Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕರ್ನಾಟಕ ರಾಜಕಾರಣದಲ್ಲಿ ಹೊಸ ಹೆಜ್ಜೆ: ಜನಪರ ರಾಜಕಾರಣವೇ ನಮ್ಮ ಗುರಿ - ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಚಂದ್ರವಳ್ಳಿ ನ್ಯೂಸ್, ಮಂಗಳೂರು:
"ನಮಗೆ ರಾಜಕೀಯ ಮುಖ್ಯವಲ್ಲ, ಜನರ ಬದುಕು ಮುಖ್ಯ. ನಾವು ಜನರ ಭಾವನೆಗಳ ಮೇಲೆ ರಾಜಕಾರಣ ಮಾಡುವವರಲ್ಲ, ಬದುಕಿನ ಮೇಲೆ ರಾಜಕಾರಣ ಮಾಡುವವರು. ಹಾಗಾಗಿ ನಮ್ಮ ಸಂಪುಟ ಸಭೆಗೆ ಯಾರೂ ಗಾಬರಿಯಾಗಬೇಕಿಲ್ಲ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಪಕ್ಷಗಳಿಗೆ ಖಡಕ್ ತಿರುಗೇಟು ನೀಡಿದ್ದಾರೆ.

ನಗರದ ಸರ್ಕ್ಯೂಟ್ ಹೌಸ್ ಆವರಣದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರು ಮಂಗಳೂರಿಗೆ ಭೇಟಿ ನೀಡಿದ್ದಾಗ ಉಳಿದುಕೊಂಡಿದ್ದ ಐತಿಹಾಸಿಕ ಮನೆಗೆ (ಕೊಡಿಯಾಲಬೈಲಿನ ಗಾಂಧಿ ಸ್ಮಾರಕ ಕಟ್ಟಡ) ಭೇಟಿ ನೀಡಿ ಉಪಹಾರ ಸೇವಿಸಿರುವುದಾಗಿ ತಿಳಿಸಿದರು.

Advertisement

"ಬೆಳಗ್ಗೆ ಗಾಂಧೀಜಿ ಉಳಿದುಕೊಂಡಿದ್ದ ಜಾಗಕ್ಕೆ ಹೋಗಿ ತಿಂಡಿ ಮುಗಿಸಿ ಬಂದಿದ್ದೇನೆ. ಅಲ್ಲಿ ಮಂಗಳೂರು ಬನ್ಸ್, ದೋಸೆ ಸೇರಿದಂತೆ ಕರಾವಳಿಯ ವಿಶಿಷ್ಟ ತಿಂಡಿಗಳನ್ನು ಸವಿದೆವು, ತುಂಬಾ ಸಂತೋಷವಾಯಿತು" ಎಂದು ಹರ್ಷ ವ್ಯಕ್ತಪಡಿಸಿದರು.

ಮುಂದಿನ ಕಾರ್ಯಕ್ರಮಗಳ ಕುರಿತು ಪ್ರತಿಕ್ರಿಯಿಸಿ, ಜಿಲ್ಲಾ ಉಸ್ತುವಾರಿ ಸಚಿವರು ಕರೆದುಕೊಂಡು ಹೋಗುವೆಡೆಯೆಲ್ಲಾ ಭೇಟಿ ನೀಡುವುದಾಗಿ ಅವರು ತಿಳಿಸಿದರು.

'ಯಾರೂ ಆತಂಕಪಡುವ ಅಗತ್ಯವಿಲ್ಲ': ಕರಾವಳಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಆಯೋಜಿಸಿರುವುದಕ್ಕೆ ಕೆಲವರು ಆತಂಕಗೊಂಡಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, "ಯಾವುದೇ ಪಕ್ಷದವರಾಗಲಿ, ಯಾರೂ ಕೂಡ ಗಾಬರಿಪಟ್ಟುಕೊಳ್ಳುವ ಅಗತ್ಯವಿಲ್ಲ. ನಮಗೆ ರಾಜಕೀಯಕ್ಕಿಂತ ಜನರ ದಿನನಿತ್ಯದ ಬದುಕು ಅತ್ಯಂತ ಮುಖ್ಯ. ಜನರ ಭಾವನೆಗಳನ್ನು ಕೆರಳಿಸಿ ರಾಜಕೀಯ ಮಾಡುವುದು ನಮ್ಮ ನೀತಿಯಲ್ಲ. ಎಲ್ಲರ ಚಿಂತನೆ ಮತ್ತು ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ" ಎಂದು ಸ್ಪಷ್ಟಪಡಿಸಿದರು.

ಕರಾವಳಿ ಅಭಿವೃದ್ಧಿಗೆ ವಿಶೇಷ ಒತ್ತು: ಸಚಿವ ಕೆ.ಹೆಚ್. ಮುನಿಯಪ್ಪ
ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಆವರಣದಲ್ಲಿ ಮಾತನಾಡಿದ ಸಚಿವ ಕೆ.ಹೆಚ್. ಮುನಿಯಪ್ಪ, ಕರಾವಳಿ ಭಾಗದ ಅಭಿವೃದ್ಧಿಗೆ ಸ್ಥಳೀಯ ಮುಖಂಡರು ನೀಡಿರುವ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಪ್ರವಾಸೋದ್ಯಮ ಬೆಳವಣಿಗೆ, ಉದ್ಯೋಗ ಸೃಷ್ಟಿ ಹಾಗೂ ಬಡವರಿಗೆ ನಿವೇಶನ-ಮನೆಗಳನ್ನು ಕಲ್ಪಿಸುವ ಯೋಜನೆಗಳನ್ನು ರೂಪಿಸಿದೆ ಎಂದರು.

"ಸಚಿವ ಯು.ಟಿ. ಖಾದರ್ ಹಾಗೂ ಈ ಭಾಗದ ಮುಖಂಡರ ಸಲಹೆಗಳನ್ನು ಪರಿಗಣಿಸಿ ಕರಾವಳಿಗೆ ವಿಶೇಷ ಅಭಿವೃದ್ಧಿ ನೀಡಲಾಗುವುದು. ಸಮಾಜದ ಬಡವರಿಗೆ ಸೈಟ್, ಮನೆ ಹಾಗೂ ಭೂಮಿ ಒದಗಿಸುವ ಎಲ್ಲಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಕ್ಯಾಬಿನೆಟ್ ಸಭೆಯ ಬಳಿಕ ಮುಖ್ಯಮಂತ್ರಿಗಳು ಈ ಬಗ್ಗೆ ಸಂಪೂರ್ಣ ವಿವರಣೆ ನೀಡಲಿದ್ದಾರೆ" ಎಂದರು. ಬಿಜೆಪಿ ಪ್ರಭಾವ ಹೆಚ್ಚಿರುವ ಕುರಿತು ಮಾತನಾಡಿ, "ಹಿಂದೆ ಈ ಭಾಗದಲ್ಲಿ ಕಾಂಗ್ರೆಸ್ ಎಲ್ಲ ಕಡೆ ಗೆದ್ದಿತ್ತು, ಆ ಕಾಲ ಮುಂದೆ ಮತ್ತೆ ಬರಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಭಿನ್ನಮತದ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, "ಅವರವರ ವೈಯಕ್ತಿಕ ಅಭಿಪ್ರಾಯಗಳನ್ನು ಹೇಳುತ್ತಾರೆ. ಸಿದ್ದರಾಮಯ್ಯನವರು ಯಾವತ್ತಿದ್ದರೂ ಕಾಂಗ್ರೆಸ್ ನಾಯಕರಾಗಿದ್ದು, ಮುಖ್ಯಮಂತ್ರಿಗಳು ಅವರ ಮಾರ್ಗದರ್ಶನದಲ್ಲೇ ಆಡಳಿತ ನಡೆಸುತ್ತಿದ್ದಾರೆ" ಎಂದು ಸ್ಪಷ್ಟಪಡಿಸಿದರು.

ಪ್ರವಾಸೋದ್ಯಮ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ತೀರ್ಮಾನ: ಸಚಿವ ರುದ್ರಪ್ಪ ಲಮಾಣಿ
ಸಚಿವ ರುದ್ರಪ್ಪ ಲಮಾಣಿ ಮಾತನಾಡಿ, ಕರಾವಳಿ ಮತ್ತು ಮಲೆನಾಡು ಭಾಗದ ಸಮಗ್ರ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನಗಳು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮಂಗಳೂರಿನಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆ ಹಾಗೂ ನೂರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆಗಳನ್ನು ನಿರ್ಮಿಸುವ ಯೋಜನೆಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ. ಮಲೆನಾಡು ಮತ್ತು ಕರಾವಳಿಯ ಶಾಸಕರ ಬಹುದಿನಗಳ ಕೂಗಿನಂತೆ, ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ ತೀರ್ಮಾನ ತೆಗೆದುಕೊಳ್ಳಲು ಸರ್ಕಾರವೇ ಮನೆಬಾಗಿಲಿಗೆ ಬಂದು ಸಂಪುಟ ಸಭೆ ನಡೆಸುತ್ತಿದೆ ಎಂದರು.

ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ತಿಳಿಸಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ತ್ಯಾಗ ಮಾಡಿ, ಬರುವವರಿಗೆ ಅವಕಾಶ ಮಾಡಿಕೊಟ್ಟು ದೇಶಕ್ಕೆ ಮಾದರಿಯಾಗಿದ್ದಾರೆ ಎಂದು ಪ್ರಶಂಸಿಸಿದರು. ಕರಾವಳಿ ಭಾಗದ ಜನರ ಅನುಕೂಲಕ್ಕಾಗಿ ಕೈಗೊಳ್ಳುವ ಎಲ್ಲಾ ಯೋಜನೆಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ಪುನರುಚ್ಚರಿಸಿದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ರಮವಾಗಿ ನೆಲೆಸಿದ್ದ ಮೂವರು ನೈಜೀರಿಯನ್ ಪ್ರಜೆಗಳ ವಶಕ್ಕೆಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯದ ಹುಂಡಿಯಲ್ಲಿ 77ಲಕ್ಷ 58ಸಾವಿರದ 904 ರೂ ಸಂಗ್ರಹಕೆಂಪಮ್ಮ ದಂಪತಿಗೆ ವಾತ್ಸಲ್ಯ ಮನೆ ಹಸ್ತಾಂತರಪೋಷಣ್ ಮಾಸಾಚರಣೆ: ಸಿರಿಧಾನ್ಯ, ಸೊಪ್ಪು-ತರಕಾರಿ ಸೇವನೆಗೆ ಒತ್ತು ವಿದ್ಯಾರ್ಥಿಗಳು ಪಠ್ಯದ ಜೊತೆ ಕ್ರೀಡೆಗಳಲ್ಲಿ ತೊಡಗಿಸಿಕೊಂಡರೆ ಮಾನಸಿಕ ದೈಹಿಕ ಸದೃಢತೆ ಹೆಚ್ಚುತ್ತದೆ:ಡಾ. ಮುರುಳಿಡಿಕೆ ಶಿವಕುಮಾರ್ ವಿರುದ್ಧವೇ 'ಟ್ರ್ಯಾಪ್' ಯತ್ನ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಸ್ಪೋಟಕ ಹೇಳಿಕೆ!ಡಿ.ಕೆ ಶಿವಕುಮಾರ್‌ಗೆ ರಿಯಲ್ ಎಸ್ಟೇಟ್‌ಮೇಲಿರುವ ಆಸಕ್ತಿ ರೈತರ ಮೇಲಿಲ್ಲ: ಬಿ.ವೈ. ವಿಜಯೇಂದ್ರಶಾರ್ಟ್ ಸರ್ಕ್ಯೂಟ್‌ನಿಂದ ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ಗೆ ಬೆಂಕಿ; ತಪ್ಪಿದ ಭಾರೀ ದುರಂತಭೀಕರ ಅಪಘಾತ: ನಾಲ್ವರು ಯುವ ಕ್ರಿಕೆಟಿಗರು ಸಾವುಡೀಸೆಲ್ ಕೊರತೆ ತಾತ್ಕಾಲಿಕ, ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಕೆ: ಡಿಸಿಎಂ ಜಿ. ಪರಮೇಶ್ವರ ಸ್ಪಷ್ಟನೆ