Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಅತಿಥಿ ಶಿಕ್ಷಕರ ನೇಮಕಕ್ಕೆ ಕ್ರಮ- ಸಚಿವ ಸುಧಾಕರ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶೈಕ್ಷಣಿಕ ವರ್ಷದಲ್ಲಿ ಮೊದಲನೇ ಹಂತದಲ್ಲಿ ಜಿಲ್ಲಾವಾರು ಬೇಡಿಕೆಗೆ ಅನುಗುಣವಾಗಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಕ್ರಮ ವಹಿಸಲಾಗುತ್ತಿದೆ. ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ಈಗಾಗಲೇ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಂಡು ವಿದ್ಯಾರ್ಥಿಗಳ ಪಾಠ ಪ್ರವಚನಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರು ತಿಳಿಸಿದರು.

ಇಂದು ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ   ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರಾದ  ಗೋಪಾಲಯ್ಯ ಇವರ ಪ್ರಶ್ನೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರ ಪರವಾಗಿ ಉತ್ತರಿಸಿದ ಉನ್ನತ ಶಿಕ್ಷಣ ಸಚಿವರು, ಪ್ರಸ್ತುತ ಶೈಕ್ಷಣಿಕ ವರ್ಷದ ವರ್ಗಾವಣೆ ಮತ್ತು ಹೆಚ್ಚುವರಿ ಶಿಕ್ಷಕರ ಮರು ಹೊಂದಾಣಿಕೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು,

ಖಾಲಿ ಇರುವ 38666 ಹುದ್ದೆಗಳಿಗೆ ಎದುರಾಗಿ ಶೇ 90%ನ್ನು 34027 ಅತಿಥಿ ಶಿಕ್ಷಕರನ್ನು (ಪಿ.ಎಸ್.ಟಿ ಮತ್ತು ಜಿಪಿಟಿ ಸೇರಿದಂತೆ) ಮೊದಲನೇ ಹಂತದಲ್ಲಿ ಜಿಲ್ಲಾವಾರು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮಾಡಲಾಗಿದೆ. ಉಳಿದ ಶೇ 10 ಪ್ರಸ್ತುತ ಶೈಕ್ಷಣಿಕ ವರ್ಷದ ವರ್ಗಾವಣೆ ಪ್ರಕ್ರಿಯೆಯ ನಂತರ ಅಗತ್ಯಗೆ ಅನುಗುಣವಾಗಿ ಹುದ್ದೆ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ