Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಪಲೋಕಾಯುಕ್ತರಿಂದ ಅಹವಾಲು ಸ್ವೀಕಾರ

Advertisement
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಗೌ.ನ್ಯಾಯಮೂರ್ತಿಗಳು ಹಾಗೂ ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ ಅವರು ಸೆಪ್ಟೆಂಬರ್-೨೪ ರಿಂದ ೨೬ ರವರೆಗೆ ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಕೈಗೊಂಡು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.


ಈ ಪ್ರವಾಸದ ಅವಧಿಯಲ್ಲಿ ಸೆಪ್ಟಂಬರ್ ೨೪ ರಂದು ಬೆಳಗ್ಗೆ ೧೦ ರಿಂದ ಮಧ್ಯಾಹ್ನ ೧.೩೦ ಗಂಟೆಯವರೆಗೆ ಮತ್ತು ಮಧ್ಯಾಹ್ನ ೨.೩೦ ರಿಂದ ಸಂಜೆ ೫ ಗಂಟೆಯವರೆಗೆ ನಗರದ ಕುವೆಂಪು ಕಲಾ ಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ, ನೌಕರರಿಂದ ಕಾನೂನು ಪ್ರಕಾರ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದಲ್ಲಿ ಅಥವಾ ಅಧಿಕಾರಿ, ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ.
ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ಗೌರವಾನ್ವಿತರ ಮುಂದೆ ತಮ್ಮ ಅಹವಾಲುಗಳನ್ನು ಅರ್ಜಿ ನಮೂನೆ-೧ ಮತ್ತು ನಮೂನೆ-೨ ರಲ್ಲಿ ಲಿಖಿತ ರೂಪದಲ್ಲಿ ದಾಖಲೆ
, ಸಾಕ್ಷಾಧಾರಗಳೊಂದಿಗೆ ಸಲ್ಲಿಸಬಹುದು.

ಸೆಪ್ಟೆಂಬರ್ ೨೫ ರಂದು ಬೆಳಗ್ಗೆ ೧೧ ರಿಂದ ಮಧ್ಯಾಹ್ನ ೧.೩೦ ಗಂಟೆಯವರೆಗೆ ಮತ್ತು ಮಧ್ಯಾಹ್ನ ೨.೩೦ ರಿಂದ ಸಂಜೆ ೫ ಗಂಟೆಯವರೆಗೆ ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಗೌರವಾನ್ವಿತ ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ) ತನಿಖೆ, ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ಪ್ರಕಾರ ವಿಚಾರಣೆ ನಡೆಸುತ್ತಾರೆ.

ಈ ಹಿನ್ನೆಲೆಯಲ್ಲಿ ದೂರುದಾರರು ಮತ್ತು ಎದುರುದಾರರು ನಿಗದಿತ ಸಮಯದಲ್ಲಿ ಹಾಜರಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ