Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಹಾರದಲ್ಲಿ ಪ್ರಜಾಪ್ರಭುತ್ವದ ದಿಗ್ವಿಜಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಹಾರ ವಿಧಾನಸಭಾ ಚುನಾವಣೆಯ ಅಭೂತಪೂರ್ವ ಜಯ, ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಸದೃಢ ನಾಯಕತ್ವದ ಕೊರಳನ್ನು ಅಲಂಕರಿಸಿದ ಪ್ರಜಾಪ್ರಭುತ್ವದ ವಿಜಯದ ಹಾರವಾಗಿ ವಿಜೃಂಭಿಸಿದೆ. ಮಾನ್ಯ ಪ್ರಧಾನಿ ಅವರ ನೇತೃತ್ವದ NDA ಸರ್ಕಾರ ದೇಶಕ್ಕೆ ಅನಿವಾರ್ಯ ಎಂಬ ಸಂದೇಶವನ್ನೂ ಬಿಹಾರದ ಮತದಾರರು ರವಾನಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.

ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರ ನೇತೃತ್ವದಲ್ಲಿ NDA ಮೈತ್ರಿಕೂಟದ ಸಂಘಟಿತ ಹೋರಾಟಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಕಾರ್ಯತಂತ್ರ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ದಕ್ಷ ಆಡಳಿತವನ್ನು ಮೆಚ್ಚಿ ಬಿಹಾರದ ಜನತೆ ಮತ್ತೆ NDA ಸರ್ಕಾರವನ್ನು ನಿರೀಕ್ಷೆ ಮೀರಿದ ಐತಿಹಾಸಿಕ ದಾಖಲೆಯ ಬಹುಮತದಿಂದ ಗೆಲ್ಲಿಸಿ ಆಶೀರ್ವದಿಸಿದ್ದಾರೆ ಎಂದು ವಿಜಯೇಂದ್ರ ತಿಳಿಸಿದರು.

ಈ ಚುನಾವಣೆಯಲ್ಲಿ ಮತಚೋರಿ ಹೆಸರಿನಲ್ಲಿ ಅಪಪ್ರಚಾರ ನಡೆಸಿ ರಾಜಕೀಯ ಚೋರತನ ಮಾಡಲು ಹೊರಟ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಗೆ ಬಿಹಾರದ ಮತದಾರರು ತಕ್ಕ ಪಾಠ ಕಲಿಸಿ ಬಿಹಾರದ ರಾಜಕೀಯ ಭೂಪಟದಲ್ಲಿ ಕಾಂಗ್ರೆಸ್ ಗೆ ಅಸ್ತಿತ್ವಕ್ಕಾಗಿ ತಿಣುಕಾಡಬೇಕಾದ ಸ್ಥಿತಿಗೆ ತಳ್ಳಿದ್ದಾರೆ. ಆರ್.ಜೆ.ಡಿ ಸೇರಿದಂತೆ ಮಹಾಘಟಬಂಧನ್ ಕೂಟವನ್ನು ಬಿಹಾರದ ಜನತೆ ಸೋಲಿನ ಬಂಧನದ ರುಚಿ ತೋರಿಸಿ ದ್ದಾರೆ. ಪಾಳೆಗಾರಿಕೆ ರಾಜಕೀಯಕ್ಕೆ ಇನ್ನೆಂದೂ ಅವಕಾಶ ನೀಡಲಾಗದು ಎಂಬ ಉತ್ತರ ಕೊಟ್ಟಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಪಪ್ರಚಾರ ನಡೆಯುವುದಿಲ್ಲ, ಅಲ್ಪಸಂಖ್ಯಾತರ ಹೆಸರಿನಲ್ಲಿ ಓಲೈಕೆಯ ಮತಬ್ಯಾಂಕ್ ರಾಜಕಾರಣಕ್ಕೆ ಭವಿಷ್ಯವಿಲ್ಲ ಎನ್ನುವುದನ್ನು ಬಿಹಾರದ ಜನತೆ ತೋರಿಸಿಕೊಟ್ಟಿದ್ದಾರೆ.

ಬಿಹಾರದ ಚುನಾವಣೆಯ ಫಲಿತಾಂಶ ಕಾಂಗ್ರೆಸ್ ಸೇರಿದಂತೆ ದೇಶದ ಇತರ ವಿರೋಧ ಪಕ್ಷಗಳಿಗೆ ನೀತಿ ಪಾಠ ಹೇಳಿದೆ. ವಿರೋಧ ಪಕ್ಷವಾಗಿ ಜವಾಬ್ದಾರಿಯಿಂದ ನಡೆದುಕೊಳ್ಳದಿದ್ದರೆ ನಿಮ್ಮನ್ನು ವಿರೋಧ ಪಕ್ಷದ ಸ್ಥಾನದಲ್ಲೂ ಕುಳ್ಳಿರಿಸಲಾಗದು ಎಂಬ ಎಚ್ಚರಿಕೆ ರವಾನಿಸಿದ್ದಾರೆ. 

ರಾಹುಲ್ ಗಾಂಧಿ ಅವರು ಬೆನ್ನತ್ತಿಹೋದ ಈ ವರೆಗಿನ ಚುನಾವಣೆಗಳೆಲ್ಲವೂ ಸರಣೀ ಪತನದ ಕಹಿಯನ್ನು ಕಾಂಗ್ರೆಸ್ ಅನುಭವಿಸಿದೆ,ಸದ್ಯ ಸೋಲಿನ ಸುಳಿಯಲ್ಲಿ ಸಿಲುಕಿಕೊಂಡು ಕಾಂಗ್ರೆಸ್ ಹಡಗು ಸಮುದ್ರದಲ್ಲಿ ಮುಳುಗುತ್ತಿದೆ,ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳು ಕಾಂಗ್ರೆಸ್ ಪಾಲಿಗೆ ಊರುಗೋಲುಗಳಾಗಿವೆ.

ಇಂತಹ ಪರಿಸ್ಥಿತಿಯಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ಕಾಂಗ್ರೆಸ್'ನ ಮುಂದಾಳುಗಳು ಜನಪರವಾಗಿ ಚಿಂತಿಸದೇ ಅಭಿವೃದ್ಧಿ ಕೆಲಸಗಳನ್ನು ಮೂಲೆಗೆ ಸರಿಸಿ, ರಾಷ್ಟ್ರಭಕ್ತ ಸಂಘಟನೆಗಳ ಕುರಿತು ಅವಿವೇಕದ ಹೇಳಿಕೆಗಳನ್ನು ನೀಡುವುದರಲ್ಲೇ ತಲ್ಲೀನರಾಗಿದ್ದಾರೆ.

ಬಿಹಾರದ ಚುನಾವಣೆಯ ಫಲಿತಾಂಶದಿಂದಾದರೂ ರಾಜ್ಯದ ಕಾಂಗ್ರೆಸ್ಸಿಗರು ಪಾಠ ಕಲಿಯಲಿ. ತಮ್ಮ ಉಳಿದಿರುವ ಅವಧಿಯನ್ನಾದರೂ ಜನಪರ ಕಾರ್ಯಕ್ಕಾಗಿ ಮೀಸಲಿರಿಸಿ ಮತದಾರರ ಋಣ ತೀರಿಸಲಿ ಎಂದು ವಿಜಯೇಂದ್ರ ತಾಕೀತು ಮಾಡಿದ್ದಾರೆ.

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ