Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಕಲಿ ಚಿನ್ನ ಗಿರವಿ ಇಟ್ಟು 56 ಲಕ್ಷ ವಂಚಿಸಿದ ಆರೋಪಿಗಳು

Advertisement
ಚಂದ್ರವಳ್ಳಿ ನ್ಯೂಸ್, ಮೈಸೂರು:
ತಮಿಳುನಾಡು ಮೂಲದ ಮರ್ಕೆಂಟೈಲ್ ಬ್ಯಾಂಕ್‌ನಲ್ಲಿ ನಕಲಿ ಚಿನ್ನಾಭರಣಗಳನ್ನು ಗಿರವಿ ಇಟ್ಟು 56.78 ಲಕ್ಷ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಮೈಸೂರು ಜಿಲ್ಲೆಯ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಶಾಖೆಯಲ್ಲಿ ನಡೆದಿರುವ ಕೃತ್ಯ ಬೆಳಕಿಗೆ ಬಂದಿದೆ.


ಈ ಸಂಬಂಧ ಬ್ಯಾಂಕ್ ಸಿಬ್ಬಂದಿ ಸುರೇಶ್ ಕಣ್ಣನ್ ನೀಡಿದ ದೂರಿನ ಆಧಾರದ ಮೇಲೆ ದೇವರಾಜ ಅರಸ್ ಪೊಲೀಸ್ ಠಾಣೆಯಲ್ಲಿ ಏಳು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.


ಮೈಸೂರಿನ ಅಬ್ದುಲ್ ಜಲೀಲ್, ಮಂಡ್ಯದ ಸಾಗರ್, ಪುಟ್ಟರಾಜು, ರವಿಕುಮಾರ್, ಆತನ ಪತ್ನಿ ದಿವ್ಯ, ಬೆಂಗಳೂರಿನ ನಾಗರತ್ನ ರೆಡ್ಡಿ ಹಾಗೂ ಟಿ.ನರಸೀಪುರದ ರವೀಂದ್ರ ಕುಮಾರ್ ಆರೋಪಿಗಳಾಗಿದ್ದಾರೆ.

ರವೀಂದ್ರ ಕುಮಾರ್ ಬ್ಯಾಂಕ್‌ನ ಚಿನ್ನಾಭರಣ ಮೌಲ್ಯಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದು, ವಂಚಕರೊಂದಿಗೆ ಶಾಮೀಲಾಗಿ ನಕಲಿ ಚಿನ್ನಾಭರಣಗಳನ್ನು ಮೌಲ್ಯಮಾಪನ ಮಾಡಿದ್ದಾರೆ ಎನ್ನಲಾಗಿದೆ.


ಆರೋಪಿಗಳು ವಿವಿಧ ಹೆಸರುಗಳಲ್ಲಿ ಒಟ್ಟು 782 ಗ್ರಾಂ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಸಾಲ ಪಡೆದಿದ್ದರು. 2026ರ ಜನವರಿ 26ರಂದು ಮರುಮೌಲ್ಯಮಾಪನ ವೇಳೆ ವಂಚನೆ ಪತ್ತೆಯಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ