Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧಾರಾಕಾರ ಮಳೆಗೆ ಅಪಘಾತ, ಗುಡ್ಡ ಕುಸಿತ

Advertisement
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಆಗುತ್ತಿದ್ದು ಗುಡ್ಡ ಕುಸಿತ ಸೇರಿದಂತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ.
ಚಂದ್ರದ್ರೋಣ ಪರ್ವತ ಶ್ರೇಣಿಯ ಕವಿಕಲ್​​​ ಗಂಡಿ ಬಳಿ
, ಮೂಡಿಗೆರೆ ತಾಲೂಕಿನ ರಾಮಣ್ಣನ ಗಂಡಿ ಬಳಿ ಅಪಘಾತಗಳು ಸಂಭವಿಸಿವೆ.

 ಚಂದ್ರದ್ರೋಣ ಪರ್ವತ ಶ್ರೇಣಿಯ ಕವಿಕಲ್​​​ ಗಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಪರಿಣಾಮ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ. ದತ್ತಪೀಠಕ್ಕೆ ತೆರಳುವ ಮಾರ್ಗದಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ರಸ್ತೆಯಲ್ಲಿದ್ದ ಕಾರನ್ನು ತೆರವು ಮಾಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿರುವ ಘಟನೆ ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮದ ಬಳಿ ನಡೆದಿದೆ. ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದ ಪರಿಣಾಮ ಶೃಂಗೇರಿ-ಮಂಗಳೂರು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಪೊಲೀಸ್, ಪಂಚಾಯಿತಿ ಅಧಿಕಾರಿಗಳು ಹಾಗೂ ಸ್ಥಳೀಯರು ಸುರಿಯುತ್ತಿರುವ ಮಳೆ ಮಧ್ಯೆ ರಸ್ತೆಗೆ ಉರುಳಿರುವ ಮಣ್ಣು ತೆರವು ಕಾರ್ಯಕ್ಕೆ ಮುಂದಾಗಿದ್ದಾರೆ. ಮಣ್ಣು ಕುಸಿಯದಂತೆ ರಸ್ತೆ ಬದಿಗೆ ಕಟ್ಟಿದ್ದ ಕಬ್ಬಿಣದ ತಡೆಗೋಡೆಗಳು ಕುಸಿದು ಬಿದ್ದಿದೆ. ಮಳೆ ಜೊತೆ ಗಾಳಿ ಕೂಡ ವೇಗವಾಗಿ ಬೀಸುತ್ತಿರುವುದರಿಂದ ಅಲ್ಲಲ್ಲಿ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.

ಚಂದ್ರದ್ರೋಣ ಪರ್ವತ ಶ್ರೇಣಿಯ ಕವಿಕಲ್ ಗಂಡಿ ಬಳಿ ಸಣ್ಣ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿತ್ತು. ಶೃಂಗೇರಿಯಲ್ಲಿ ಭೂ ಕುಸಿತ ಉಂಟಾಗಿದೆ.


ಜೀವ ಕಳೆ:
ಚಿಕ್ಕಮಗಳೂರು ಜಿಲ್ಲೆಯ ವಿವಿಧ ಜಲಪಾತಗಳು ಈಗ ಹಾಲ್ನೊರೆಯಂತೆ ಉಕ್ಕಿ ಹರಿಯಲು ಪ್ರಾರಂಭಿಸಿದೆ. ಜಿಲ್ಲೆಯ ಸಿರಿಮನೆ ಜಲಪಾತ ಮಳೆಯಿಂದಾಗಿ ಮತ್ತೆ ಜೀವ ಕಳೆ ಪಡೆದಿದೆ. ಸಿರಿಮನೆ ಫಾಲ್ಸ್​ನ ಈ ದೃಶ್ಯಗಳನ್ನು ನೋಡಲು ಈಗ ಎರಡು ಕಣ್ಣುಗಳು ಸಾಲದಾಗಿದೆ.


ಶೃಂಗೇರಿ ತಾಲೂಕಿನ ಕಿಗ್ಗಾ ಸಿರಿಮನೆ ಜಲಪಾತದಲ್ಲಿ ಉತ್ತಮ ಮಳೆಯಿಂದಾಗಿ ಜಲಪಾತದ ನೀರಿನ ಮಟ್ಟದಲ್ಲಿ ಏರಿಕೆ ಕಂಡಿದೆ. ಜಲಪಾತಗಳನ್ನು ನೋಡಲು ರಾಜ್ಯ, ಹೊರ ರಾಜ್ಯಗಳಿಂದ ಪ್ರವಾಸಿಗರು ಈ ಭಾಗಕ್ಕೆ ಆಗಮಿಸುತ್ತಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ