Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಂಸಲೇಖ ಸಾಧನೆಗೆ ಶೈಕ್ಷಣಿಕ ಗೌರವ: ಈಶ್ವರ್ ಗೆ ಪಿಎಚ್.ಡಿ ಪದವಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದ ನಿವಾಸಿ
, ಹಾಲಿ ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗದ ಸಂಶೋಧನಾರ್ಥಿ ಈಶ್ವರ್ ರವರಿಗೆ ಪಿಎಚ್.ಡಿ ಪದವಿ ಘೋಷಿಸಿದೆ.

ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗದ ಹಿರಿಯ ಪ್ರಾಧ್ಯಾಪಕರು ಹಾಗೂ ಪ್ರಸ್ತುತ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ (ಕೋಲಾರ) ಕುಲಪತಿ ಪ್ರೊ. ಬಿ.ಕೆ. ರವಿ ಅವರ ಮಾರ್ಗದರ್ಶನದಲ್ಲಿ ವಿವಿಗೆ ಮಂಡಿಸಿದ ಕನ್ನಡ ಚಿತ್ರರಂಗಕ್ಕೆ ಹಂಸಲೇಖ ರವರ ಕೊಡುಗೆ: ಒಂದು ಅಧ್ಯಯನಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಘೋಷಿಸಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯ ಪ್ರಕಟಿಸಿದೆ. ಮಾತ್ರವಲ್ಲ (ಮೌಲ್ಯಮಾಪನ) ವಿಭಾಗದ ಕುಲ‌ಸಚಿವ ಪ್ರೊ. ಚಂದ್ರಶೇಖರ ಎಸ್. ಕರಿಗಾರ ಅವರು ಡಾಕ್ಟರೇಟ್ ಘೋಷಣೆಯ ಅಧಿಸೂಚನೆ ಪತ್ರವನ್ನು ಡಾ. ಈಶ್ವರ್ ರವರಿಗೆ ನೀಡಿ ಅಭಿನಂದಿಸಿದರು.

ಈ ಹಿನ್ನೆಲೆಯಲ್ಲಿ ಡಾ. ಈಶ್ವರ್ ಅವರು ಸಿರಿಗೇರಿ ಗ್ರಾಮದ ದಿವಂಗತ ಛಲವಾದಿ ತಿಪ್ಪಣ್ಣ, ಛಲವಾದಿ ಹುಲಿಗೇಮ್ಮ ದಂಪತಿಯ ಹಿರಿಯ ಪುತ್ರ. ಕೊರೋನಾ ಸಂದರ್ಭದಲ್ಲಿ ಕೆಲವೇ ತಿಂಗಳುಗಳ‌ಅವಧಿಯಲ್ಲಿ ಅಪ್ಪ ಅಮ್ಮ ಸಾವನ್ನಪ್ಪಿದರೂ ಧೃತಿಗೆಡದೆ ಅದ್ಯಯನ ಮುಂದುವರೆಸಿ ಡಾಕ್ಟರೇಟ್ ಪದವಿ ಪಡೆದಿರುವುದು ವಿಶೇಷ. ಈ ಮೂಲಕ ಸಂಶೋಧನೆ ಮಾಡುವ ಯುವಕರಿಗೆ ಪ್ರೇರಣೆಯಾಗಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ವಿಶ್ವವಿದ್ಯಾಲಯಕ್ಕೆ 5ನೇ ರ್ಯಾಂಕ್ ನೊಂದಿಗೆ ಉತ್ತೀರ್ಣರಾಗಿದ್ದಾರೆ. ಬಳಿಕ ಇದೇ ವಿಭಾಗದಲ್ಲಿ ಸಂಶೋಧನೆ ಮುಂದುವರೆಸಿದರು. ಇದೇ ಸಂದರ್ಭದಲ್ಲಿ ರಾಜ್ಯದ ವಿವಿಧ ಪ್ರತಿಷ್ಠಿತ ದಿನಪತ್ರಿಕೆಗಳಲ್ಲಿ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸಿ ವೃತ್ತಿಪರ ಅನುಭವ ಹೊಂದಿದ್ದಾರೆ.

ಅಭಿನಂದನೆ: ಡಾ. ಈಶ್ವರ್ ಅವರ ಶೈಕ್ಷಣಿಕ ಸಾಧನೆಗಾಗಿ ಕುಟುಂಬಸ್ಥರು, ಗುರು-ಹಿರಿಯರು, ಸ್ನೇಹಿತರು ಹಾಗೂ ಸಿರಿಗೇರಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಶುಭ ಕೋರಿದ್ದಾರೆ.

ಗುಲ್ಬರ್ಗಾ ವಿವಿ ಮಾಜಿ ಸೆನೆಟ್ ಸದಸ್ಯ, ಹಿರಿಯ ಪತ್ರಕರ್ತ ಸಿ. ಮಂಜುನಾಥ, ಮಂಡ್ಯ ಅನನ್ಯ ಮಾಧ್ಯಮ ತರಬೇತಿ ಕೇಂದ್ರದ ಮುಖ್ಯಸ್ಥ ರಾಜೇಶ್ ರಾಂಪುರ ಡಾ. ಈಶ್ವರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಂಶೋಧನಾ ಮಹಾಪ್ರಬಂಧವು ಕನ್ನಡ ಚಿತ್ರರಂಗದಲ್ಲಿ ಇದೊಂದು ಹೊಸ ಮೈಲುಗಲ್ಲು ಮತ್ತು ವಿಶಿಷ್ಟ ದಾಖಲೆಯಾಗಿದೆ. ಸಿನಿಮಾ ರಂಗದ ಹಲವಾರು ಪರಿಣಿತರು, ಸಿನಿಮಾ ಪತ್ರಕರ್ತರು, ಸಿನಿಮಾ ಕಲಾವಿದರು ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರು ಸೇರಿದಂತೆ ಕನ್ನಡ ಸಿನಿಮಾದ ವಿವಿಧ ಸಂಘಗಳು, ಹಂಸಲೇಖ ರವರು ಕನ್ನಡ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಸಮಗ್ರವಾಗಿ ಸಂಶೋಧನೆ ನಡೆಸಿರುವ ಮಹಾಪ್ರಬಂಧದ ಕುರಿತು ಹರ್ಷ ವ್ಯಕ್ತಪಡಿಸಿ ಪ್ರಶಂಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ