Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎ1 ಆರೋಪಿ ಪವಿತ್ರಾ ಗೌಡ ಬಂಧನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಎ1 ಆರೋಪಿ ಪವಿತ್ರಾ ಗೌಡರ ಜಾಮೀನನ್ನು ಸುಪ್ರೀಂಕೋರ್ಟ್​ ರದ್ದು ಪಡಿಸಿದೆ. ಇದರ ಬೆನ್ನಲ್ಲೇ ಪೊಲೀಸರು ಪವಿತ್ರಾ ಗೌಡ ಮನೆಗೆ ತೆರಳಿ ಆಕೆಯನ್ನು ಬಂಧಿಸಿದ್ದಾರೆ. ಸುಪ್ರೀಂಕೋರ್ಟ್​ ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಪಡಿಸಿತ್ತು.


ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿ ಸಮ್ಮುಖದಲ್ಲಿ ವಶಕ್ಕೆ ಪಡೆದು ಬಂಧಿಸಿದ್ದಾರೆ. ಗೆಲವು ನಿಧಾನ ಆಗಬಹುದು ದೇವರ ರಕ್ಷಣೆ ಇದ್ದೇ ಇರುತ್ತೆ ಎಂದು ಪವಿತ್ರಾ ಗೌಡ ಪೋಸ್ಟ್​ ಮಾಡಿದ್ದರು. ನಾನು ತಾಳ್ಮೆ ಹಾಗೂ ನಂಬಿಕೆ ಆಯ್ಕೆ ಮಾಡಿಕೊಳ್ತಿನಿ ಎಂದು ಪವಿತ್ರಾಗೌಡ ಹೇಳಿದ್ದಾರೆ.


ಹೈಕೋರ್ಟ್ ಜಾಮೀನು ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಮೇರೆಗೆ ಸುಪ್ರೀಂ ಕೋರ್ಟ್ ನ್ಯಾ. ಜೆಬಿ ಪಾರ್ದಿವಾಲಾ ಹಾಗೂ ಆರ್ ಮಹಾದೇವನ್​​ ಇವರುಗಳಿದ್ದ ದ್ವಿಸದಸ್ಯ ಪೀಠವು ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ.

ಹೈಕೋರ್ಟ್ ಆದೇಶ ವಿಕೃತತೆಯಿಂದ ಕೂಡಿದೆ. ಹೈಕೋರ್ಟ್ ಆದೇಶ ಅಧಿಕಾರದ ಯಾಂತ್ರಿಕ ಪ್ರಯೋಗವನ್ನ ಪ್ರತಿಬಿಂಬಿಸುತ್ತದೆ. ಜಾಮೀನು ಮಂಜೂರು ಮಾಡುವುದರಿಂದ ವಿಚಾರಣೆಯ ಮೇಲೆ ಪರಿಣಾಮ ಬೀರಲಿದೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಸುಪ್ರೀಂಕೋರ್ಟ್​ ಅಭಿಪ್ರಾಯಪಟ್ಟಿದೆ.

ಸುಪ್ರೀಂಕೋರ್ಟ್​ ಪೀಠವು ಕಾನೂನು ಎಲ್ಲರಿಗೂ ಒಂದೆ ಎಂಬ ಸಂದೇಶ ನೀಡಿದೆ. ಯಾವುದೇ ವ್ಯಕ್ತಿ ಕಾನೂನಿಗಿಂತ ಮೇಲಲ್ಲ ಅಥವಾ ಅದಕ್ಕಿಂತ ಕೆಳಗಿಲ್ಲ, ನಾವು ಅದನ್ನ ಪಾಲಿಸುವಾಗ ಯಾರ ಅನುಮತಿಯನ್ನೂ ಕೇಳಲ್ಲ ಎಂದ ನ್ಯಾ. ಪಾರ್ದಿವಾಲಾ ಹೇಳಿದ್ದಾರೆ.

ಜೈಲಿನಲ್ಲಿ ಆರೋಪಿಗಳಿಗೆ ವಿಶೇಷ ಸೌಲಭ್ಯ ಅಥವಾ ಚಿಕಿತ್ಸೆ ವಿರುದ್ಧವೂ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಆರೋಪಿಗಳಿಗೆ ವಿಶೇಷ ಸೌಲಭ್ಯ ಪಂಚತಾರಾ ಸೌಲಭ್ಯ ನೀಡಲಾಗುತ್ತಿದೆ ಎಂದು ನಮಗೆ ದೃಢಪಟ್ಟ ದಿನವೇ ಸೂಪರಿಂಟೆಂಡೆಂಟ್ ಹಾಗೂ ಇತರೆ ಅಧಿಕಾರಗಳ ಅಮಾನತು ಮಾಡಲಾಗುತ್ತದೆ ಎಂಬ ಎಚ್ಚರಿಕೆ ನೀಡಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ