Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೋಡೆತ್ತು ಜತೆ ಬಂದ ಚಿಕ್ಕಣ್ಣ, ಮೂರು ಭಾಷೆಯ ಬೃಹತ್ ಸಿನಿಮಾ!

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜೋಡೆತ್ತು ಜತೆ ಬಂದ ಚಿಕ್ಕಣ್ಣ ಮೂರು ಭಾಷೆಯ ಬೃಹತ್ ಸಿನಿಮಾ!
ತುತ್ತು, ಮುತ್ತು, ಕುತ್ತುಗಳ ರೋಚಕ ಪಯಣ..!
ಚಿಕ್ಕಣ್ಣ ನಾಯಕ ನಟರಾಗಿರುವ ಹೊಸ ಸಿನಿಮಾಕ್ಕೆ ಜೋಡೆತ್ತು ಎಂದು ನಾಮಕರಣ ಮಾಡಲಾಗಿದೆ. ಸೋಮಶೇಖರ್ (ಕಟ್ಟಿಗೇನಹಳ್ಳಿ) ನಿರ್ಮಾಣದ, ಎಸ್.ಮಹೇಶ್ ಕುಮಾರ್ ನಿರ್ದೇಶನವಿರುವ ಈ ಚಿತ್ರದ ಮುಹೂರ್ತ ಅದ್ಧೂರಿಯಾಗಿ ನೇರವೇರಿದೆ. ಖ್ಯಾತ ನಿರ್ದೇಶಕ, ನಿರ್ಮಾಪಕ ಆರ್.ಚಂದ್ರು ಕ್ಯಾಮೆರಾ ಸ್ವಿಚ್ ಆನ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಸ್ಯಾಂಡಲ್‌ವುಡ್ ಅಧ್ಯಕ್ಷಶರಣ್ ಆರಂಭ ಫಲಕ ತೋರಿಸಿ, ಟೈಟಲ್ ಟೀಸರ್ ಬಿಡುಗಡೆ ಮಾಡಿ ಜೋಡೆತ್ತುತಂಡಕ್ಕೆ ಶುಭ ಹಾರೈಸಿದರು. ಕಂದಾಯ ಸಚಿನ ಕೃಷ್ಣ ಬೈರೇಗೌಡ ಸಮಾರಂಭಕ್ಕೆ ಆಗಮಿಸಿ ಜೋಡೆತ್ತುಬಳಗದ ಬಲ ಹೆಚ್ಚಿಸಿದರು.

ಸದ್ಯ ಚಿಕ್ಕಣ್ಣ ಹಾಗೂ ತೆಲುಗಿನ ಸುನಿಲ್ ಕಾಣಿಸಿಕೊಂಡಿರುವ ಟೈಟಲ್ ಟೀಸರ್ ಹರಿಬಿಡಲಾಗಿದ್ದು, ‘ಡಿ ಬೀಟ್ಸ್ಯೂ ಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಿದೆ. ಕನ್ನಡ ಸೇರಿದಂತೆ ತಮಿಳು ಹಾಗೂ ತೆಲುಗಿನಲ್ಲಿ ಈ ಸಿನಿಮಾ ತಯಾರಾಗುತ್ತಿದ್ದು, ಆಯಾ ಭಾಷೆಯ ಕಲಾವಿದರು ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬ ಮಾಹಿತಿ ಚಿತ್ರತಂಡದಿಂದ ಕೇಳಿಬಂತು.

ಎಲ್ಲಾ ಆಯಾಮದಲ್ಲೂ ಈ ಸಿನಿಮಾ ಅದ್ಧೂರಿಯಾಗಿದೆ ಎಂಬುದಕ್ಕೆ ಟೈಟಲ್ ಟೀಸರ್ ಸಾಕ್ಷಿಯಾಗಿದೆ. ನುರಿತ ಕಲಾವಿದರು, ತಂತ್ರಜ್ಞರೇ ತುಂಬಿರುವ ಈ ಸಿನಿಮಾ ಹಲವು ಮೊದಲುಗಳಿಗೆ ಸಾಕ್ಷಿಯಾಗಿದೆ. ಜೋಡೆತ್ತುದೊಡ್ಡ ಮಟ್ಟದಲ್ಲಿ ಹಿಟ್ ಆಗಲಿಎಂದು ಶರಣ್ ಶುಭ ಹಾರೈಸಿದರು.

ಈ ಸಿನಿಮಾದ ಕಥೆ ೮೦ರ ದಶಕದ ಕಾಲಘಟ್ಟದಲ್ಲಿ ನಡೆಯುತ್ತದೆ. ನಿಜವಾದ ಜೋಡೆತ್ತುಯಾರೆಂಬುದನ್ನು ಸದ್ಯದಲ್ಲೇ ತಿಳಿಸುತ್ತೇವೆ. ಇದು ನನ್ನ ಕೆರಿಯರ್‌ನಲ್ಲೇ ದೊಡ್ಡ ಬಜೆಟ್‌ನ ಸಿನಿಮಾ. ಹಳ್ಳಿಯಲ್ಲಿ ಶುರುವಾಗಿ ಹಳ್ಳಿಯಲ್ಲೇ ಮುಗಿಯುವ ಸಿನಿಮಾ. ಫ್ಯಾಮಿಲಿ ಸೆಂಟಿಮೆಂಟ್, ಕಾಮಿಡಿ, ಆಕ್ಷನ್ ಎಲ್ಲಾ ಅಂಶಗಳೂ ಕೂಡಿರುವ ಸಿನಿಮಾವಿದು. ನವೆಂಬರ್‌ನಿಂದ ಶೂಟಿಂಗ್ ಶುರುವಾಗಲಿದೆ. ಅಂದಹಾಗೆ ಈ ಸಿನಿಮಾದ ಟೈಟಲ್ ರಾಮಮೂರ್ತಿ ಅವರ ಬಳಿಯಿತ್ತು. ನಮಗಾಗಿ ಬಿಟ್ಟುಕೊಟ್ಟರು ಅವರಿಗೆ ಧನ್ಯವಾದಗಳುಎಂದರು ನಟ ಚಿಕ್ಕಣ್ಣ.



ಈ ಚಿತ್ರದಲ್ಲಿ ಚಿಕ್ಕಣ್ಣ ಅವರ ಪಾತ್ರ ಹಾಗೂ ಗೆಟಪ್ ಎರಡೂ ಭಿನ್ನವಾಗಿದೆ. ಕಥೆಯಲ್ಲಿ ಗಟ್ಟಿತನವಿದೆ. ಇದು ಪಕ್ಕಾ ದೇಸಿ ಸೊಗಡಿನಲ್ಲಿ ತಯಾರಾಗುತ್ತಿರುವ ಸಿನಿಮಾ. ನಾನೂ ಮಂಡ್ಯ ಸೀಮೆಯಿಂದ ಬಂದಿರುವುದರಿಂದ ಅಲ್ಲಿನ ಸೊಗಡನ್ನು ಈ ಸಿನಿಮಾದಲ್ಲಿ ಸಾಧ್ಯವಾದಷ್ಟೂ ಕಟ್ಟಿಕೊಡಲು ಪ್ರಯತ್ನಿಸುತ್ತೇನೆಎಂದರು ನಿರ್ದೇಶಕ ಮಹೇಶ್ ಕುಮಾರ್.

ಆಕಾಶ್ ಎಂಟರ್‌ಪ್ರೈಸಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಮೂರನೇ ಸಿನಿಮಾವಿದು. ಹಿಂದಿನ ಸಿನಿಮಾಗಳಿಗಿಂತ ಇದು ಭಿನ್ನವಾಗಿರಲಿದೆ. ದೊಡ್ಡ ಮಟ್ಟದಲ್ಲಿ ನಿರ್ಮಿಸಿ, ಬಿಡುಗಡೆ ಮಾಡುವ ಆಲೋಚನೆಯಿದೆ. ಮಹೇಶ್ ದೇವ್ ಕಥೆಯನ್ನು ನೀಟಾಗಿ ಬರೆದಿದ್ದಾರೆ. ಅದನ್ನು ತೆರೆಯ ಮೇಲೆ ಇನ್ನೂ ಸೊಗಸಾಗಿ ಮೂಡಿಬರುವಂತೆ ಮಾಡಲು ಯೋಜನೆ ಹಾಕಿಕೊಂಡಿದ್ದೇವೆ. ಬಜೆಟ್‌ನ ಯಾವುದೇ ಮಿತಿಯಿಲ್ಲಎಂಬುದು ನಿರ್ಮಾಪಕ ಸೋಮಶೇಖರ್ (ಕಟ್ಟಿಗೇನಹಳ್ಳಿ) ಅನಿಸಿಕೆ.

ಈ ಚಿತ್ರಕ್ಕೆ ವಿ.ಹರಿಕೃಷ್ಣ ಐದು ಹಾಡುಗಳನ್ನು ಹೊಸೆಯಲಿದ್ದಾರೆ. ಎಲ್ಲವೂ ಭಿನ್ನವಾಗಿರಲಿದ್ದು, ಮಾಸ್-ಕ್ಲಾಸ್ ಅಂಶಗಳಿಂದ ಕೂಡಿರಲಿದೆ ಎಂಬುದು ಹರಿಕೃಷ್ಣ ಮಾತು. ಈಗಾಗಲೇ ಸ್ಟಾರ್ ಸಿನಿಮಾಗಳಿಗೆ ಕ್ಯಾಮೆರಾಮನ್ ಆಗಿ ಕಾರ್ಯ ನಿರ್ವಹಿಸಿರುವ ಸುಧಾಕರ್ ಎಸ್ ರಾಜ್ ಜೋಡೆತ್ತುಗಳಿಗೆ ಕ್ಯಾಮೆರಾ ಕಣ್ಣಾಗಿದ್ದಾರೆ. ಮಾಸ್ತಿ, ರಾಜಶೇಖರ್ ಹಾಗೂ ರಘು ನಿಡುವಳ್ಳಿ ಈ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದು, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಜೋಡೆತ್ತು ಸಿನಿಮಾಕ್ಕಿದೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ