Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಟ ಕಮಲ್ ಹಾಸನ್ ಗೆ ಕನ್ನಡ ಭಾಷೆಯ ಇತಿಹಾಸ ಗೊತ್ತಿಲ್ಲ-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡ ಭಾಷೆಗೆ ದೀರ್ಘಕಾಲದ ಇತಿಹಾಸವಿದೆ, ನಟ ಕಮಲ್ ಹಾಸನ್ ಗೆ ಕನ್ನಡ ಭಾಷೆಯ ಇತಿಹಾಸ ತಿಳಿದಿರುವಂತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೆಪಿಸಿಸಿಯ ಮಾಜಿ ಸೈನಿಕ ವಿಭಾಗದ ವತಿಯಿಂದ ನಗರದ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಆಯೋಜಿಸಿದ್ದ "ಜೈ ಹಿಂದ್ ಸಭಾ" ಕಾರ್ಯಕ್ರಮದಲ್ಲಿ ಭಾಗಿಯಾಗಿ ತೆರಳುವ ಮುನ್ನ ಅವರು ಮಾತನಾಡಿದರು.

ಕಮಲ್​ ಕ್ಷಮೆಯಾಚನೆಗೆ ಒತ್ತಾಯ:
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಮ್ಮ ಎಕ್ಸ್ ಖಾತೆಯಲ್ಲಿ ಕಮಲ್​ ಹಾಸನ್​ ಹೇಳಿಕೆ ಕುರಿತು ಪೋಸ್ಟ್​ ಮಾಡಿ
, ಮಾತೃಭಾಷೆಯನ್ನು ಪ್ರೀತಿಸಬೇಕು, ಆದರೆ ಅದರ ಹೆಸರಿನಲ್ಲಿ ದುರಭಿಮಾನ ಮೆರೆಯುವುದು ಸಂಸ್ಕೃತಿ ಹೀನ ನಡವಳಿಕೆಯಾಗುತ್ತದೆ. ಅದರಲ್ಲೂ ಕಲಾವಿದರಿಗೆ ಪ್ರತಿಯೊಂದು ಭಾಷೆಯನ್ನೂ ಗೌರವಿಸುವ ಸಂಸ್ಕಾರ ಇರಬೇಕು. ಕನ್ನಡವೂ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ನಟಿಸಿರುವ ನಟ ಕಮಲ್ ಹಾಸನ್ ತಮ್ಮ ತಮಿಳು ಭಾಷೆಯನ್ನು ವೈಭವಿಕರಿಸುವ ಮತ್ತಿನಲ್ಲಿ ನಟ ಶಿವರಾಜ್ ಕುಮಾರ್ ಅವರನ್ನೂ ಕುಳ್ಳಿರಿಸಿಕೊಂಡು ಕನ್ನಡವನ್ನು ಅವಮಾನಿಸಿರುವುದು ಉದ್ಧಟತನ ಹಾಗೂ ದುರಹಂಕಾರದ ಪರಮಾವಧಿಯಾಗಿದೆ ಎಂದು ಹರಿಹಾಯ್ದಿದ್ದಾರೆ.

ಜಗತ್ತಿನ ಭಾಷೆಗಳಲ್ಲಿ ಕನ್ನಡಕ್ಕೆ ಸರ್ವ ಶ್ರೇಷ್ಠ ಮಾನ್ಯತೆ ಇದೆ. ಭಾರತ ಸೇರಿದಂತೆ ವಿಶ್ವದ ಹತ್ತು -ಹಲವು ಕಡೆಗಳಲ್ಲಿ ಕನ್ನಡದ ಹೆಗ್ಗುರುತು ಶತ ಶತಮಾನಗಳಿಂದಲೂ ಪಡಿಮೂಡಿದೆ ಎಂಬ ಕನಿಷ್ಠ ತಿಳಿವಳಿಕೆ ಕಮಲ್ ಹಾಸನ್ ಅವರಂತಹ ಸಂಕುಚಿತ ವ್ಯಕ್ತಿತ್ವವಿರುವ ದುರಾಭಿಮಾನಿ ವ್ಯಕ್ತಿಗಳಿಗೆ ತಿಳಿದಿರಲಿ. ಕನ್ನಡವನ್ನು ಅವಹೇಳನ ಮಾಡುವ ಮುನ್ನ ಕನ್ನಡ ಚಿತ್ರಗಳಲ್ಲೂ ನಟಿಸಿರುವ ಕಮಲ್ ಹಾಸನ್ ಕನ್ನಡ, ಕನ್ನಡಿಗರ ಋಣ ತಮ್ಮ ಮೇಲಿದೆ ಎಂಬ ಔದಾರ್ಯತೆ ಮರೆದಿದ್ದು ಅವರ ಉಪಕಾರ ಸ್ಮರಣೆಯಿಲ್ಲದ ವ್ಯಕ್ತಿತ್ವವನ್ನು ಅನಾವರಣಗೊಳಿಸಿದೆ ಎಂದು ಅವರು ಕಿಡಿಕಾರಿದ್ದಾರೆ.

ಕಮಲ್ ಹಾಸನ್ ಅವರು ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಹಿಂದೂ ಧರ್ಮವನ್ನು ಅವಹೇಳನ ಮಾಡುತ್ತಾ ಧಾರ್ಮಿಕ ಭಾವನೆಗಳಿಗೆ ದಕ್ಕೆ ತರುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಸಾಮರಸ್ಯ ಬೆಸೆಯಬೇಕಾದ ಇವರು ಇದೀಗ ಆರೂವರೆ ಕೋಟಿ ಕನ್ನಡಿಗರ ಸ್ವಾಭಿಮಾನಕ್ಕೆ ಕೊಳ್ಳಿಯಿಟ್ಟು, ಕನ್ನಡವನ್ನು ಅಪಮಾನಿಸಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕೂಡಲೇ ಕಮಲ್ ಹಾಸನ್ ಅವರು ಬೇಷರತ್ ಕನ್ನಡಿಗರ ಕ್ಷಮೆ ಕೇಳಬೇಕು. ಯಾವ ಭಾಷೆಯಿಂದ ಯಾವ ಭಾಷೆ ಹುಟ್ಟಿತು ಎಂಬುದನ್ನು ವ್ಯಾಖ್ಯಾನಿಸಲು ಕಮಲ್ ಹಾಸನ್ ಇತಿಹಾಸ ತಜ್ಞರೇನೂ ಅಲ್ಲ. ಆದರೆ ಎರಡೂವರೆ ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಇರುವ ಕನ್ನಡ ಭಾಷೆ ಭಾರತದ ಭೂಪಟದಲ್ಲಿ ಸಮೃದ್ಧತೆಯನ್ನು ಸಂಕೇತಿಸುತ್ತದೆ, ಸೌಹಾರ್ದತೆಯನ್ನು ಪ್ರತಿನಿಧಿಸುತ್ತಿದೆ. ಕನ್ನಡಿಗರು ಭಾಷಾ ದ್ವೇಷಿಗಳಲ್ಲ, ಆದರೆ ಕನ್ನಡ ನಾಡು, ನುಡಿ, ಜನ, ಜಲ, ವಿಚಾರಗಳು ಬಂದಾಗ ಸ್ವಾಭಿಮಾನವನ್ನು ಎಂದಿಗೂ ಬಲಿ ಕೊಟ್ಟಿಲ್ಲ ಎಂಬ ಸತ್ಯ ವಿವೇಕ ಸುಟ್ಟುಕೊಂಡವರಂತೆ ಮಾತನಾಡಿರುವ ಕಮಲ್ ಹಾಸನ್ ಅವರಿಗೆ ನೆನಪಿರಲಿ ಎಂದಿದ್ದಾರೆ.

ಕಮಲ್ ಹಾಸನ್ ಏನು ಹೇಳಿದ್ದರು?: ಚೆನ್ನೈನಲ್ಲಿ ಮೇ.24ರಂದು ಆಯೋಜಿಸಲಾಗಿದ್ದ ಥಗ್‌ ಲೈಫ್ ಸಿನಿಮಾದ ಆಡಿಯೋ ಲಾಂಚ್‌ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕನ್ನಡದ ನಟ ಶಿವರಾಜ್ ಕುಮಾರ್ ಅವರನ್ನ ಉದ್ದೇಶಿಸಿ ಮಾತನಾಡುತ್ತಾ ಕಮಲ್‌ ಹಾಸನ್ "ಅವರು ಆ ಊರಿನಲ್ಲಿರುವ ನನ್ನ ಕುಟುಂಬ. ಅದಕ್ಕಾಗಿಯೇ ಅವರು ಇಲ್ಲಿ ಬಂದಿದ್ದಾರೆ. ಅದ್ಕಕಾಗಿಯೇ ನಾನು ನನ್ನ ಮಾತು ಆರಂಭಿಸುವುದಕ್ಕೂ ಮುನ್ನ, ಉಸಿರೇ, ತಮಿಳೇ ಎಂದು ಆರಂಭಿಸಿದ್ದೆ. ತಮಿಳಿನಿಂದ ಹುಟ್ಟಿದ್ದೇ ನಿಮ್ಮ ಭಾಷೆ. ಹಾಗಾಗಿ ನೀವು ಅದರಲ್ಲಿ ಭಾಗವಾಗಿದ್ದೀರಿ ಎಂದಿದ್ದರು. ಕಮಲ್ ಹಾಸನ್ ಈ ಹೇಳಿಕೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದನ್ನ ಸ್ಮರಿಸಬಹುದಾಗಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ