Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಂದು ರಾಷ್ಟ್ರ ಒಂದು ಚುನಾವಣೆ ಕೇವಲ ಘೋಷಣೆಯಲ್ಲ:  ಸಂಸದ ಗೋವಿಂದ ಎಂ.ಕಾರಜೋಳ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಲೋಕಸಭೆ ಹಾಗೂ ಎಲ್ಲಾ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದೇ ಒಂದು ರಾಷ್ಟ್ರ-ಒಂದು ಚುನಾವಣೆಯ ಪ್ರಮುಖ ಉದ್ದೇಶವಾಗಿದೆ, ಇದು ನರೇಂದ್ರ ಮೋದಿಜಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಾ ಯೋಜನೆಗಳಲ್ಲಿ ಇದೂ ಕೂಡ ಒಂದಾಗಿದೆ, ಈ ಹಿನ್ನೆಲೆಯಲ್ಲಿ ಇದು ಕೇವಲ ಒಂದು ಘೋಷಣೆಯಲ್ಲ, ಬದಲಾಗಿ ೧೪೦ ಕೋಟಿ ಭಾರತೀಯರ ಹೃದಯ ಬಡಿತವಾಗಿದೆ ಎಂದು ಸಂಸದ ಗೋವಿಂದ ಎ.ಕಾರಜೋಳ ರವರು ಚಿತ್ರದುರ್ಗದ ಡಾನ್ ಬಾಸ್ಕೋ ಕಾಲೇಜಿನಲ್ಲಿ ಭಾರತ ಸರ್ಕಾರದ ಕ್ರೀಡಾ ಸಚಿವಾಲಯ, ನೆಹರು ಯುವಕೇಂದ್ರ, ದಾವಣಗೆರೆ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಏರ್ಪಡಿಸಿದ್ದ ವಿಕಸಿತ ಭಾರತ ಯುವ ಸಂಸತ್ತು ಯುವಕರ ಭಾಷಣ ಸ್ಪರ್ದೆಯ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು.

      ದೇಶದಲ್ಲಿ ಚುನಾವಣೆ ಪ್ರಕ್ರಿಯೆಯನ್ನು ಸುಗಮಗೊಳಿಸುವ, ಪದೇ ಪದೇ ಚುನಾವಣೆಗಳು ನಡೆಯುವುದಕ್ಕೆ ತಡೆ ಒಡ್ಡುವ, ಸಮಯ ಹಾಗೂ ಸಂಪನ್ಮೂಲಗಳನ್ನು ಉಳಿಸುವ ಉದ್ದೇಶ ಈ ಯೋಜನೆಯ ಹಿಂದಿದೆ. ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ಭಾರತದಲ್ಲಿ ಈಗಾಗಲೇ ಅತ್ಯಂತ ಯಶಸ್ವಿಯಾಗಿ ಚುನಾವಣೆಗಳನ್ನು ನಡೆಸಿರುವ ಹಿನ್ನೆಲೆಯಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಪ್ರಕ್ರಿಯೆ ನಮ್ಮ ದೇಶಕ್ಕೆ ಸವಾಲಾಗಲಾರದು ಎನ್ನುವುದು ನನ್ನ ಅನಿಸಿಕೆಯಾಗಿದೆ ಎಂದರು.

       ದೇಶದಲ್ಲಿ ದುಡಿಯುವ ಯುವಕರ ಸಂಖ್ಯೆ ಅಂದರೆ ೧೬ ರಿಂದ ೨೪ ನೇ ವಯಸ್ಸಿನ ದುಡಿಯುವ ಯುವಕರ ಸಂಖ್ಯೆ ಒಟ್ಟಾರೆ ಜನಸಂಖ್ಯೆಯ ಶೇಕಡ ೬೧ ರಷ್ಟಿದೆ, ಇಡೀ ಪ್ರಪಂಚದಲ್ಲಿಯೇ ಅತಿ ಹೆಚ್ಚು ದುಡಿಯುವ ಯುವಕರನ್ನು ಹೊಂದಿರುವ ದೇಶ ಭಾರತವಾಗಿದೆ, ಈ ಸಂಖ್ಯೆಯನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂಬುದು ಮೋದಿಜಿಯವರ ಬಯಕೆಯಾಗಿದೆ. ಈ ಉದ್ದೇಶಕ್ಕಾಗಿಯೇ ಪ್ರತಿಯೊಂದು ಜಿಲ್ಲೆಗಳನ್ನು ಪ್ರಧಾನಮಂತ್ರಿ ಕೌಶಲ್ಯ ಕೇಂದ್ರಗಳನ್ನು ತೆರೆದು ವಿದ್ಯಾವಂತ ನಿರುದ್ಯೋಗಿ ಯುವಕರುಗಳಿಗೆ ಕೌಶಲ್ಯ ತರಬೇತಿಯನ್ನು ನೀಡಿ ದುಡಿಯುವ ಕೈಗಳಿಗೆ ಉದ್ಯೋಗ ದೊರಕಿಸಿಕೊಡುವ ಕೆಲಸವನ್ನು ಮೋದಿಜಿ ಮಾಡಿದ್ದಾರೆ. ಯಾವ ರೀತಿ ಅಮೇರಿಕಾದಲ್ಲಿ ವಿಶ್ವದ ಎಲ್ಲಾ ದೇಶಗಳ ಜನರು ಉದ್ಯೋಗ ಮಾಡುತ್ತಿದ್ದಾರೋ ಅದೇ ರೀತಿ ೨೦೩೦ ರ ವೇಳೆಗೆ ವಿಶ್ವದ ೧೯೫ ದೇಶಗಳಲ್ಲಿಯೂ ಭಾರತದ ಕೌಶಲ್ಯ ಭರಿತ ಯುವಕರು ಕೆಲಸ ಮಾಡುವಂತಾಗಬೇಕು ಎಂಬುದು ಮೋದಿಜಿಯವರ ಕನಸಾಗಿದೆ. ಭಾರತವನ್ನು  ವಿಶ್ವದ ಕೌಶಲ್ಯ ರಾಜಧಾನಿಯನ್ನಾಗಿ ಮಾಡುವುದು ಮೋದಿಜಿ ಕನಸಾಗಿದೆ ಎಂದರು.   

        ಇಂದಿನ ಯುವಕರು ತಮ್ಮ ತಮ್ಮ ಬದುಕನ್ನು ರೂಪಿಸಿಕೊಂಡರೇ ಮಾತ್ರ ಸಾಲದು, ಯುವಕರು ಈ ದೇಶದ ಅಭಿವೃದ್ದಿಯಲ್ಲಿ ಪಾಲುದಾರರಾಗಬೇಕು, ಭಾರತದ ಭವಿಷ್ಯದ ರಾಯಭಾರಿಗಳಾಬೇಕು, ಈಗಾದಾಗ ಮಾತ್ರ ಸಮೃದ್ದ ಭಾರತವನ್ನು ನಿರ್ಮಾಣ ಮಾಡಲು ಸಾಧ್ಯ, ಈ ನಿಟ್ಟಿನಲ್ಲಿ ಪ್ರಧಾನಿಗಳು ೨೦೨೪ ರ ಸ್ವಾತಂತ್ರೋತ್ಸವ ಭಾಷಣದಲ್ಲಿ ಈ ದೇಶದ ೧ ಲಕ್ಷ ಯುವಕರನ್ನು ರಾಜಕಾರಣ ಮಾಡಲು ಆಹ್ವಾನಿಸಿದರು. ಯುವಕರು ಹೆಚ್ಚು ಹೆಚ್ಚು ರಾಜಕಾರಣಕ್ಕೆ ಬರಬೇಕು, ಶುದ್ದ ರಾಜಕಾರಣದ ಅವಶ್ಯಕತೆ ಈ ದೇಶಕ್ಕೆ ತುಂಬಾ ಇದೆ ಎಂದು ಹೇಳಿದ್ದರು ಎಂದು ಸಂಸದರು ಸ್ಮರಿಸಿದರು.

ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯಿಂದ ಭಾಗವಹಿಸಿದ್ದ ಸುಮಾರು ೨೦೦ ವಿದ್ಯಾರ್ಥಿ/ವಿದ್ಯಾರ್ಥಿನಿಯರುಗಳಲ್ಲಿ ೧೦ ಜನರು ರಾಜ್ಯ ಮಟ್ಟಕ್ಕೆ ಆಯ್ಕೆಯಾದರು, ಇವರನ್ನೆಲ್ಲಾ ಅಭಿನಂದಿಸಿದ ಸಂಸದರು ನಿಮ್ಮ ಪಯಣ ಉಜ್ವಲವಾಗಿರಲಿ ಎಂದು ಹಾರೈಸಿದರು. ಇದೇ ಸಂದರ್ಭದಲ್ಲಿ ಆಯ್ಕೆಯಾದ ೧೦ ಜನ ವಿದ್ಯಾರ್ಥಿ/ವಿದ್ಯಾರ್ಥಿನಿಯರನ್ನು ಹಾಗೂ ಜ್ಯೂರಿಗಳಾಗಿ ಕೆಲಸ ನಿರ್ವಹಿಸಿದವರನ್ನು ಸನ್ಮಾನಿಸಿದರು.

ಸಮಾರಂಭದಲ್ಲಿ ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ತಾಜಪೀರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಮಾಧುರಿ ಗಿರೀಶ್, ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸಿ ಹನುಮಂತೇಗೌಡ, ವಿ.ಎಂ.ಮ್ಯಾಥ್ಯೂ, ಆಡಳಿತಾಧಿಕಾರಿಗಳು, ಡಾನ್‌ಬಾಸ್ಕೋ ಕಾಲೇಜು, ಸುಹಾಸ್ ನೆಹರು ಯುವ ಕೇಂದ್ರ, ಚಿತ್ರದುರ್ಗ, ಸೇರಿದಂತೆ ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ