Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಾವಯವ ಕೃಷಿ ಅಳವಡಿಕೆ ಅನಿವಾರ್ಯ- ಆರ್.ರಜನಿಕಾಂತ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮುಂದಿನ ಪೀಳಿಗೆಗೆ ಫಲವತ್ತಾದ ಮಣ್ಣು ಮತ್ತು ಆರೋಗ್ಯಕರ ಪರಿಸರ ಉಳಿಸಿಕೊಡಲು ರೈತರು ಸಾವಯವ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು ಇಂದಿನ ಅನಿವಾರ್ಯತೆಯಾಗಿದೆ ಎಂದು ಬಬ್ಬೂರುಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನಿಕಾಂತ ತಿಳಿಸಿದರು.

ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಈಚೆಗೆ ರಾಜ್ಯ ವಲಯ ಕೃಷಿ ಆಯುಕ್ತಾಲಯ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಆಸಕ್ತ ರೈತರಿಗಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ರೈತರಿಗೆ ಉತ್ತಮ ಪರಿಸರ ಮತ್ತು ಆರೋಗ್ಯಕ್ಕಾಗಿ ಔಷಧಿಯ ಸಸ್ಯಗಳು, ಸಾವಯವ ಕೃಷಿ ಹಾಗೂ ಜೇನು ಕೃಷಿಯ ಕುರಿತು ಹಮ್ಮಿಕೊಳ್ಳಲಾಗಿದ್ದ ಮೂರು ದಿನಗಳ ಉಚಿತ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

Advertisement

  ರೈತ ಬಾಂಧವರು ತಮ್ಮ ಕ್ಷೇತ್ರದಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಕಡಿಮೆ ವೆಚ್ಚದಲ್ಲಿ ಪರಿಸರ ಸ್ನೇಹಿ ಕೃಷಿಯಲ್ಲಿ ತೊಡಗಿಸಿಕೊಂಡರೆ ಸುಸ್ಥಿರ ಇಳುವರಿ ಪಡೆಯಲು ಸಾಧ್ಯ ಎಂದರು.

ತರಬೇತಿಯ ಮೊದಲನೇ ದಿನ ಚಿತ್ರದುರ್ಗ ಆಯುಷ್ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ. ಜಿ.ಬಿ.ನಾರದಮುನಿ ಅವರು, ವಾಣಿಜ್ಯ ಬೆಳೆಯಾಗಿ ಔಷಧೀಯ ಸಸ್ಯಗಳು ಮತ್ತು ಅವುಗಳ ಉಪಯೋಗಗಳ ಬಗ್ಗೆ ವಿವರಿಸಿದ್ದಲ್ಲದೆ, ರೈತರ ಆತ್ಮಸ್ಥೈರ್ಯ ಹೆಚ್ಚಿಸುವ ವಿಷಯಗಳ ಕುರಿತು ಮಾಹಿತಿ ನೀಡಿದರು. ನಂತರ ಬ್ಯಾಡರಹಳ್ಳಿ ಗ್ರಾಮದ ಪ್ರಗತಿಪರ ಸಾವಯವ ಕೃಷಿಕ ಇಂದೂಧರ ಅವರು ತಮ್ಮ ಜಮೀನಿನಲ್ಲಿ ಅಳವಡಿಸಿಕೊಂಡಿರುವ ಸಾವಯವ ಕೃಷಿ ಪದ್ಧತಿಗಳು, ನೀರು, ಫೋಷಕಾಂಶ ಹಾಗೂ ರೋಗ ಮತ್ತು ಕೀಟ ನಿರ್ವಹಣಾ ಕ್ರಮಗಳನ್ನು ಎರಡನೇ ದಿನ ಮೇಟಿಕುರ್ಕೆಯ ಪ್ರಗತಿಪರ ಜೇನು ಕೃಷಿಕ ಶಾಂತವೀರಯ್ಯ ಅವರು ಪರಿಸರದಲ್ಲಿ ಜೀವ ವೈವಿಧ್ಯತೆ ಕಾಪಾಡಲು ಹಾಗೂ ವಿವಿಧ ಬೆಳೆಗಳಲ್ಲಿ ಉತ್ತಮ ಇಳುವರಿ ಪಡೆಯಲು ರೈತರು ತಮ್ಮ ತಾಕಿನಲ್ಲಿ ಜೇನು ಕೃಷಿ ಕೈಗೊಳ್ಳುವಂತೆ ತಮ್ಮ ಅನುಭವಗಳನ್ನು ಹಂಚಿಕೊಂಡರು.

ಮದಕರಿಪುರದ ನೋರಾ ಅಗ್ರೋಟೆಕ್‍ನ ಕುಮಾರ್ ಎಂ.ಡಿ ಅವರು ವಿವಿಧ ಔಷಧೀಯ ಸಸ್ಯಗಳ ಒಪ್ಪಂದ ಕೃಷಿ, ಮಾರುಕಟ್ಟೆ ಮತ್ತು ಸಂಸ್ಕರಣೆ ಕುರಿತು ಮಾಹಿತಿ ನೀಡಿದರೆ, ಮೆಹಬೂಬ್ ಅವರು ಮಣ್ಣಿನ ಫಲವತ್ತತೆ ಮತ್ತು ಕಳೆ ನಿಯಂತ್ರಣಕ್ಕಾಗಿ ತೋಟಗಳಲ್ಲಿ ‘ವೆಲ್ವೆಟ್ ಬೀನ್ಸ್' ಅನ್ನು ಹಸಿರೆಲೆ ಗೊಬ್ಬರವಾಗಿ ಬೆಳೆಯುವಂತೆ ಹಾಗೂ ಅದರ ಬೀಜ ಮಾರಾಟದಿಂದ ಲಾಭ ಗಳಿಸುವ ವಿಧಾನ ತಿಳಿಸಿಕೊಟ್ಟರು.

ಮೂರನೇ ದಿನ ರೈತರು ಪ್ರಗತಿಪರ ಕೃಷಿಕ ಇಂದೂಧರ ಅವರ ಸಾವಯವ ಕೃಷಿ ತಾಕಿಗೆ ಭೇಟಿ ನೀಡಿ ಕಂದಕ ಬದು, ಭೂಮಿಯ ಮುಚ್ಚಿಗೆ, ಜೀವಾಮೃತ, ಅಮೃತಜಲ ಮತ್ತು ಎರೆಹುಳ ಗೊಬ್ಬರ ತಯಾರಿಕೆಯ ಕುರಿತು ಪ್ರತ್ಯಕ್ಷ ಮಾಹಿತಿ ಪಡೆದರು. ಬಳಿಕ ಬಿಜಿಕೆರೆಯ ಡಾ. ವೀರಭದ್ರಪ್ಪ ಅವರ ‘ವಸುಂದರ ಫಾರಂ'ಗೆ ಅಧ್ಯಯನ ಪ್ರವಾಸ ಕೈಗೊಳ್ಳಲಾಯಿತು.

 ಈ ವೇಳೆ ಮಾತನಾಡಿದ ಡಾ. ವೀರಭದ್ರಪ್ಪ, ‘ರೈತರು ಕೇವಲ ಏಕಬಳೆ ಪದ್ಧತಿಯನ್ನು ನಂಬಿ ಕೂರದೆ, ವೈಜ್ಞಾನಿಕ ತಾಂತ್ರಿಕ ಮಾಹಿತಿ ಪಡೆದು ತಮ್ಮ ಪರಿಸರಕ್ಕೆ ತಕ್ಕಂತೆ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡರೆ ಆರ್ಥಿಕವಾಗಿ ಲಾಭ ಗಳಿಸಬಹುದು ಎಂದು ತಮ್ಮ ಅನುಭವಗಳನ್ನು ಹಂಚಿಕೊಂಡರು. ಕೊನೆಯದಾಗಿ ಮೀರಾಸಾಬಿ ಹಳ್ಳಿಯ ನೋರಾ ಅಗ್ರೋಟೆಕ್ ಕಂಪನಿಯ ಒಪ್ಪಂದ ಕೃಷಿಯಡಿ ಬೆಳೆದ ನುಗ್ಗೆ ತೋಟಕ್ಕೆ ಭೇಟಿ ನೀಡಿದ ರೈತರು, ಔಷಧೀಯ ಸಸ್ಯವಾಗಿ ನುಗ್ಗೆ ಸೊಪ್ಪಿನ ಕೃಷಿ ಮಾಡುವ ಕುರಿತು ಮಹತ್ವದ ಮಾಹಿತಿ ಪಡೆದುಕೊಂಡರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ