LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬ್ಯಾಟರಿ ಸ್ಪಾರ್ಕ್ ನಿಂದ ಹೊತ್ತಿ ಉರಿದ ಟಾಟಾ ಸುಮೋ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬ್ಯಾಟರಿಯಲ್ಲಿ ಸ್ಪಾರ್ಕ್ ಕಾಣಿಸಿಕೊಂಡ ಪರಿಣಾಮ ಟಾಟಾ ಸುಮೋ ವಾಹನಕ್ಕೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಹೋದ ಘಟನೆ  ದೊಡ್ಡಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ಸಮೀಪದ ಯಲಹಂಕ-ಹಿಂದೂಪುರ ಹೆದ್ದಾರಿಯಲ್ಲಿ ಮಧ್ಯಾಹ್ನ ನಡೆದಿದೆ.

ಮಧುಗಿರಿಯಿಂದ ಬೆಂಗಳೂರಿನ ಸಹಕಾರನಗರದ ಕಡೆಗೆ ಟಾಟಾ ಸುಮೋದಲ್ಲಿ ಪ್ರಯಾಣಿಕರು ತೆರಳುತ್ತಿದ್ದ ವೇಳೆ, ವಾಹನದ ಬ್ಯಾಟರಿಯಲ್ಲಿ ಏಕಾಏಕಿ ಸ್ಪಾರ್ಕ್ ಕಾಣಿಸಿಕೊಂಡಿದೆ. ಪರಿಸ್ಥಿತಿಯನ್ನು ಗಮನಿಸಿದ ಚಾಲಕ ತಕ್ಷಣವೇ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ, ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ.

ಸ್ವಲ್ಪವೇ ಸಮಯದಲ್ಲಿ ಬೆಂಕಿ ವಾಹನವನ್ನು ಆವರಿಸಿಕೊಂಡು ಧಗಧಗನೆ ಉರಿಯತೊಡಗಿದೆ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದರು. ಆದರೆ ಅಷ್ಟರಲ್ಲಾಗಲೇ ವಾಹನ ಬಹುತೇಕ ಸುಟ್ಟು ಕರಕಲಾಗಿದೆ ಎನ್ನಲಾಗಿದೆ.

ಚಾಲಕನ ಸಮಯ ಪ್ರಜ್ಞೆಯು ಸಂಭವಿಸಬಹುದಾದ ದೊಡ್ಡ ಪ್ರಾಣಾಪಾಯ ಅಥವಾ ಅಪಘಾತಗಳನ್ನು ತಡೆಯುವಲ್ಲಿ  ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ . ತುರ್ತು ಸಂದರ್ಭಗಳಲ್ಲಿ ಚಾಲಕ ತೋರುವ ಜಾಗರೂಕತೆಯಿಂದ ಹಲವು ಜೀವಗಳು ಉಳಿಯುತ್ತವೆ ಘಟನೆಯಿಂದ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.

ಈ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರಂಭಿಕ ಮಾಹಿತಿಯ ಪ್ರಕಾರ, ಬ್ಯಾಟರಿಯಲ್ಲಿ ಉಂಟಾದ ಸ್ಪಾರ್ಕ್‌ನಿಂದಲೇ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧಆಗಸ್ಟ್ 12ಕ್ಕೆ 'ಶತಮಾನದ ಖಗ್ರಾಸ ಸೂರ್ಯಗ್ರಹಣ': ಭಾರತದಲ್ಲಿ ಗೋಚರವಿಲ್ಲ, ಯಾವುದೇ ಆಚರಣೆ ಅಗತ್ಯವಿಲ್ಲರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್