ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಪಾರ್ಶ್ವನಾಥ ವಿದ್ಯಾಸಂಸ್ಥೆಯಿಂದ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಶನಿವಾರ ಮಕ್ಕಳಿಗೆ ಗಾಳಿಪಟ್ಟ ಹಬ್ಬವನ್ನು ಆಯೋಜಿಸಲಾಗಿತ್ತು.
ತುಂತರು ಮಳೆಯ ನಡುವೆಯೇ ನಾಲ್ಕು ನೂರಕ್ಕೂ ಹೆಚ್ಚು ಮಕ್ಕಳು ಬಣ್ಣ ಬಣ್ಣದ ಗಾಳಿಪಟವನ್ನು ಹಾರಿಸುವ ಮೂಲಕ ಸಂಭ್ರಮಿಸಿದರು.
ಪಾರ್ಶ್ವನಾಥ ವಿದ್ಯಾಸಂಸ್ಥೆಯ ಸಹ ಕಾರ್ಯದರ್ಶಿ ಸುರೇಶ್ ಪಠಿಯಾತ್ ಗಾಳಿಪಟ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡುತ್ತ ಮಕ್ಕಳನ್ನು ಕೇವಲ ಪಠ್ಯಪುಸ್ತಕಕ್ಕೆ ಸೀಮಿತಗೊಳಿಸದೆ ಇಂತಹ ಹಬ್ಬಗಳಲ್ಲಿ ಪಾಲ್ಗೊಳ್ಳಲು ಪ್ರೋತ್ಸಾಹಿಸಿದಾಗ ಮಕ್ಕಳ ಮನಸ್ಸಿಗೆ ಖುಷಿ ಕೊಡುತ್ತದೆ. ಗ್ರಾಮೀಣ ಕಲೆಗಳು ನಶಿಸುತ್ತಿದ್ದು, ಉಳಿಸಿ ಬೆಳೆಸಬೇಕಾಗಿದೆ ಎಂದು ಹೇಳಿದರು.
ಮುಖ್ಯ ಶಿಕ್ಷಕಿ ನಾಜಿಮಾ ಸ್ವಾಲೇಹ, ಪ್ರೌಢಶಾಲಾ ಶಿಕ್ಷಕ ಜನಕರೆಡ್ಡಿ, ಕಲಾವಿದ ನಾಗರಾಜ್‌ಬೇದ್ರೆ ಹಾಗೂ ಶಿಕ್ಷಕ ವೃಂದದವರು ಈ ಸಂದರ್ಭದಲ್ಲಿದ್ದರು.



