Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಖ್ಯಾತ ನಟಿ ಹಾಗೂ ಟಿವಿ ನಿರೂಪಕಿ ಜಾಹ್ನವಿ ಅವರು ಅಧಿಕೃತವಾಗಿ ಜನತಾದಳ (ಜಾತ್ಯತೀತ) ಪಕ್ಷವನ್ನು ಸೇರಿದ್ದಾರೆ.

​ಬೆಂಗಳೂರಿನ ಜೆ.ಪಿ ಭವನದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರು ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಅವರು ಪಕ್ಷದ ಸದಸ್ಯತ್ವ ಪಡೆದರು. ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ ಅವರು ಜಾಹ್ನವಿ ಅವರಿಗೆ ಪಕ್ಷದ ಧ್ವಜವನ್ನು ನೀಡಿ, ಆತ್ಮೀಯವಾಗಿ ಪಕ್ಷಕ್ಕೆ ಸ್ವಾಗತಿಸಿದರು.

​ಪ್ರಮುಖ ಮುಖಂಡರ ಉಪಸ್ಥಿತಿ:
ಈ ಸಂದರ್ಭದಲ್ಲಿ ಪಕ್ಷದ ಹಲವು ಹಿರಿಯ ನಾಯಕರು ಉಪಸ್ಥಿತರಿದ್ದು ಹೊಸ ಸೇರ್ಪಡೆಯನ್ನು ಬರಮಾಡಿಕೊಂಡರು.

ಮಾಜಿ ಶಾಸಕರು ಹಾಗೂ ಗ್ರೇಟರ್ ಬೆಂಗಳೂರು ಜೆಡಿಎಸ್ ಘಟಕದ ಅಧ್ಯಕ್ಷ ಹೆಚ್.ಎಂ ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಟಿ.ಎನ್. ಜವರಾಯಿಗೌಡ,​ ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಮತ್ತಿತರ ಮುಖಂಡರು ಹಾಜರಿದ್ದರು. ​ಮನರಂಜನಾ ರಂಗದಲ್ಲಿ ಗುರುತಿಸಿಕೊಂಡಿದ್ದ ಜಾಹ್ನವಿ ಅವರ ಸೇರ್ಪಡೆಯಿಂದ ಪಕ್ಷದ ಮಹಿಳಾ ಘಟಕಕ್ಕೆ ಮತ್ತು ಬೆಂಗಳೂರು ಭಾಗದಲ್ಲಿ ಜೆಡಿಎಸ್ ಸಂಘಟನೆಗೆ ಮತ್ತಷ್ಟು ಬಲ ಬಂದಂತಾಗಿದೆ ಎಂದು ಈ ಸಂದರ್ಭದಲ್ಲಿ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
‘ಗೃಹಲಕ್ಷ್ಮಿ’ ಯೋಜನೆಯಲ್ಲಿ 100 ಕೋಟಿ ದುರುಪಯೋಗ-ಡಿಸಿಎಂಜಿಂಕೆಯನ್ನು ಜೀವಂತವಾಗಿ ನುಂಗಿದ್ದ ಬೃಹತ್ ಗಾತ್ರದ ಹೆಬ್ಬಾವು ಸೆರೆವೃದ್ಧೆಯನ್ನು ಡಿಜಿಟಲ್​ ಅರೆಸ್ಟ್ ಮಾಡಿ 24 ಕೋಟಿ ರೂ ವಂಚಿಸಿದ್ದ 6 ಆರೋಪಿಗಳ ಬಂಧನಮೇ 29 ರಿಂದಲೇ ರಾಜ್ಯಾದ್ಯಂತ ಶಾಲೆಗಳು ಆರಂಭಸಿಎಂ ಪಟ್ಟದ ಜಿದ್ದಾಜಿದ್ದಿನ ಆಟಕ್ಕೆ ಇತಿಶ್ರೀ ಹಾಡಲು ಅಖಾಡಕ್ಕಿಳಿದ ಎಐಸಿಸಿ ವರಿಷ್ಠರುನೀಟ್ ಪತ್ರಿಕೆ ಸೋರಿಕೆಯಿಂದ ಪಾಠ ಕಲಿಯದಿರುವುದು ಬೇಸರದ ಸಂಗತಿ- ಸುಪ್ರೀಂಖಾಸಗಿ ಆಸ್ಪತ್ರೆ ಶೌಚಾಲಯದಲ್ಲಿ ಗರ್ಭಿಣಿ ಮಹಿಳೆ ಫೋಟೋ/ವಿಡಿಯೋ ಚಿತ್ರೀಕರಣಭಾರೀ ಮಳೆ ಸಾಧ್ಯತೆ, ಚಿತ್ರದುರ್ಗ ಸೇರಿ 7 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್2028ಕ್ಕೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ- ಡಿಸಿಎಂ ಡಿ.ಕೆ ಶಿವಕುಮಾರ್ಭಾರಿ ಪೈಪೋಟಿ ಮತ್ತು ಕುತೂಹಲ ಸೃಷ್ಠಿಸಿದ ರಾಜ್ಯಸಭಾ ಚುನಾವಣೆ