E-PAPER
22 Nov 2026, 02:36:34 AM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Districts Chikmagalur

ರಾಹುಲ್ ಗಾಂಧಿ ಪ್ರಧಾನಿಯಾಗುವಂತೆ ಕಾರ್ಯಕರ್ತರು ಶ್ರಮಿಸಬೇಕು; ಸಿದ್ದರಾಮಯ್ಯ

​ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: 
"
2029ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿಯಾಗುವಂತೆ ಮಾಡುವುದು ಕಾಂಗ್ರೆಸ್ ಕಾರ್ಯಕರ್ತರ ಗುರಿಯಾಗಬೇಕು. ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ; ದೇಶದ ನಾಯಕತ್ವ ವಹಿಸಲು ರಾಹುಲ್ ಗಾಂಧಿಯವರಿದ್ದಾರೆ," ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

​ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ ಹಾಗೂ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಮಂಜೇಗೌಡ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

​ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, "2014ರಲ್ಲಿ ಮೋದಿಯವರು ನೀಡಿದ್ದ 'ಅಚ್ಛೇ ದಿನ್', ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಹಾಗೂ ರೈತರ ಆದಾಯ ದುಪ್ಪಟ್ಟು ಮಾಡುವ ಭರವಸೆಗಳು ಹುಸಿಯಾಗಿವೆ. ಮೋದಿ ಅಧಿಕಾರಕ್ಕೆ ಬರುವ ಮುನ್ನ 53 ಲಕ್ಷ ಕೋಟಿ ಇದ್ದ ದೇಶದ ಸಾಲ ಈಗ 214 ಲಕ್ಷ ಕೋಟಿಗೆ ಏರಿಕೆಯಾಗಿದೆ," ಎಂದು ಟೀಕಿಸಿದರು.

​ರಾಜ್ಯಕ್ಕೆ ಆಗಿರುವ ಅನ್ಯಾಯದ ಕುರಿತು ಪ್ರಸ್ತಾಪಿಸಿದ ಅವರು, "ರಾಜ್ಯದ 240 ತಾಲೂಕುಗಳ ಪೈಕಿ 224 ತಾಲೂಕುಗಳಲ್ಲಿ ಭೀಕರ ಬರಗಾಲವಿದ್ದು, 60 ರಿಂದ 62 ಸಾವಿರ ಕೋಟಿ ನಷ್ಟವಾಗಿದೆ. ಎನ್‌ಡಿಆರ್‌ಎಫ್ ಮಾನದಂಡದಂತೆ 21 ಸಾವಿರ ಕೋಟಿ ಪರಿಹಾರಕ್ಕೆ ಮನವಿ ಸಲ್ಲಿಸಿದ್ದರೂ ಕೇಂದ್ರ ಸರ್ಕಾರ ಒಂದು ರೂಪಾಯಿಯನ್ನೂ ನೀಡಿಲ್ಲ. ಅಲ್ಲದೆ, 2023–24ರ ಕೇಂದ್ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಘೋಷಿಸಿದ್ದರೂ ಇದುವರೆಗೂ ಐದು ಪೈಸೆಯನ್ನೂ ಬಿಡುಗಡೆ ಮಾಡಿಲ್ಲ," ಎಂದು ಆರೋಪಿಸಿದರು.

​ಗ್ಯಾರಂಟಿ ಯೋಜನೆಗಳು ಮತ್ತು ಸಮಸಮಾಜದ ಆಶಯ: "ಅಂಬೇಡ್ಕರ್ ಮತ್ತು ಬಸವಣ್ಣನವರ ಸಮಾನತೆಯ ಆಶಯದಂತೆ ಬಡವರು, ಮಹಿಳೆಯರು ಮತ್ತು ಯುವಜನರ ಆರ್ಥಿಕ ಸಬಲೀಕರಣಕ್ಕಾಗಿ ನಮ್ಮ ಸರ್ಕಾರ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಬಿಜೆಪಿ ಶ್ರೀಮಂತರು ಮತ್ತು ಕಾರ್ಪೊರೇಟ್ ಉದ್ಯಮಿಗಳ ಪರ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಸಮಾಜದ ಕಟ್ಟಕಡೆಯ ವ್ಯಕ್ತಿಯ ಬದುಕನ್ನು ಸುಧಾರಿಸಲು ಶ್ರಮಿಸುತ್ತಿದೆ," ಎಂದರು.

​ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಎಚ್ಚರಿಕೆ:
ಮತದಾರರ ಪಟ್ಟಿ ಪರಿಷ್ಕರಣೆಯ ಹೆಸರಿನಲ್ಲಿ ಕರ್ನಾಟಕದಲ್ಲಿ ಸುಮಾರು ಒಂದು ಕೋಟಿ ಮತದಾರರ ಹೆಸರುಗಳು ಕಡಿಮೆಯಾಗಿರುವ ಕುರಿತು ಕಳವಳ ವ್ಯಕ್ತಪಡಿಸಿದ ಸಿದ್ದರಾಮಯ್ಯ, "ಅರ್ಹ ಮತದಾರರು ತಮ್ಮ ಹಕ್ಕಿನಿಂದ ವಂಚಿತರಾಗಬಾರದು. ರಾಹುಲ್ ಗಾಂಧಿಯವರು 'ವೋಟ್ ಚೋರಿ' ವಿರುದ್ಧ ನಡೆಸುತ್ತಿರುವ ಹೋರಾಟಕ್ಕೆ ಪೂರಕವಾಗಿ ಕಾರ್ಯಕರ್ತರು ಮತದಾರರ ಹಕ್ಕು ರಕ್ಷಿಸಲು ಎಚ್ಚರಿಕೆಯಿಂದ ಕೆಲಸ ಮಾಡಬೇಕು," ಎಂದು ಕರೆ ನೀಡಿದರು.

​ಇಂದಿರಾ ಗಾಂಧಿ ಸ್ಮರಣೆ ಹಾಗೂ ಸ್ಥಳೀಯ ಸಂಘಟನೆಗೆ ಕರೆ:
ಚಿಕ್ಕಮಗಳೂರು ಮತ್ತು ಇಂದಿರಾ ಗಾಂಧಿಯವರ ಅವಿನಾಭಾವ ಸಂಬಂಧವನ್ನು ಸ್ಮರಿಸಿದ ಅವರು, 1978ರಲ್ಲಿ ಮೋಟಮ್ಮನವರ ವಿವಾಹದಲ್ಲಿ ಇಂದಿರಾ ಗಾಂಧಿ ಭಾಗವಹಿಸಿದ್ದನ್ನು ಮತ್ತು 'ಗರೀಬಿ ಹಟಾವೋ' ಕಾರ್ಯಕ್ರಮಗಳನ್ನು ನೆನೆದರು. ನಿರ್ಗಮಿತ ಜಿಲ್ಲಾಧ್ಯಕ್ಷ ಅಂಶುಮಂತ್ ಅವರ ಏಳು ವರ್ಷಗಳ ಸೇವೆಯನ್ನು ಶ್ಲಾಘಿಸಿದ ಸಿದ್ದರಾಮಯ್ಯ, ನೂತನ ಅಧ್ಯಕ್ಷ ಮಂಜೇಗೌಡ ಅವರ ನೇತೃತ್ವದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಹಾಗೂ 2028ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವನ್ನು ಪುನರಾವರ್ತಿಸಲು ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸುವಂತೆ ಕರೆ ನೀಡಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪುಸ್ತಕ ಪ್ರೀತಿ ಪ್ರತಿಯೊಬ್ಬರ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿ ಆಗಲಿದೆ : ಟಿ.ಸಿ.ಸುದೀಪಹಾಡೋನಹಳ್ಳಿ ಕೆ ವಿ ಕೆ ವತಿಯಿಂದ ಪ್ರಾತ್ಯಕ್ಷಿಕೆ ಕ್ಷೇತ್ರೋತ್ಸವಹಣಕಾಸು ಸಾಕ್ಷರತ ಜಾಗೃತಿ ಕಾರ್ಯಕ್ರಮಕಾಲೇಜು ಆವರಣದಿಂದಲೇ ವೈದ್ಯಕೀಯ ವಿದ್ಯಾರ್ಥಿನಿಯ ಅಪಹರಣ; ವಿಡಿಯೋ ವೈರಲ್ಅರ್ಹ ರೈತರಿಗೆ ತಕ್ಷಣ 5,000 ರೂ. ತಲುಪಿಸಲು ಡಿಸಿಎಂ ಪರಮೇಶ್ವರ್ ಖಡಕ್ ಸೂಚನೆಕಾವೇರಿ ವಿವಾದ: ತಮಿಳುನಾಡಿಗೆ ಸುಪ್ರೀಂನಲ್ಲಿ ಭಾರಿ ಹಿನ್ನಡೆ, ಕರ್ನಾಟಕಕ್ಕೆ ಕಾನೂನು ಜಯಸುಪ್ರೀಂನಲ್ಲಿ ತಮಿಳುನಾಡಿಗೆ ಮುಖಭಂಗ: ಆದರೂ ಕರ್ನಾಟಕಕ್ಕೆ ಕಾವೇರಿ ನೀರು ಹರಿಸಲು CWRC ಸೂಚನೆ!ಅಮಿತ್ ಶಾ ಭೇಟಿಯಾದ ಕುಮಾರಸ್ವಾಮಿ, ವಿಜಯೇಂದ್ರ: ಹಿರಿಯೂರು ಉಪಚುನಾವಣೆ ಚರ್ಚೆ?ದಾಂಪತ್ಯದ ಸಣ್ಣಪುಟ್ಟ ಜಗಳಗಳು ‘ಕ್ರೌರ್ಯ’ವಲ್ಲ: 18 ದಿನಕ್ಕೇ ವಿಚ್ಛೇದನ ಕೇಳಿದ್ದ ಪತಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಪತ್ನಿಯನ್ನೇ ಕೊಂದು ಚೀಲದಲ್ಲಿ ತುಂಬಿಟ್ಟಿದ್ದ ಎರಡನೇ ಪತಿ ಅರೆಸ್ಟ್!