Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಕ್ರಿಪ್ಟೋ ಕರೆನ್ಸಿ ವಂಚನೆ ಪ್ರಕರಣದಲ್ಲಿ ಆರೋಪಿಯ ಬಂಧನ

ಕ್ರಿಪ್ಟೋ ಕರೆನ್ಸಿ ವಂಚನೆ ಪ್ರಕರಣದಲ್ಲಿ ಆರೋಪಿಯ ಬಂಧನ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2022 ನೇ ಇಸವಿಯ ಏಪ್ರಿಲ್ ತಿಂಗಳಿನಲ್ಲಿ ಬೆಂಗಳೂರಿನ ದೂರುದಾರ ಕಂಪನಿಯಾದ ಸೈಫರ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‍ನಲ್ಲಿ (Cipher Technologies Pvt. Ltd) ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯು ಪಿರ್ಯಾದಿ ಕಂಪನಿಯ ವ್ಯವಹಾರಕ್ಕೆ ಉಪಯೋಗಿಸುತ್ತಿದ್ದ ಕ್ರಿಪ್ಟೋ ಪಾಸ್‍ವರ್ಡ್ ಅನ್ನು ಬದಲಾಯಿಸಿಕೊಂಡು ಕಂಪನಿಯ ಅಕೌಂಟ್‍ನಲ್ಲಿದ್ದ ಕ್ರಿಪ್ಟೋಕರೆನ್ಸಿಯನ್ನು ರೂಪಾಯಿಗೆ ಪರಿವರ್ತಿಸಿಕೊಂಡು ನಂತರ ತನ್ನ ಹಾಗೂ ಇತರೇ ಸ್ನೇಹಿತರ ಅಕೌಂಟ್‍ಗಳಿಗೆ ವರ್ಗಾವಣೆ ಮಾಡಿಕೊಂಡು ಪಿರ್ಯಾದಿ ಕಂಪನಿಗೆ ಸುಮಾರು ಕೋಟಿಗಟ್ಟಲೆ ನಷ್ಟವನ್ನುಂಟುಮಾಡಿ ಮೋಸ ಮಾಡಿರುವ ಬಗ್ಗೆ ಬೆಂಗಳೂರು ನಗರದ ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ಮೊ.ಸಂ.48/2022 ಕಲಂ 66(ಸಿ), 66(ಡಿ), 66(ಇ) ಆಫ್ ಐ.ಟಿ. ಕಾಯ್ದೆ 2000 ಮತ್ತು ಕಲಂ 34, 120(ಬಿ), 403, 406, 408, 420 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆಯ ಸಲುವಾಗಿ ಸಿಐಡಿ ಘಟಕದ ಸೈಬರ್ ಕ್ರೈಂ ವಿಭಾಗಕ್ಕೆ ವರ್ಗಾವಣೆಯಾಗಿರುತ್ತದೆ.

ತನಿಖಾ ಸಮಯದಲ್ಲಿ ಆರೋಪಿತನು ಪಿರ್ಯಾದಿ ಕಂಪನಿಗೆ ಸಂಬಂಧಿಸಿದ ಕ್ರಿಪ್ಟೋ ವಾಲೆಟ್‍ನಿಂದ ಪಿರ್ಯಾದಿ ಕಂಪನಿಯ ಗಮನಕ್ಕೆ ಬಾರದೇ ತನ್ನ, ತನ್ನ ಕುಟುಂಬ ಸದಸ್ಯರ ಹಾಗೂ ತನ್ನ ಸ್ನೇಹಿತರ ಕ್ರಿಪ್ಟೋ ವಾಲೆಟ್‍ಗಳಿಗೆ ಕ್ರಿಪ್ಟೋ ಕರೆನ್ಸಿಯನ್ನು ವರ್ಗಾವಣೆ ಮಾಡಿಕೊಂಡು ನಂತರ ಸದರಿ ಕ್ರಿಪ್ಟೋ ಕರೆನ್ಸಿಯನ್ನು ತನ್ನ ಸ್ನೇಹಿತರ ಹಾಗೂ ಇತರೇ ವ್ಯಕ್ತಿಗಳ ಬ್ಯಾಂಕ್‍ಗಳಿಗೆ ಕ್ರಿಪ್ಟೋ ಎಕ್ಸ್‍ಚೇಂಜ್‍ಗಳ ಮೂಲಕ ನಗದಾಗಿ ಪರಿವರ್ತಿಸಿಕೊಂಡು ವಂಚನೆ ಮಾಡಿರುವುದು ತನಿಖೆಯಲ್ಲಿ ಕಂಡು ಬಂದಿರುತ್ತದೆ.

ತನಿಖೆಯಲ್ಲಿ ಅನ್ವೇಷಿಸಿದ ಮಾಹಿತಿಯ ಆಧಾರದ ಮೇರೆಗೆ ತನಿಖಾಧಿಕಾರಿಯವರು ಆರೋಪಿತನಾದ ಶುಭಾಂಗ್ ಜೈನ್, 26 ವರ್ಷ ಈತನನ್ನು ಮುಂಬೈನಲ್ಲಿ ದಸ್ತಗಿರಿ ಮಾಡಿದ್ದು, ಆರೋಪಿತನಿಂದ 2 ಮೊಬೈಲ್‍ಗಳನ್ನು ಹಾಗೂ 2 ಲ್ಯಾಪ್‍ಟಾಪ್‍ಗಳನ್ನು ಅಮಾನತ್ತುಪಡಿಸಿಕೊಳ್ಳಲಾಗಿದ್ದು, ವಂಚನೆಯ ಹಣವನ್ನು ಅಮಾನತ್ತು ಪಡಿಸಿಕೊಳ್ಳುವ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.

ಈ ಕಾರ್ಯಾಚರಣೆಯಲ್ಲಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖಾಧಿಕಾರಿಯಾದ ಶಿವಪ್ರಸಾದ್, ಡಿಟೆಕ್ಟಿವ್ ಪೆÇಲೀಸ್ ಇನ್ಸ್‍ಪೆಕ್ಟರ್ ಹಾಗೂ ವಿಶ್ವನಾಥ್, ಹೆಚ್.ಸಿ ಅವರುಗಳು ಮುಖ್ಯಪಾತ್ರ ವಹಿಸಿರುತ್ತಾರೆ ಎಂದು ರಾಜ್ಯ ಪೊಲೀಸ್ ಪ್ರಧಾನ ಕಚೇರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಸೂಪರಿಂಟೆಂಡೆಂಟ್ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುಲಿಗುಂದಿ ಸಿದ್ದೇಶ್ವರಸ್ವಾಮಿಗೆ ಶ್ರಾವಣ ಮಾಸದ ವಿಶೇಷ ಪೂಜೆಕಣಿವೆಮಾರಮ್ಮ ದೇವಸ್ಥಾನವನ್ನು ಮುಜರಾಯಿಗೆ ಸೇರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿಹಜ್ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರಚಿಕ್ಕಮ್ಮನಹಟ್ಟಿ ಗ್ರಾಮದ ಯಶೋಧ ಕಣ್ಮರೆ: ಗುರುತು ಪತ್ತೆ ಮನವಿಗೌರಸಮುದ್ರ ಶ್ರೀ ಮಾರಮ್ಮ ಜಾತ್ರೆ: ಸೆ.14 ಮತ್ತು 15 ರಂದು ಮದ್ಯ ಮಾರಾಟ ನಿಷೇಧಸರ್ಕಾರಿ ಯೋಜನೆ ಹೆಸರಲ್ಲಿ ಖಾಸಗಿ ಫೈನಾನ್ಸ್ ವಂಚನೆ- ಎಂ.ಪಿ.ಪ್ರವೀಣ್ ಮನವಿಘಾಟಿ ಸುಬ್ರಮಣ್ಯದ ತೇರಿನ ಬೀದಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಶಿರವಾರ ಗ್ರಾಮದಲ್ಲಿ ಕೃಷಿ ಕೆಲಸದ ಅನುಭವ ಕಾರ್ಯಕ್ರಮಭದ್ರೆಗೆ ಗೋನೂರು ಕೆರೆ ಬಳಿ ಅದ್ದೂರಿ ಸ್ವಾಗತ, ಸಂಸದ, ಹಲವು ಮಠಾಧಿಪತಿಗಳು ಭಾಗಿಇಡಿ ದಾಳಿ: ಸತೀಶ್‌ ಜಾರಕಿಹೊಳಿ ಬೆಂಬಲಕ್ಕೆ ನಿಂತ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌