Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸಿಎಸ್‌ಪಿ/ಟಿಎಸ್‌ಪಿ  ಅನುದಾನ ಗ್ಯಾರಂಟಿಗೆ ಬಳಕೆ-ಖಂಡನೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕರ್ನಾಟಕ ಸರ್ಕಾರ
  ಎಸಿಎಸ್‌ಪಿ/ಟಿಎಸ್‌ಪಿ  ಅನುದಾನವನ್ನು  7ಸಿ ಅನ್ವಯ ಬೇರೆ ಯೋಜನೆಗಳಿಗೆ ಅಂದರೆ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಾ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ವಂಚನೆಯಾಗಿದೆ ಎಂದು ಅಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ತಾಲ್ಲೂಕು ಅಧ್ಯಕ್ಷ  ನಂಜೇಶ್  ಖಂಡಿಸಿದ್ದಾರೆ.

 ಕರ್ನಾಟಕ ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2023-24ನೇ ಸಾಲಿನಲ್ಲಿ ಎಸಿಎಸ್‌ಪಿ/ಟಿಎಸ್‌ಪಿ ಯೋಜನೆಯಡಿ 34.423 ಕೋಟಿ ರೂ. ಅನುದಾನ ಮತ್ತು 2025-26ನೇ ಸಾಲಿನಲ್ಲಿ 42,017.51 ಕೋಟಿ ರೂ. ಘೋಷಣೆ ಮಾಡಿ, ಪರಿಶಿಷ್ಟ ಜಾತಿ   ವರ್ಗದ ಸಮಾಜವನ್ನು ಅಭಿವೃದ್ಧಿಗೊಳಿಸುವ ಆಶ್ವಾಸನೆ ನೀಡಿದ್ದರು.

ಆದರೆ, ಈಗ ಸರಕಾರದ 5 ಗ್ಯಾರಂಟಿಗಳಾದ ಅನ್ನಭಾಗ್ಯಕ್ಕೆ 1,670.76 ಕೋಟಿ ರೂ., ಯುವ ನಿಧಿ ಗೆ 162 ಕೋಟಿ ರೂ., ಶಕ್ತಿ ಯೋಜನೆಗೆ 1,537 ಕೋಟಿ ರೂ., ಗೃಹ ಜ್ಯೋತಿ ಯೋಜನೆಗೆ 2,626 ಕೋಟಿ ಹಾಗೂ ಗೃಹಲಕ್ಷ್ಮಿಗೆ  7,438.08 ಕೋಟಿ. ಒಟ್ಟು  ರೂ.  11,896.84 ಕೋಟಿ ರೂ.ಗಳನ್ನು ಬಳಕೆ ಮಾಡಲು ಸರಕಾರ ಮುಂದಾಗಿ ರುವುದನ್ನು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಇದ್ದಾಗ ಎಸ್ ಸಿಎಸ್‌ಪಿ/ಟಿಎಸ್‌ಪಿ ಯೋಜನೆ ಜಾರಿಗೆ ತಂದು ಈ ಕಾಯ್ದೆಯನ್ನು ಉಲ್ಲಂಘಿ ಸಿದವರಿಗೆ 6 ತಿಂಗಳು ಜೈಲು ಶಿಕ್ಷೆ ವಿಧಿ ಸುವ ಅವಕಾಶ ಕಲ್ಪಿಸಲಾಗಿತ್ತು. ಆದರೆ, ದೊಡ್ಡ ಪ್ರಮಾಣದಲ್ಲಿ ಎಸ್‌ಸಿಎಸ್ ಪಿ /ಟಿಎಸ್‌ಪಿ ಹಣವನ್ನು ನಿಗದಿತ ಅಭಿವೃದ್ಧಿ ಯೋಜನೆಗಳಿಗೆ ಬಳಸದೆ ಅನ್ಯ ಬಾಬುಗಳಿಗೆ ವರ್ಗಾವಣೆ ಆದ ಪ್ರಕರಣದಲ್ಲಿ ಯಾವೊಬ್ಬ ಅಧಿಕಾರಿಗೂ ಶಿಕ್ಷೆ ಆಗಲಿಲ್ಲ.  

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕಾಗಿ 2023-24 ಮತ್ತು 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಮೀಸಲಿಟ್ಟ ಅನುದಾನವನ್ನು ರಾಜ್ಯ ಸರ್ಕಾರವು ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಬಳಕೆ ಮಾಡಿಕೊಂಡಿರುವುದು ದಲಿತರಿಗೆ ಅನ್ಯಾಯ ಮಾಡಿದಂತಾಗಿದೆ  ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಅನ್ಯ ಉದ್ದೇಶಕ್ಕಾಗಿ ಬಳಸುವುದು ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯನ್ನು ದುರ್ಬಳಕೆ ಮಾಡಿದಂತಾಗಿ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಕಾಯ್ದೆಯ ಉಲ್ಲಂಘನೆಯಾಗಿರುತ್ತದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಶ್ರೇಯೋಭಿವೃದ್ಧಿಗೆ ಬಳಕೆ ಮಾಡಬೇಕಾದ ಅನುದಾನಕ್ಕೆ ಕೊಕ್ಕೆ ಹಾಕಿ ಸರ್ಕಾರದ ವಿವಿಧ ಯೋಜನೆಗಳಿಗೆ ಅನುದಾನವನ್ನು ಬಳಕೆ ಮಾಡುವುದರಿಂದ ತಳಸಮುದಾಯಗಳ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ.

ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಮೀಸಲಿಟ್ಟ ಅನುದಾನವನ್ನು ಯಾವುದಕ್ಕೂ ವರ್ಗಾವಣೆ ಮಾಡುವುದಿಲ್ಲ ಎಂದು ಆಶ್ವಾಸನೆ ನೀಡಿದ ಸರ್ಕಾರ 2023-24 ಮತ್ತು 2024-25ನೇ ಸಾಲಿನಲ್ಲಿ ಒಟ್ಟು 25 ಸಾವಿರ ಕೋಟಿಗಳಿಗೂ ಅಧಿಕ ಮೊತ್ತವನ್ನು ವಿವಿಧ ಯೋಜನೆಗಳ ಅನುಷ್ಠಾನಕ್ಕೆ ವರ್ಗಾವಣೆ ಮಾಡಿರುವುದರಿಂದ ದಲಿತರ ಶ್ರೇಯೋಭಿವೃದ್ಧಿಗೆ ಹಿನ್ನಡೆಯಾಗುತ್ತದೆ. ಎಂದು ಅರೋಪಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ