LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಯೋಗ್ಯ-2 ಮೂರನೇ ಹಾಡು ರಿಲೀಸ್, ಆಗಸ್ಟ್ 7 ರಂದು ರಾಜ್ಯಾದ್ಯಂತ ಬಿಡುಗಡೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸತೀಶ್ ನೀನಾಸಂ
, ರಚಿತಾ ರಾಮ್ ಜೋಡಿಯ ಅಯೋಗ್ಯ 2ಚಿತ್ರದ ಮೂರನೇ ಹಾಡು ಅನಾವರಣಗೊಂಡಿದೆ. ಇತ್ತೀಚೆಗಷ್ಟೇ ಬಿಡುಗಡೆಯಾದ 'ಮುದ್ದು ಮುದ್ದು ಪುಟ್ಟಲಕ್ಷ್ಮಿ'  ಹಾಗೂ ಅಣ್ಣಾ ಬಂದ್ರೆ ಜೋಶ್ ಬತ್ತದೆ ಎಂಬ ಹಾಡುಗಳಿಗೆ ಸಖತ್ ರೆಸ್ಪಾನ್ಸ್ ಪಡೆದುಕೊಂಡಿದ್ದ ಚಿತ್ರತಂಡ, ಇದೀಗ 'ಹುಡ್ಗೀರ್ ಡೇಂಜರಸ್' ಎಂಬ ಹಾಡನ್ನು ರಿಲೀಸ್ ಮಾಡಿದೆ. ಮಹೇಶ್ ಕುಮಾರ್ ನಿರ್ದೇಶವಿರುವ ಈ ಚಿತ್ರ ಆಗಸ್ಟ್ 7 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.

ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿರುವ ಈ ಹಾಡಿಗೆ 'ಬಹದ್ದೂರ್' ಚೇತನ್ ಕುಮಾರ್ ಸಾಹಿತ್ಯ ಬರೆದಿದ್ದಾರೆ. ವಿಜಯ ಪ್ರಕಾಶ್ ಕಂಠಸಿರಿಯಲ್ಲಿ ಮೂಡಿ ಬಂದಿರುವ ಈ ಹಾಡಿಗೆ ಸಂತೋಷ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾವನ್ನು ಎಸ್.ವಿ.ಸಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ಎಂ.ಮುನೇಗೌಡ ನಿರ್ಮಿಸಿದ್ದಾರೆ.

'ಅಯೋಗ್ಯ ಸಿನಿಮಾ ಬ್ಲಾಕ್ ಬಸ್ಟರ್ ಆಗಿ ಗೆಲ್ಲುವುದಕ್ಕೆ ಕನ್ನಡ ಸಿನಿಮಾ ಪ್ರೇಕ್ಷಕರಿಗೆ ನಾವು ಚಿರಋಣಿ. ನಿರ್ದೇಶಕ ಮಹೇಶ್ ಕುಮಾರ್ ಮಂಡ್ಯದ ಒಂದು ಹಳ್ಳಿಯ ಕಥೆಯಲ್ಲಿ ಜನರನ್ನು ರಂಜಿಸುವಂತಹ ಕಥೆ ಹೇಳಿದ್ದರು. ಆಯೋಗ್ಯ-2 ಸಿನಿಮಾದ ಕಂಟೆಂಟ್ ಕೂಡ ಒಂದು ಹಳ್ಳಿಯ ಕಥೆಯಾಗಿರದೇ ರಾಜ್ಯದ ಪ್ರತಿಹಳ್ಳಿಗು ತಲುಪುವಂತಹ ಸಬ್ಜೆಕ್ಟ್' ಎಂದರು ನೀನಾಸಂ ಸತೀಶ್.

'ಆಯೋಗ್ಯ ಹಾಗೂ ಆಯೋಗ್ಯ 2 ಈ ಎರಡು ಸಿನಿಮಾಗಳನ್ನು ಹೆಚ್ಚು ಇಷ್ಟಪಟ್ಟು , ಕಥೆಯನ್ನು ಎಂಜಾಯ್ ಮಾಡುತ್ತ ಅಭಿನಯಿಸಿದ ಸಿನಿಮಾ. ಆಯೋಗ್ಯ 2 ಸಿನಿಮಾವನ್ನು ನಮ್ಮ ವಿಐಪಿಗಳೊಂದಿಗೆ (ಪ್ರೇಕ್ಷಕರು) ಚಿತ್ರಮಂದಿರದಲ್ಲಿಯೇ ಸಿನಿಮಾ ನೋಡಲು ಕಾಯುತ್ತಿದ್ದೇನೆ, ಎಂಬುದು  ರಚಿತಾರಾಮ್ ಅನಿಸಿಕೆ.

ನಾನು ಡಿ ಬಾಸ್ ಅಪ್ಪಟ ಅಭಿಮಾನಿ. ಡಿ ಬಾಸ್ ಯಾವಾಗಲೂ ತಮ್ಮ ಅಭಿಮಾನಿಗಳನ್ನು ಸೆಲೆಬ್ರಿಟೀಸ್ ಎಂದೇ ಪ್ರೀತಿಸುತ್ತಾರೆ. ನಮ್ಮ ಆಯೋಗ್ಯ 2 ಚಿತ್ರತಂಡ ಹುಬ್ಬಳ್ಳಿ ಭಾಗದ ಪ್ರೇಕ್ಷಕರ ಎದುರು ಮೂರನೇ ಹಾಡನ್ನು ರಿಲೀಸ್ ಮಾಡಿದ್ದೇವೆ. ಎಲ್ಲರೂ ಹಾರೈಸಿ ಎಂದರು ನಿರ್ದೇಶಕ ಮಹೇಶ್ ಕಮಾರ್.

ರವಿಶಂಕರ್, ಸಾಧು ಕೋಕಿಲ, ತಬಲ ನಾಣಿ, ಸುಂದರ್ ರಾಜ್, ಶಿವರಾಜ್ ಕೆ.ಆರ್.ಪೇಟೆ, ಅರುಣಾ ಬಾಲರಾಜ್, ಗಿರಿ ಶಿವಣ್ಣ ಹಾಗೂ ಮಂಜು ಪಾವಗಡ ತಾರಾಗಣದಲ್ಲಿದ್ದಾರೆ. ಮಾಸ್ತಿ ಉಪ್ಪಾರಳ್ಳಿ ಸಂಭಾಷಣೆ, ‘ಶಾಖಾಹಾರಿಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದ ವಿಶ್ವಜಿತ್ ರಾವ್ ಈ ಚಿತ್ರದ ಕ್ಯಾಮೆರಾಮನ್. ಸುರೇಶ್ ಆರ್ಮುಗಂ ಸಂಕಲನ, ಅರ್ಜುನ್ ರಾಜ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧಆಗಸ್ಟ್ 12ಕ್ಕೆ 'ಶತಮಾನದ ಖಗ್ರಾಸ ಸೂರ್ಯಗ್ರಹಣ': ಭಾರತದಲ್ಲಿ ಗೋಚರವಿಲ್ಲ, ಯಾವುದೇ ಆಚರಣೆ ಅಗತ್ಯವಿಲ್ಲರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್