LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆದರ್ಶ ವಿದ್ಯಾಲಯ: ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ವತಿಯಿಂದ 2026-27ನೇ ಸಾಲಿಗೆ  ಚಳ್ಳಕೆರೆ
, ಮೊಳಕಾಲ್ಮುರು ತಾಲ್ಲೂಕುಗಳಲ್ಲಿನ ಅದರ್ಶ ವಿದ್ಯಾಲಯದಲ್ಲಿ ಖಾಲಿ ಉಳಿದಿರುವ 7,8,9ನೇ ತರಗತಿಗೆ ದಾಖಲಾಗಲು ಪ್ರವೇಶ ಪರೀಕ್ಷೆಗೆ ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ನೇರವಾಗಿ ಮುಖ್ಯ ಶಿಕ್ಷಕರಿಗೆ ಅರ್ಜಿ ಸಲ್ಲಿಸಲು ಜೂನ್ 10 ರಿಂದ 17 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಪ್ರವೇಶ ಪರೀಕ್ಷೆಯನ್ನು ಜೂನ್ 22ರಂದು ಬೆಳಿಗ್ಗೆ 10. 30 ರಿಂದ 1 ಗಂಟೆಯವರೆಗೆ ಚಳ್ಳಕೆರೆ ಮತ್ತು ಮೊಳಕಾಲ್ಮುರು ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು.

ಈ ಪರೀಕ್ಷೆಗೆ ಚಳ್ಳಕೆರೆ ಮತ್ತು ಮೊಳಕಾಲ್ಮುರು ತಾಲ್ಲೂಕುಗಳಲ್ಲಿ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆದರ್ಶ ವಿದ್ಯಾಲಯ ಶಾಲೆಯ ಮುಖ್ಯ ಶಿಕ್ಷಕರಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದು.

ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕುಗಳ ಖಾಯಂ ನಿವಾಸಿ ಮಕ್ಕಳು ಬೇರೆ ತಾಲ್ಲೂಕು, ಜಿಲ್ಲೆ, ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿದ್ದರೂ ಸಹ ಮೂಲ ತಾಲ್ಲೂಕಿನಲ್ಲಿ ವ್ಯಾಸಂಗ ಮಾಡಲು ಇಚ್ಛಿಸಿದಲ್ಲಿ ಅರ್ಜಿ ಸಲ್ಲಿಸಬಹುದು.

 ಹೆಚ್ಚಿನ ಮಾಹಿತಿಗಾಗಿ ಡಿಡಿಪಿಐ ಆಡಳಿತ, ಅಭಿವೃದ್ಧಿ, ಬಿ.ಇ.ಓ, ಬಿ.ಆರ್.ಸಿ ಚಳ್ಳಕೆರೆ, ಮೊಳಕಾಲ್ಮೂರು ತಾಲ್ಲೂಕು ಆದರ್ಶ ವಿದ್ಯಾಲಯ ಮುಖ್ಯ ಶಿಕ್ಷಕರು ಇವರನ್ನು ಸಂಪರ್ಕಿಸಬಹುದು ಎಂದು ಡಯಟ್ ಪ್ರಾಚಾರ್ಯ ನಾಸಿರುದ್ದೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭರಮಗಿರಿ ಕೆರೆ ಭಾಗದ ಸುತ್ತಮುತ್ತಲಿನ ಪ್ರದೇಶಗಳಿಗೆ ನೀರಿನ ಸಮಸ್ಯೆ ಪರಿಹಾರಕ್ಕೆ ₹1.25 ಕೋಟಿ ಅನುದಾನ ಕೋರಿ ಮನವಿಪತ್ರ ಸಲ್ಲಿಸಿದ ಸುಹಾಸ್ ಸುಧಾಕರ್ಮುದ್ದನಾಯ್ಕನಪಾಳ್ಯ ಗ್ರಾಮಕ್ಕೆ ಜಿಲ್ಲಾ ಪಂಚಾಯ್ತಿ ಸಿಇಒ ದಿಢೀರ್ ಭೇಟಿ ದೊಡ್ಡ ತುಮಕೂರು, ಕೊಡಿಗೇಹಳ್ಳಿ ಗ್ರಾಪಂಗೆ ಡಾ. ವಾಸಂತಿ ಅಮರ್ ದಿಢೀರ್ ಭೇಟಿಶಿರಾ–ಬಡವನಹಳ್ಳಿ ಚತುಷ್ಪಥ ರಸ್ತೆ ಕಾಮಗಾರಿಗೆ ಗ್ರೀನ್ ಸಿಗ್ನಲ್: ಕೇವಲ 4 ಗಂಟೆಗೆ ತಿರುಪತಿ ತಲುಪಲು ಸಾಧ್ಯ–ಸೋಮಣ್ಣಪಿಜಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ –10 ಮಂದಿಗೆ ಗಂಭೀರ ಗಾಯಬರ ಎದುರಿಸಲು ಸರ್ಕಾರ ಸಿದ್ಧ: ಡಿಸಿಎಂ ಜಿ. ಪರಮೇಶ್ವರ್ಪ್ರಶ್ನೆ ಪತ್ರಿಕೆ ಸೋರಿಕೆ ದೇಶದ ಭವಿಷ್ಯದ ವಿಚಾರ, ಬಿಜೆಪಿಯವರು ವೈಫಲ್ಯ ಒಪ್ಪಿಕೊಳ್ಳಲಿ: ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹನೀಟ್‌ ಪತ್ರಿಕೆ ಸೋರಿಕೆ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ವಿಶೇಷ ಫಾಸ್ಟ್‌ಟ್ರ್ಯಾಕ್ ನ್ಯಾಯಾಲಯ– ಪ್ರಧಾನಿ ಮೋದಿ ಘೋಷಣೆಸೆಮಿಕಂಡಕ್ಟರ್ ವಲಯದಲ್ಲಿ ಕರ್ನಾಟಕದ ಬೃಹತ್ ಜಿಗಿತ': ಸಚಿವ ಎಂ.ಬಿ ಪಾಟೀಲ್'ದೆಹಲಿಯಲ್ಲಿ ಸಂವಿಧಾನದ ಪಾಠ, ರಾಜ್ಯದಲ್ಲಿ ಗೂಂಡಾಗಿರಿ: ಕಾಂಗ್ರೆಸ್‌ ಮೌನಕ್ಕೆ ಅಶೋಕ್ ತೀವ್ರ ತರಾಟೆ'