Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಜೀಂ ಪ್ರೇಮ್ ಜಿ ಯೂನಿವರ್ಸಿಟಿಗೆ ನುಗ್ಗಿ ದಾಂಧಲೆ ಮಾಡಿದ ಎಬಿವಿಪಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಜೀಂ ಪ್ರೇಮ್ ಜಿ ಯೂನಿವರ್ಸಿಟಿಗೆ ನುಗ್ಗಿ ದಾಂಧಲೆ ಮಾಡಿದ ಆರೋಪದ ಮೇಲೆ 25 ಎಬಿವಿಪಿ ಕಾರ್ಯಕರ್ತರ ಮೇಲೆ ಎಫ್ಐಆರ್ ದಾಖಲಾಗಿರುವ ಘಟನೆ ಬೆಂಗಳೂರಿನ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಜರುಗಿದೆ.

ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್​ ಜಿ ಯೂನಿವರ್ಸಿಟಿ ಮುಂದೆ ಮಂಗಳವಾರ ಸಂಜೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಕಾಶ್ಮೀರದ ಸೈನಿಕರನ್ನು ಅತ್ಯಾಚಾರಿಗಳು ಎಂದು ಬಿಂಬಿಸುವ ಚರ್ಚೆಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಸಂಘ, ಸ್ಪಾರ್ಕ್ ವಿದ್ಯಾರ್ಥಿ ವೃಂದದಿಂದ ಆಯೋಜಿಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.
ಕೇಂದ್ರ ಸಚಿವರಿಗೆ ಪತ್ರದ ಮೂಲಕ ಮನವಿ ಮಾಡಿ ಕೂಡಲೇ ಯೂನಿವರ್ಸಿಟಿಯ ಮಾನ್ಯತೆ ರದ್ದುಗೊಳಿಸಲು ಕೋರಿ ಎಬಿವಿಪಿ ಪ್ರತಿಭಟನೆ ನಡೆಸುತ್ತಿದ್ದಾಗ ಯೂನಿವರ್ಸಿಟಿ ಒಳಗಡೆಯಿಂದ ವಿವಿ ಪರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಪರಿಸ್ಥಿತಿ ಕೈ ಮೀರುತ್ತಿದ್ದುದನ್ನು ಗಮನಿಸಿ
, ಯೂನಿವರ್ಸಿಟಿ ಒಳಗಡೆಗೆ ಎಬಿವಿಪಿ ಕಾರ್ಯಕರ್ತರು ನುಗ್ಗಿದ್ದಲ್ಲದೆ ಯೂನಿವರ್ಸಿಟಿ ನಾಮಫಲಕಕ್ಕೆ ಮಸಿ ಬಳಿದು ಹಿಂಸೆಯ ರೂಪ ಪಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಕೂಡಲೇ ಎಚ್ಚೆತ್ತ ಪೊಲೀಸರು ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಿ ರಾತ್ರಿ ಗಲಾಟೆಗೆ ತೆರೆ ಎಳೆದಿರುವುದಾಗಿ ಸರ್ಜಾಪುರ ಪೊಲೀಸರು ತಿಳಿಸಿದ್ದಾರೆ.


ಬುಧವಾರ ಬೆಳಗ್ಗೆ ಅಜೀಂ ಪ್ರೇಮ್ ಜಿ ಯೂನಿವರ್ಸಿಟಿ ಸೆಕ್ಯೂರಿಟಿ ಹೆಡ್ ಎಸ್ ವಿಲ್ಸನ್ ನೀಡಿದ ದೂರಿನ ಮೇರೆಗೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, 25 ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಯೂನಿವರ್ಸಿಟಿಗೆ ಒತ್ತಾಯಪೂರ್ವಕ ಪ್ರವೇಶ ಹಾಗೂ ಸೆಕ್ಯೂರಿಟಿಗಳಾದ ಜಗದೀಶ್, ಚಂದನ್ ಮಹಾಲಿಕ್, ಚಟ್ಟಾರ್ ಬಹುದ್ದೂರ್, ನರೇಶ್, ಶ್ರೀಪತಿ ಮತ್ತು ಹರೀಶ್ ಮೇಲೆ ದೊಣ್ಣೆಗಳಿಂದ ಕೊಲೆ ಬೆದರಿಕೆ ಹಾಕಿರುವುದಲ್ಲದೆ ಮೊದಲ ಬಿಎ ವಿದ್ಯಾರ್ಥಿ ಮಹಮದ್ ಅಲಿ ಅಹಮದ್ ಮೇಲೆ ಹಲ್ಲೆ ಮಾಡಿದ ಆರೋಪ ಹೊರೆಸಿ ದೂರು ನೀಡಿದ್ದರು. 25 ಎಬಿವಿಪಿ ಕಾರ್ಯಕರ್ತರು ಆನೇಕಲ್ ನ್ಯಾಯಾಲಯದಲ್ಲಿ ಬೇಲ್​​ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ