Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮನೆಯಲ್ಲೇ ಕೂತು ಓದಲು ವಿವಿಧ ಪದವಿ ಕೋರ್ಸುಗಳ ಪ್ರವೇಶಾತಿ ಪ್ರಾರಂಭ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2024-25ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿಗೆ ಪ್ರವೇಶಾತಿ ಆರಂಭಿಸಿದ್ದು, ಸ್ನಾತಕ/ಸ್ನಾತಕೋತ್ತರ ಕೋರ್ಸ್ಗಳಾದ ಬಿ./ಬಿ.ಕಾಂ/ ಬಿ.ಬಿ./ಬಿ.ಸಿ./ ಬಿ.ಎಸ್ಸಿ., ಎಂ./ಎಂ.ಸಿ.ಜೆ/ಎಂ.ಕಾಂ., ಬಿ.ಎಲ್..ಎಸ್ಸಿ.,  ಎಂ.ಎಲ್..ಎಸ್ಸಿ., ಎಂ.ಎಸ್ಸಿ. ಎಂ.ಬಿ.., ಪಿ.ಜಿ. ಸರ್ಟಿಫಿಕೇಟ್ ಪ್ರೋಗ್ರಾಮ್ಸ್.,  ಡಿಪ್ಲೋಮಾ ಪ್ರೋಗ್ರಾಮ್ಸ್.,  ಸರ್ಟಿಫಿಕೇಟ್ ಪ್ರೋಗ್ರಾಮ್ಸ್ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಲ್ಲೇಶ್ವರಂನ  ಪ್ರಾದೇಶಿಕ ಕೇಂದ್ರದಲ್ಲಿ ಮಹಿಳಾ ಮತ್ತು ಪುರುಷ ವಿದ್ಯಾರ್ಥಿಗಳಿಗೆ ಪ್ರವೇಶಾತಿಗೆ ಅವಕಾಶ ಕಲ್ಪಿಸಿದೆ.

ಅರ್ಜಿಗಳನ್ನು ಅಧಿಕೃತ ವೆಬ್ಸೈಟ್ www.ksoumysuru.ac.in ನಲ್ಲಿ ಕೆಎಸ್ಒಯು ಪ್ರವೇಶ ಪೋರ್ಟಲ್  ಮೂಲಕ ಪದವಿಗಳಿಗೆ ಆನ್ಲೈನ್ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಆನ್ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬಹುದಾಗಿದೆ.


ಬಿ.ಪಿ.ಎಲ್. ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ / ಕ್ಯಾಬ್ ಚಾಳಕರು ಮತ್ತು ಅವರ ಮಕ್ಕಳಿಗೆ, ಕೆಎಸ್ಆರ್ಟಿಸಿ, ಬಿಎಂಟಿಸಿ, ಕೆಡಬ್ಲ್ಯೂಕೆಆರ್ಟಿಸಿ, ಕೆಕೆಆರ್ಟಿಸಿ, ನೌಕರರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ನೀಡಲಾಗಿದೆ.

ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಮೃತರಾದ ಪೋಷಕರ ಮಕ್ಕಳಿಗೆ, ತೃತೀಯ ಲಿಂಗದ ವಿದ್ಯಾರ್ಥಿಗಳಿಗೆ, ದೃಷ್ಟಿಹೀನ ವಿದ್ಯಾಥಿಗಳಿಗೆ (ಬಿ.ಇಡಿ, ಎಂಬಿಎ ಹೊರತುಪಡಿಸಿ) ಎಸ್ಸಿ/ಎಸ್ಟಿ/ಒಬಿಸಿ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ ಎಸ್ಎಸ್ಪಿ ಮುಖಾಂತರ ವಿದ್ಯಾರ್ಥಿವೇತನವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಶಶಿಕಲಾ ಜೆ, ಪ್ರಾದೇಶಿಕ ನಿರ್ದೇಶಕರು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮಹಿಳಾ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, 4ನೇ ಮುಖ್ಯ ರಸ್ತೆ, 13ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-03 ಹಾಗೂ ಕಛೇರಿ ದೂರವಾಣಿ ಸಂಖ್ಯೆ - 080 23448811, 9741197921, 9620395584, 7760848564ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ಶಶಿಕಲಾ. ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ