Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುತ್ ಅವಘಡ ಇಬ್ಬರ ಸಾವು-ಓರ್ವ ಮಹಿಳೆಗೆ ಗಾಯ

Advertisement
 

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ತೂಬಗೆರೆ ಹೋಬಳಿಯ ಕಾರನಾಳ ಗ್ರಾಮದಲ್ಲಿ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಇಬ್ಬರು ಸಾವನಪ್ಪಿದ್ದು , ಓರ್ವ ಮಹಿಳೆ ಗಾಯಗೊಂಡಿದ್ದಾರೆ. 

ವಿದ್ಯುತ್ ಕಂಬದಿಂದ ಮನೆಗೆ ಎಳೆದಿದ್ದ ವಿದ್ಯುತ್ ತಂತಿ ಕೆಳಗೆ ಒಣಗಾಕಿದ್ದ ಬಟ್ಟೆಯನ್ನು ತೆಗೆದುಕೊಳ್ಳಲು ಲಲಿತಮ್ಮ ಹೋದಾಗ ವಿದ್ಯುತ್‌ ತಂತಿ ಸ್ಪರ್ಶಿಸಿದೆ.ಇದನ್ನು ಕಂಡ ಸಂಜಯ್ ಕಾಪಾಡಲು ಹೋದಾಗ ಅವರಿಗೂ ವಿದ್ಯುತ್ ಸ್ಪರ್ಶಿಸಿದೆ. ಇಬ್ಬರು ಮೃತಪಟ್ಟಿದ್ದಾರೆ. 

 ಮೃತ  ಸಂಜಯ್ (43), ಲಲಿತಮ್ಮ(50) ಎಂದು ಗುರುತಿಸಲಾಗಿದೆ. 45 ವರ್ಷದ ಲಕ್ಷ್ಮಮ್ಮ ಎಂಬುವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.  

 ವಿಪರ್ಯಾಸವೆಂದರೆ ಈ ಇಬ್ಬರನ್ನು ಕಾಪಾಡಲು ಲಕ್ಷ್ಮಮ್ಮ ಮುಂದಾಗಿದ್ದು, ಮೂವರಿಗೂ ವಿದ್ಯುತ್ ಪ್ರವಹಿಸಿದೆ. ಘಟನೆಯಲ್ಲಿ ಲಲಿತಮ್ಮ, ಸಂಜಯ್ ಸಾವನಪ್ಪಿದ್ದರೆ, ಲಕ್ಷ್ಮಮ್ಮ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. 

ಘಟನೆ ಕುರಿತಂತೆ ಬೆಸ್ಕಾಂ ವಿರುದ್ಧ ಸಾರ್ವಜನಿಕ ವಲಯದಲ್ಲಿ ಹಲವು ಆರೋಪ ಕೇಳಿ ಬಂದಿದ್ದು, ವಸತಿ ನಿಲಯಗಳ ಬಳಿ, ಕಟ್ಟಡಗಳ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೆ  ನಿರ್ಲಕ್ಷ್ಯ ವಹಿಸಿಸಿರುವುದರಿಂದ ಘಟನೆಗಳು ಜರುಗುತ್ತಿವೆ ಸ್ಥಳೀಯರು ದೂರಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ