Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್‌ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ ದುಷ್ಕೃತ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಎದುರು ನಡೆದಿರುವ ಕಲ್ಲು ತೂರಾಟ ಘಟನೆ ಕಾಂಗ್ರೆಸ್‌ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ ದುಷ್ಕೃತ್ಯವಾಗಿದೆ, ಸದರಿ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.


ಜನಾರ್ಧನ ರೆಡ್ಡಿ ಮತ್ತವರ ಕುಟುಂಬವನ್ನು ಗುರಿಯನ್ನಾಗಿಸಿಕೊಂಡು ನಡೆದಿರುವ ಈ ಘಟನೆಗೆ ಮಹರ್ಷಿ ವಾಲ್ಮೀಕಿ ಪ್ರತಿಮೆಯ ಉದ್ಘಾಟನೆಯ ಕಾರ್ಯಕ್ರಮದ ಬ್ಯಾನರ್‌ಅಳವಡಿಸುವುದನ್ನು ನೆಪವಾಗಿಸಿಕೊಳ್ಳಲಾಗಿದೆ.

ಬಳ್ಳಾರಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿದಿಲ್ಲ. ನಾಗರಿಕ ಸಮಾಜ ನೆಮ್ಮದಿಯಾಗಿ ಬದುಕುವ ವಾತಾವರಣವನ್ನು ವಿಚಲಿತಗೊಳಿಸಿ, ಭಯಗ್ರಸ್ಥ ನಗರವನ್ನಾಗಿಸಲು ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದ ಅವರ ಬೆಂಬಲಿಗರು ದುಷ್ಕೃತ್ಯಕ್ಕೆ ಇಳಿದಂತಿದೆ ಎಂದು ಅವರು ಆರೋಪಿಸಿದ್ದಾರೆ.

ಜನಾರ್ದನ ರೆಡ್ಡಿಯವರು ಬಿಜೆಪಿಗೆ ಮರು ಸೇರ್ಪಡೆಯಾದನಂತರ ಸ್ಥಳೀಯವಾಗಿ ಪಕ್ಷ ಸಂಘಟನೆ ಪ್ರಬಲವಾಗುತ್ತಿರುವುದು, ಜನಾರ್ದನರೆಡ್ಡಿ ಮತ್ತು ಮಾಜಿ ಸಚಿವ ಬಿ.ಶ್ರೀರಾಮುಲು ಅವರ ನಡುವಿನ ಬಾಂಧವ್ಯ ಹಿಂದಿನಂತೆ ಬೆಸೆದಿರುವುದು ರಾಜಕೀಯ ದುಷ್ಟರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ವಿಪರ್ಯಾಸವೆಂದರೆ ಸ್ಥಳೀಯ ಪೊಲೀಸ್‌ಠಾಣೆಗಳು ಕರ್ನಾಟಕ ಕಾಂಗ್ರೆಸ್ ‌ಕಚೇರಿಗಳಾಗಿ ಮಾರ್ಪಟ್ಟಿವೆ. ಸ್ಥಳೀಯ ಪೊಲೀಸರು ಕಾಂಗ್ರೆಸ್ ‌ಕೈಗೊಂಬೆಯಾಗಿದ್ದಾರೆ, ಪೊಲೀಸರು ಮುನ್ನೆಚ್ಚರಿಕೆ ಕ್ರಮ ವಹಿಸಿದ್ದರೆ ಈ ದುಷ್ಕೃತ್ಯವನ್ನು ತಡೆಯಬಹುದಿತ್ತು ಎಂದು ವಿಜಯೇಂದ್ರ ಅಭಿಪ್ರಾಯಪಟ್ಟರು.

ಈ ಕೂಡಲೇ ಶಾಸಕ ಜನಾರ್ಧನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಅವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಒತ್ತಾಯಿಸುವೆ. ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ತನಿಖೆ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ