LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಡಳಿತಕ್ಕಾಗಿ ಖಾತೆ ಹಂಚಿಕೆಯಲ್ಲ, ಲೂಟಿ ಮತ್ತು ರಾಜಕೀಯ ಹೊಂದಾಣಿಕೆಗೆ ಮಾಡಿದ ಖಾತೆ ಹಂಚಿಕೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ಸರ್ಕಾರದ ಖಾತೆ ಹಂಚಿಕೆ ಪ್ರಕ್ರಿಯೆಯನ್ನು ತೀವ್ರವಾಗಿ ಟೀಕಿಸಿದ್ದು
, "ಇದು ಆಡಳಿತಕ್ಕಾಗಿ ಮಾಡಿದ ಹಂಚಿಕೆಯಲ್ಲ, ಬದಲಿಗೆ ಲೂಟಿಗಾಗಿ ಮಾಡಿದ ರಾಜಕೀಯ ಹೊಂದಾಣಿಕೆ" ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿದ್ದಾರೆ.

​ಅಶೋಕ್ ಅವರು ಸರ್ಕಾರದ ವಿರುದ್ಧ ಮಾಡಿರುವ ಪ್ರಮುಖ ಆರೋಪಗಳು:
​ಕೃಷಿ ಮತ್ತು ಶಿಕ್ಷಣ ಇಲಾಖೆಗಳು ಅನಾಥ.
​ಕೃಷಿ ಇಲಾಖೆಗೆ ಸಚಿವರಿಲ್ಲ: ಮುಂಗಾರು ಬಿತ್ತನೆಗೆ ರೈತರು ಸಜ್ಜಾಗುತ್ತಿರುವ ಈ ಮಹತ್ವದ ಸಮಯದಲ್ಲಿ ರಾಜ್ಯಕ್ಕೆ ಪೂರ್ಣಾವಧಿ ಕೃಷಿ ಸಚಿವರೇ ಇಲ್ಲ. ಬಿತ್ತನೆ ಬೀಜ
, ರಸಗೊಬ್ಬರ ಪೂರೈಕೆ, ಬೆಳೆ ಸಾಲ ಮತ್ತು ವಿಮೆಯ ಉಸ್ತುವಾರಿ ನೋಡಿಕೊಳ್ಳುವವರೇ ಇಲ್ಲದಂತಾಗಿದೆ.

​ಶಿಕ್ಷಣ ಇಲಾಖೆಯ ಸವಾಲುಗಳು: ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ ಶಾಲೆಗಳ ಕೊಠಡಿ ದುರಸ್ತಿ, ಶೌಚಾಲಯ ಕೊರತೆ, ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಣೆಯಂತಹ ತುರ್ತು ಸಮಸ್ಯೆಗಳನ್ನು ಆಲಿಸಲು ಒಬ್ಬ ಶಿಕ್ಷಣ ಸಚಿವರೂ ಇಲ್ಲದಂತಾಗಿದೆ.

​ಬೆಂಗಳೂರು ಅಭಿವೃದ್ಧಿ ಖಾತೆ ಕೇವಲ 'ಆಟಕ್ಕುಂಟು ಲೆಕ್ಕಕ್ಕಿಲ್ಲ'-
​ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಸಚಿವರಿಗೆ ನೀಡಲಾಗಿದ್ದರೂ
, ನಗರದ ಯೋಜನೆಗೆ ಅತ್ಯಂತ ಪ್ರಮುಖವಾಗಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮತ್ತು ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸಂಸ್ಥೆಗಳನ್ನು ಮುಖ್ಯಮಂತ್ರಿಗಳೇ ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ಹಾಗಾಗಿ ಬೆಂಗಳೂರು ಅಭಿವೃದ್ಧಿ ಸಚಿವರು ಹೆಸರಿಗಷ್ಟೇ ಇದ್ದು, "ಆಟಕ್ಕುಂಟು ಲೆಕ್ಕಕ್ಕಿಲ್ಲ" ಎನ್ನುವಂತಾಗಿದೆ ಎಂದು ಅಶೋಕ್ ಲೇವಡಿ ಮಾಡಿದ್ದಾರೆ.

​"ರಣಹದ್ದುಗಳಂತೆ ಪೈಪೋಟಿ"
​"ಕಾಂಗ್ರೆಸ್ ನಾಯಕರು ಕಣ್ಣಿರುವುದು ಕೇವಲ ಲೂಟಿ ಹೊಡೆಯುವ ಖಾತೆಗಳ ಮೇಲೆ ಮಾತ್ರ! ಸಾವಿರಾರು ಕೋಟಿ ರೂಪಾಯಿಗಳ ಸಂಪನ್ಮೂಲ, ಗುತ್ತಿಗೆ ಮತ್ತು ಕಮಿಷನ್ ದಂಧೆಗೆ ಅನುಕೂಲವಾಗುವ ಖಾತೆಗಳಿಗಾಗಿ ಕಾಂಗ್ರೆಸ್ ನಾಯಕರ ನಡುವೆ ರಣಹದ್ದುಗಳಂತೆ ಭಾರೀ ಪೈಪೋಟಿ ನಡೆಯುತ್ತಿದೆ."
ಆರ್. ಅಶೋಕ್
, ವಿಪಕ್ಷ ನಾಯಕ

​ಸ್ಥಗಿತಗೊಂಡ ಆಡಳಿತ ಯಂತ್ರ-
​ಕಾಂಗ್ರೆಸ್‌ನ ಒಳಜಗಳ ಮತ್ತು ಅಧಿಕಾರದ ಕಿತ್ತಾಟದಿಂದಾಗಿ ಕಳೆದ ಹಲವು ವಾರಗಳಿಂದ ಇಡೀ ರಾಜ್ಯದ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ.

ಈ ಸರ್ಕಾರಕ್ಕೆ ರೈತರ ಸಮಸ್ಯೆಗಳಿಗೆ ಸಮಯವಿಲ್ಲ. ವಿದ್ಯಾರ್ಥಿಗಳ ಭವಿಷ್ಯ ಮತ್ತು ಶಾಲೆಗಳ ದುರಸ್ತಿಗೆ ಆಸಕ್ತಿಯಿಲ್ಲ. ಬೆಂಗಳೂರಿನ ಅವ್ಯವಸ್ಥೆ ಸುಧಾರಿಸುವ ಉದ್ದೇಶವಿಲ್ಲ ಎಂದು ಅವರು ವಾಗ್ದಾಳಿ ಮಾಡಿದ್ದಾರೆ.

​ಕಾಂಗ್ರೆಸ್ ಸರ್ಕಾರದ ಮೊದಲ ಆದ್ಯತೆ ರೈತರು, ವಿದ್ಯಾರ್ಥಿಗಳು ಅಥವಾ ಜನಸಾಮಾನ್ಯರಲ್ಲ; ಬದಲಿಗೆ "ಅಧಿಕಾರ, ಸಂಪನ್ಮೂಲ ಮತ್ತು ಲೂಟಿ" ಮಾತ್ರ ಆಗಿದೆ. ಈ ಲಜ್ಜೆಗೆಟ್ಟ ಅಧಿಕಾರ ದಾಹವನ್ನು ಗಮನಿಸುತ್ತಿರುವ ಕರ್ನಾಟಕದ ಜನತೆ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು 'ನೂರಕ್ಕೆ ನೂರು ಪರ್ಸೆಂಟ್ ಗ್ಯಾರಂಟಿ' ಎಂದು ಅಶೋಕ್ ಭವಿಷ್ಯ ನುಡಿದಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧಆಗಸ್ಟ್ 12ಕ್ಕೆ 'ಶತಮಾನದ ಖಗ್ರಾಸ ಸೂರ್ಯಗ್ರಹಣ': ಭಾರತದಲ್ಲಿ ಗೋಚರವಿಲ್ಲ, ಯಾವುದೇ ಆಚರಣೆ ಅಗತ್ಯವಿಲ್ಲರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್