Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಜ್ಯೂನಿಯರ್ ವಿದ್ಯಾರ್ಥಿ!?

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇಂಜಿನಿಯರಿಂಗ್ ಕಾಲೇಜ್‌ನ ವಿದ್ಯಾರ್ಥಿನಿ ಮೇಲೆ ಅದೇ ಕಾಲೇಜಿನ ಜ್ಯೂನಿಯರ್ ವಿದ್ಯಾರ್ಥಿ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ.


ಸಂತ್ರಸ್ತೆ ವಿದ್ಯಾರ್ಥಿನಿ ಈ ಕುರಿತು ಹನುಮಂತ ನಗರ ಪೊಲೀಸ್ ಠಾಣೆಗೆ ಅ.15 ರಂದು ದೂರು ನೀಡಿ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.

ಕಾಲೇಜ್‌ನ ಶೌಚಾಲಯಕ್ಕೆ ಕಳೆದ ಅಕ್ಟೋಬರ್ 10 ರಂದು ಎಳೆದೊಯ್ದು ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ, ನಂತರ ಅತ್ಯಾಚಾರ ಎಸಗಿದ್ದಾನೆ ಎಂದು ಹನುಮಂತ ನಗರ ಪೊಲೀಸ್ ಠಾಣೆಗೆ ವಿದ್ಯಾರ್ಥಿನಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು 21 ವರ್ಷದ ಜೀವನ್ ಗೌಡ ಎಂಬ ಆರೋಪಿಯನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ದೂರಿನ ಸಾರ-
ಅಕ್ಟೋಬರ್
10ರಂದು ಬೆಳಗ್ಗೆ 8.55ಕ್ಕೆ ತರಗತಿಗೆ ಹಾಜರಾಗಿದ್ದೆ. ಆರೋಪಿ ಜೀವನ್​ನಿಂದ ಕೆಲವೊಂದು ಸಾಮಗ್ರಿಗಳನ್ನು ಕಲೆಕ್ಟ್ ಮಾಡಿಕೊಳ್ಳಬೇಕಾಗಿದ್ದರಿಂದ ಲಂಚ್ ಬ್ರೇಕ್​​ನಲ್ಲಿ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದೆ.
ಲಂಚ್ ಬ್ರೇಕ್‌ನಲ್ಲಿ ಭೇಟಿಯಾದಾಗ ಜೀವನ್ ಸ್ವಲ್ಪ ಮಾತನಾಡಬೇಕು
ಎಂದು ಹೇಳಿ ನನ್ನನ್ನು ಡೌನ್ ಸ್ಪೇರ್ಸ್​ಗೆ ಕರೆದೊಯ್ದಿದ್ದ.

ಅಲ್ಲಿಂದ ಕಾಲೇಜ್‌ನ 7ನೇ ಮಹಡಿಯಲ್ಲಿರುವ ಪಿಜಿ ಬ್ಲಾಕ್​ಗೆ ಕರೆದೊಯ್ದು ಬಲವಂತವಾಗಿ ಕಿಸ್ ಮಾಡಲು ಯತ್ನಿಸಿದ್ದಾನೆ. ತಪ್ಪಿಸಿಕೊಂಡು 6ನೇ ಮಹಡಿಗೆ ಬಂದಾಗ ಬಲವಂತವಾಗಿ ಪುರುಷರ ಶೌಚಾಲಯದೊಳಗೆ ಎಳೆದೊಯ್ದು ಅಸಹಜವಾಗಿ ವರ್ತಿಸಿದ್ದಾನೆ.

ಬಳಿಕ ಡೋರ್ ಲಾಕ್ ಮಾಡಿ ಅಸಹಜವಾಗಿ ವರ್ತಿಸಿ ಬಳಿಕ ಅತ್ಯಾಚಾರ ಎಸಗಿದ್ದಾನೆ. ಈ ವೇಳೆ ನನ್ನ ಮೊಬೈಲ್ ಕೂಡ ಆತನೇ ತೆಗೆದುಕೊಂಡಿದ್ದು, ನನ್ನ ಸ್ನೇಹಿತರು ಕರೆ ಮಾಡಿದರೂ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ ಎಂದು ದೂರಿನಲ್ಲಿ ವಿದ್ಯಾರ್ಥಿನಿ ಆರೋಪಿಸಿದ್ದಾಳೆ.

ಘಟನೆ ಬಗ್ಗೆ ಹೇಳಿದರೆ ಪೋಷಕರು ಆಘಾತಗೊಳ್ಳುತ್ತಾರೆ ಎಂದು ಮತ್ತು ಮುಜುಗರವಾಗಿ ಯಾರಿಗೂ ಹೇಳಿರಲಿಲ್ಲ. ಆದರೆ ಈ ಬಗ್ಗೆ ಆಪ್ತ ಸ್ನೇಹಿತರ ಬಳಿ ಹೇಳಿಕೊಂಡಾಗ ಅವರು ಧೈರ್ಯ ತುಂಬಿದ್ದರಿಂದ ಪೋಷಕರಿಗೆ ತಿಳಿಸಿ, ಹನುಮಂತನಗರ ಠಾಣೆಗೆ ತೆರಳಿ ದೂರು ನೀಡಿರುವುದಾಗಿ ಸಂತ್ರಸ್ತೆ ವಿದ್ಯಾರ್ಥಿನಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅತ್ಯಾಚಾರ ಪ್ರಕರಣದ ಆರೋಪಿ ಬಂಧಿಸಿ ಕಾಲೇಜ್‌ ಕ್ಯಾಂಪಸ್‌ನೊಳಗಿರುವ ಸಿಸಿಟಿವಿ ಹಾಗೂ ದೈಹಿಕ ಹಿಂಸೆಯ‌ಬಗೆಗಿನ ಸಾಕ್ಷ್ಯಗಳನ್ನ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ