Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರನ್ನ ರಥಯಾತ್ರೆಗೆ ಭವ್ಯ ಸ್ವಾಗತ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರನ್ನ ವೈಭವ-2025 ಅಂಗವಾಗಿ ಚಿತ್ರದುರ್ಗ ನಗರಕ್ಕೆ ಆಗಮಿಸಿದ ರನ್ನ ರಥಯಾತ್ರೆಗೆ ಬುಧವಾರ ರಾತ್ರಿ ಜಾನಪದ ಕಲಾಮೇಳಗಳೊಂದಿಗೆ ಭವ್ಯ ಸ್ವಾಗತ ಕೋರಲಾಯಿತು.
ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆಯುವ ರನ್ನ ವೈಭವ-2025 ಅಂಗವಾಗಿ ರನ್ನ ರಥಯಾತ್ರೆಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಚರಿಸಲಿದ್ದು, ತುಮಕೂರಿನಿಂದ ಶಿರಾ, ಹಿರಿಯೂರು ಮಾರ್ಗವಾಗಿ ಚಿತ್ರದುರ್ಗ ನಗರಕ್ಕೆ ಆಗಮಿಸಿದ ರಥಯಾತ್ರೆಯನ್ನು ಮದಕರಿ ವೃತ್ತದಲ್ಲಿ ಸ್ವಾಗತಿಸಲಾಯಿತು.

  ಮದಕರಿ ವೃತ್ತದಿಂದ ಮೆರವಣಿಗೆ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮಾರ್ಗವಾಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಮೀಪದ ಒನಕೆ ಓಬವ್ವ ವೃತ್ತಕ್ಕೆ ಆಗಮಿಸಿತು. ವೇಳೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ರನ್ನನ ಮೂರ್ತಿಗೆ ಪೂಜೆ ಸಲ್ಲಿಸಿ, ಪುಪ್ಪನಮನ ಸಲ್ಲಿಸಿದರು. ರನ್ನ ರಥ ಸಮಿತಿಯ ಸದಸ್ಯರಿಂದ ರನ್ನನ ಗದೆಯನ್ನು ಹಸ್ತಾಂತರ  ಮಾಡಿಕೊಂಡ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅದನ್ನು ಸಾರ್ವಜನಿಕವಾಗಿ ಪ್ರದರ್ಶನ ಮಾಡುವ ಮೂಲಕ ರನ್ನ ರಥಕ್ಕೆ ಚಾಲನೆ ನೀಡಿದರು.

ರನ್ನ ರಥಯಾತ್ರೆಯು ಚಿತ್ರದುರ್ಗ ಜಿಲ್ಲೆಗೆ ಆಗಮಿಸಿದ ವೇಳೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಾಲತೇಶ್ ಮುದ್ದಜ್ಜಿ, ಖಜಾಂಚಿ ಮಲ್ಲಿಕಾರ್ಜುನ್, ರಾಜ್ಯ ಪರಿಷತ್ ಸದಸ್ಯ ರಾಜಪ್ಪ, ನಿರ್ದೇಶಕರಾದ ಡಾ.ಬಿ.ಟಿ.ಲೋಲಾಕ್ಷಮ್ಮ,

ಉಮೇಶಯ್ಯ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಟಿ.ಹೆಚ್.ಬಸವರಾಜಪ್ಪ, ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಸಾರ್ವಜನಿಕರು ಭಾಗವಹಿಸಿ ರಥಯಾತ್ರೆಯ ಸ್ವಾಗತ ಮತ್ತು ಬೀಳ್ಕೊಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.  ನಂತರ ರಥಯಾತ್ರೆಯು ಚಿತ್ರದುರ್ಗ ನಗರದಿಂದ ಕೂಡ್ಲಿಗಿ ಮಾರ್ಗವಾಗಿ ಹೊಸಪೇಟೆಗೆ ತೆರಳಿತು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ