Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ದಾವಣಗೆರೆ ಉದ್ವಿಗ್ನ ಪರಿಸ್ಥಿತಿ

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ದಾವಣಗೆರೆ ನಗರದ ಗಣೇಶ ವಿಸರ್ಜನೆ ವೇಳೆ ವೆಂಕಾ ಭೋವಿ ಕಾಲೋನಿಯಲ್ಲಿ ಕಲ್ಲುತೂರಾಟ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

 ಘಟನೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಹಲವಾರು ಮನೆಗಳು ಮತ್ತು ವಾಹನಗಳ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ.

ಪ್ರಕ್ಷುಬ್ದಗೊಂಡಿದ್ದ ನಗರದ ಇದೀಗ ತಣ್ಣಗಾಗಿದೆ. ಇದಕ್ಕೆ ಕಾರಣವಾಗಿದ್ದು, ನಿನ್ನೆ ಗಣೇಶ ಮೆರವಣಿಗೆ ವೇಳೆ ನಡೆದ ಎರಡು ಕೋಮಿನ ನಡುವೆ ಕಲ್ಲು ತೂರಾಟ. ಇವರೆಗೆ ದಾಖಲಾಗಿರುವ 4 ಪ್ರಕರಣಗಳಲ್ಲಿ 30 ಜನರನ್ನು ಬಂಧಿಸಲಾಗಿದೆ. ನಗರದಲ್ಲಿ ಇನ್ನು ಗಣೇಶ ವಿಸರ್ಜನೆ ಹಿನ್ನೆಲೆ 2 ದಿನ ಮದ್ಯ ಮಾರಾಟ ನಿಷೇಧಿಸಿ ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೇಬೆನ್ನೂರಿನಲ್ಲಿ ಸೆ. 21 ರಂದು ಹಾಗೂ ಚನ್ನಗಿರಿ ತಾಲೂಕಿನಾದ್ಯಂತ  ಮತ್ತು ಹೊನ್ನಾಳಿ ಪಟ್ಟಣದಲ್ಲಿ ಸೆ. 22 ರಂದು ಗಣೇಶಮೂರ್ತಿ ವಿಸರ್ಜನೆ ನಡೆಯಲಿದೆ ಹೀಗಾಗಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಮದ್ಯ ಮಾರಾಟ ನಿರ್ಬಂಧ ಮಾಡಲಾಗಿದೆ.ಸೆ. 21 ರಂದು ಮಲೇಬೆನ್ನೂರು ವ್ಯಾಪ್ತಿ ಮತ್ತು ಸೆ. 22ರಂದು ಚನ್ನಗಿರಿ ತಾಲ್ಲೂಕಿನಾದ್ಯಂತ ಹಾಗೂ ಹೊನ್ನಾಳಿ ಪಟ್ಟಣ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೇರಿದ್ದು, ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

 ರೇಣುಕಾಚಾರ್ಯ ಭೇಟಿ-
ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ಕೇಸ್​ನಲ್ಲಿ ಬಂಧಿಸಲ್ಪಟ್ಟಿರುವ ಯುವಕರ ಮನೆಗೆ ದಾವಣಗೆರೆ ಜಿಲ್ಲೆ ಹೊನ್ನಾಳಿ ಮಾಜಿ ಶಾಸಕ ರೇಣುಕಾಚಾರ್ಯ ಭೇಟಿ ನೀಡಿ ಕುಟುಂಬದವರಿಗೆ ಧೈರ್ಯ ತುಂಬಿದ್ದಾರೆ.

 ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಸಮರ್ಥ ಗೃಹ ಸಚಿವರಿದ್ದು ಕೂಡಲೇ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರವಿಲ್ಲ. ಹಿಂದು ವಿರೋಧಿ ಸರ್ಕಾರ ಇದೆ. ರಾಜ್ಯದಲ್ಲಿ ಅಲ್ಪಸಂಖ್ಯಾತರ ಓಲೈಕೆ ಸರ್ಕಾರ ಇದೆ ಎಂದು ಕಿಡಿ ಕಾರಿದ್ದಾರೆ.



 ಹಿಂದೂಗಳು ಕೈಗೆ ಬಳೆ ಹಾಕಿಕೊಂಡಿಲ್ಲ. ಹಿಂದುಗಳನ್ನ ಮುಟ್ಟಿದರೆ ಸುಮ್ಮನಿರಲ್ಲ. ಅಂತಹ ಸಂದರ್ಭ ಬಂದರೆ ಮಚ್ಚು ಬಳಸುವುದು ಗೊತ್ತು. ದೇಶ ದ್ರೋಹಿಗಳನ್ನ ಕಂಡ ಕಂಡಲ್ಲಿ ಗುಂಡಿಟ್ಟು ಕೊಲ್ಲಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ