ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿರುವ ಘಟನೆ ಹಿರಿಯೂರು ತಾಲೂಕಿನ ಹಿಂಡಸಕಟ್ಟೆ ಸಮೀಪದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.
ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿರುವಂತಹ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹಿಂಡಸಕಟ್ಟೆ ಗ್ರಾಮದಲ್ಲಿ ನಡೆದಿದೆ.



