಮೆಯ ಜನನಾಯಕ ಎಂದು ಬಣ್ಣಿಸಿದ ಕಾರ್ಯಕರ್ತರು ಡಿ.ಕೆ. ಶಿವಕುಮಾರ್ ಅವರಿಗೆ ಹಿರಿಯೂರಿನಲ್ಲಿ ಅದ್ಧೂರಿ ಅಭಿನಂದನೆ ಸಲ್ಲಿಸಲಾಯಿತು.

​​ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಶುಭಕೋರಿದ ಪ್ರಮುಖರಾದ ಕೆಪಿಸಿಸಿ ಸದಸ್ಯ ಅಮ್ಮತೇಶ್ವರ ಸ್ವಾಮಿ, ಮುನ್ನ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ಜೆ. ರಮೇಶ್, ​ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಲಿಂಗೆ ಗೌಡ, ಕೃಷಿಕ ಸಮಾಜದ ಅಧ್ಯಕ್ಷ ಚಿಗಳಿಕಟ್ಟೆ ಕಾಂತರಾಜ್, ಸೂರಗೊಂಡನಹಳ್ಳಿ ಕೃಷ್ಣಮೂರ್ತಿ, ಈ. ಮಂಜುನಾಥ್, ಪಾತಲಿಂಗಪ್ಪ, ಚಂದ್ರಶೇಖರ್, ಮಮತ, ಶಿವರಂಜಿನಿ, ಬಾಲಕೃಷ್ಣ ಆಚಾರ್ಯ ಹಾಗೂ ಪಕ್ಷದ ವಿವಿಧ ಸ್ತರದ ನಾಯಕರು ಭಾಗವಹಿಸಿದ್ದರು.



​ಒಗ್ಗಟ್ಟಿನ ಪ್ರದರ್ಶನ:
​ನಗರಸಭೆಯ ಮಾಜಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು
, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಯ ಮಾಜಿ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.


ಕಾಂಗ್ರೆಸ್ ಪಕ್ಷದ ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಮತ್ತು ನೂರಾರು ಕಾರ್ಯಕರ್ತರು ತಮ್ಮ ನೆಚ್ಚಿನ ನಾಯಕನಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.

​ಪಕ್ಷದ ಸಂಘಟನೆ ಮತ್ತು ಕಾರ್ಯಕರ್ತರ ಹಿತರಕ್ಷಣೆಗಾಗಿ ಶ್ರಮಿಸುತ್ತಿರುವ ಡಿ.ಕೆ. ಶಿವಕುಮಾರ್ ಅವರ ಭೇಟಿಯು ಸ್ಥಳೀಯ ಕಾರ್ಯಕರ್ತರಲ್ಲಿ ಹೊಸ ಉತ್ಸಾಹವನ್ನು ತುಂಬಿದೆ.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆಪಿಎಸ್​ಸಿ ಅಕ್ರಮ ತನಿಖೆ: ಸುಪ್ರೀಂಕೋರ್ಟ್‌ಗೆ ತಪ್ಪು ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ರಾಜ್ಯಪಾಲರಿಗೆ ದೂರುಖಾಸಗಿ ವಿವಿ ಹಾಸ್ಟೆಲ್ ಕಟ್ಟಡದ 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವುವಾಲ್ಮೀಕಿ ವೃತ್ತದ ಬಳಿ ಬಿದಿರಿನ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮಇಂಡಿ ಮಹತ್ವದ ಸಭೆ: ನವೆಂಬರ್ 5ರಂದು ಬೃಹತ್ ಪ್ರತಿಭಟನೆಗೆ ಕರೆಪಕ್ಷ ಬಿಟ್ಟವರೆಲ್ಲಾ ನಿಮ್ಮ ಗೆಳೆಯರೇ ಎಂದ ಖರ್ಗೆ; ಸಿಂಧಿಯಾ ನನ್ನವರಲ್ಲ ಎಂದ ರಾಹುಲ್!ನೂತನ ರಾಜ್ಯಪಾಲೆಯಾಗಿ ಸುಧಾ ಯಾದವ್ ಪ್ರಮಾಣವಚನ ಸ್ವೀಕಾರಶ್ರೀ ಭೂತರಾಯಸ್ವಾಮಿ ದೇವಾಲಯದಲ್ಲಿ ನೂತನ ಬೆನವಗಳ ಪ್ರತಿಷ್ಠಾಪನೆ ಮಹೋತ್ಸವನೂತನ ರಾಜ್ಯಪಾಲರಿಗೆ ಸ್ವಾಗತ, ನಿರ್ಗಮಿತ ರಾಜ್ಯಪಾಲರಿಗೆ ಗೌರವ ನಮನ: ಡಿ.ಕೆ. ಶಿವಕುಮಾರ್"ಕಾಕ್ರೋಚ್ ಮತ್ತು ಕಾಂಗ್ರೆಸ್ ಎರಡೂ ಒಂದೇ": ಪ್ರಿಯಾಂಕ್ ಖರ್ಗೆ ಹೇಳಿಕೆ ವಿರುದ್ಧ ಅಶೋಕ್ ಆಕ್ರೋಶ!ವಿಕಲಚೇತನರ ‘ವಿಧಾನಸೌಧ ಚಲೋ’ ಪಾದಯಾತ್ರೆಗೆ ಬೆಂಬಲ: ಆರ್. ಅಶೋಕ್