Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳೆಯ ಶವ ಕೊಲೆ ಮಾಡಿರುವ ಸ್ಥಿತಿಯಲ್ಲಿ ಪತ್ತೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಹಿಳೆಯ ಶವವು ಕೊಲೆ ಮಾಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದೇ ಸಂದರ್ಭದಲ್ಲಿ ಮನೆ ಕೆಲಸದ ವ್ಯಕ್ತಿಯೂ ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಸಿಲ್ಕ್ ಬೋರ್ಡ್ ಸಮೀಪದ ಕೆಎಎಸ್ ಕಾಲೋನಿಯಲ್ಲಿ ತಡರಾತ್ರಿ ನಡೆದಿದೆ.

ಸುಮಾರು 55 ವರ್ಷದ ಮಹಿಳೆ ಮನೆಯ ರೂಮ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅದೇ ಮನೆಯಲ್ಲಿ ಕೆಲಸ ಮಾಡುತ್ತಿದ್ದ ದೇವರಾಜು (50) ಎಂಬಾತ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಿದೇಶಕ್ಕೆ ತೆರಳಿದ್ದ ಮೃತ ಮಹಿಳೆಯ ಪತಿ ಮುಂಜಾನೆ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಸದ್ಯ ಮೈಕೋ ಲೇಔಟ್ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದುಬೈಗೆ ತೆರಳಿದ್ದ ಮೃತಳ ಪತಿ ಮುಂಜಾನೆ 4.30ರ ಸುಮಾರಿಗೆ ಬೆಂಗಳೂರಿಗೆ ಆಗಮಿಸಿದ್ದರು. ಮೊದಲ ಮಹಡಿಯಲ್ಲಿ ಇದ್ದ 27 ವರ್ಷದ ಮಗಳು ಬಂದು ಬಾಗಿಲು ತೆರೆದು ತನ್ನ ಕೋಣೆಗೆ ತೆರಳಿದ್ದಳು.


ಬಳಿಕ ಪತಿ ಕೆಳ ಮಹಡಿಯಲ್ಲಿದ್ದ ರೂಮ್‌ಗೆ ತೆರಳಿದಾಗ ಪತ್ನಿ ಶವವಾಗಿ ಪತ್ತೆಯಾಗಿದ್ದಾರೆ. ಕೆಲಸಗಾರ ದೇವರಾಜ್ ಸಹ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಘಟನೆ ನಡೆದ ಸಮಯದಲ್ಲಿ ಮನೆಯ ಮೊದಲ ಮಹಡಿಯಲ್ಲಿ ಮಗಳಿದ್ದರೂ ಆಕೆಗೆ ಗಮನಕ್ಕೆ ಬಾರದೇ ಕೃತ್ಯ ನಡೆದಿದೆ.

ಹತ್ಯೆ ಹೇಗೆ ನಡೆದಿದೆ? ಆತ್ಮಹತ್ಯೆಗೆ ಮಾಡಿಕೊಂಡ ಕೆಲಸಗಾರನೇ ಕೃತ್ಯ ಎಸಗಿದ್ದಾನಾ? ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಪೂರ್ವ ವಲಯದ ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ