Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೀಬಾರದ ಜಾತ್ರೆಗೆ ದನಗಳೇ ವಿಶೇಷ ಮೆರಗು

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರಕ್ಕೆ ಸಮೀಪದ ಶೀಬಾರದಲ್ಲಿ ನಿನ್ನೆ ಗುರುವಾರ ಸಂಜೆ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಪ್ರತಿವರ್ಷ ನಡೆಸಿಕೊಂಡು ಬರಲಾಗುತ್ತಿರುವ ಶ್ರೀ ಜಗದ್ಗುರು ಗುರುಪಾದ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಹಾಗು ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ೭೦ನೇ ವರ್ಷದ ರಥೋತ್ಸವ ನಡೆಯಿತು.


ಈ ಬಾರಿ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳ ೧೫೦ನೇ ವರ್ಷದ ಜಯಂತೋತ್ಸವವೂ ಬಂದಿರುವ ಕಾರಣ  ಅವರ ಹೆಸರಿನಲ್ಲಿಯೂ ಸೇರಿದಂತೆ ನಿನ್ನೆ ಜಾತ್ರೆಗೆ ಚಾಲನೆ ನೀಡಲಾಯಿತು. ಬಸವೇಶ್ವರರು ಹಾಗೂ ಶ್ರೀ ಗುರುಪಾದ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಭಾವಚಿತ್ರವನ್ನು ಅಲಂಕೃತಗೊಂಡ ಟ್ರಾಕ್ಟರ್‌ನಲ್ಲಿ ಶ್ರೀಮಠದಿಂದ ಜಾತ್ರೆಗೆ ತೆಗೆದುಕೊಂಡು ಹೋಗಿ ಅದರೊಂದಿಗೆ ಮೈಲಾರಲಿಂಗೇಶ್ವರ ಉತ್ಸವ ಮೂರ್ತಿಯನ್ನು ರಥದ ಮೇಲೆ ಕೂರಿಸಿ ಪೂಜಾ ವಿಧಾನಗಳನ್ನು ವಚನಗಳ ಮೂಲಕ ನೆರವೇರಿಸಿ ಸೀಬಾರದ ಸುತ್ತಮುತ್ತಲಿನ  ಗ್ರಾಮಗಳ ಸಾವಿರಾರು ಜನರ  ಹರ್ಷೋದ್ಘಾರದ  ನಡುವೆ ರಥೋತ್ಸವಕ್ಕೆ ಚಾಲನೆ ನೀಡಿ ರಥವನ್ನು ಎಳೆಯಲಾಯಿತು.

ಈ ಸಂದರ್ಭದಲ್ಲಿ ಬೃಹನ್ಮಠದ  ಆಡಳಿತ ಮಂಡಳಿಯ ಸದಸ್ಯರ ಡಾ. ಬಸವಕುಮಾರ ಮಹಾ ಸ್ವಾಮಿಗಳು ಹಾಗೂ ದಾವಣಗೆರೆ ವಿರಕ್ತಮಠದ ಡಾ.ಬಸವ ಪ್ರಭುಮಹಾಸ್ವಾಮಿಗಳು ಸಾನಿಧ್ಯ ವಹಿಸಿ ಚಾಲನೆ ನೀಡಿ ರಥೋತ್ಸವದೊಂದಿಗೆ ಹೆಜ್ಜೆ ಹಾಕಿದರು.

ರಥೋತ್ಸವ ಪ್ರಾರಂಭದೊಂದಿಗೆ ದನಗಳ ಜಾತ್ರೆಗೆ ವಿದ್ಯುಕ್ತವಾಗಿ ದೊರಕಿತು. ಮಧ್ಯಕರ್ನಾಟಕದ ಈ ಭಾಗದ ಜನಪ್ರಿಯ ದನಗಳ ಜಾತ್ರೆಗೆ ವಿಶೇಷ ಮೆರಗು ಇದೆ. ರೈತರು, ವ್ಯಾಪಾರಸ್ಥರು ಭಾಗವಹಿಸಿ ಸೇರುವ ವಿವಿಧ ತಳಿಯ ರಾಜ್ಯ ಹಾಗೂ ಬೇರೆ ರಾಜ್ಯಗಳಿಂದ ಬರುವ ರಾಸುಗಳನ್ನು ಕೊಂಡುಕೊಂಡು ಯಶಸ್ವಿಗೊಳಿಸಬೇಕೆಂದು, ಇಲ್ಲಿ ಉತ್ತಮ ರೀತಿಯ ನೀರು, ನೆರಳು ಹಾಗೂ ಬೆಳಕಿನ ವ್ಯವಸ್ಥೆ ಮಾಡಲಾಗಿದ್ದು ಕೃಷಿಕರು ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಂಡು ಉತ್ತಮ ರೀತಿಯ ತಳಿಯ ರಾಸುಗಳನ್ನು ಕರೆದುಕೊಂಡು ಬರಲು ತಿಳಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಜಿ.ಎಂ.ಪ್ರಕಾಶ್, ಜಿ.ಎಮ. ಕುಮಾರ್, ಚಿದಾನಂದ ಮೂರ್ತಿ, ಸತೀಶ್ ಜಿ.ಎಂ., ಗೌಡರ ಜಯದೇವಪ್ಪ, ಜಿ.ಎಂ. ತಿಪ್ಪೇಸ್ವಾಮಿ, ಜಿ.ಎಂ. ಶಿವಮೂರ್ತಿ, ಗ್ರಾಮ ಪಂಚಾಯತಿ ಸದಸ್ಯರಾದ ಶಂಕರಮ್ಮಜಿ ಪಂಚಾಯತ್ ಮಾಜಿ ಸದಸ್ಯರಾದ  ನರಸಿಂಹರಾಜು, ಶಿವಲಿಂಗಪ್ಪ.ಜಿ.ಎಂ, ಜಿ.ಎಂ. ಪುಟ್ಟಸ್ವಾಮಿ, ಜಂಬುನಾಥ್ ಸೇರಿದಂತೆ  ಸೀಬಾರ ಗುತ್ತಿನಾಡಿನ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ